Advertisement

ದ್ವೇಷ ರಾಜಕಾರಣ ಮುಂದುವರಿಕೆ: ಆರೋಪ

01:26 AM May 28, 2019 | Team Udayavani |

ಬೆಂಗಳೂರು: ಮಾಧ್ಯಮಗಳ ಮೇಲೆ ಸಿಟ್ಟು ತೀರಿಸಿಕೊಳ್ಳುವ ಮೂಲಕ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ದ್ವೇಷ ರಾಜಕಾರಣ ಮುಂದುವರಿ ಸಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಪರವಾಗಿ ಭಾವನೆಗಳನ್ನು ವ್ಯಕ್ತಪಡಿಸಿದ ಬಿಜೆಪಿ ಅಭಿಮಾನಿಗಳು ಮತ್ತು ಕಾರ್ಯಕರ್ತರ ವಿರುದ್ಧ ಈಗಾಗಲೇ ದೂರು ದಾಖಲಿಸಿ ಜೈಲಿಗೆ ಕಳಿಸುವ ಹತಾಶ ಕ್ರಮ ಮೈತ್ರಿ ಸರ್ಕಾರ ಕೈಗೊಂಡಿದೆ. ಪತ್ರಕರ್ತರ ವಿರುದ್ಧವೂ ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿಗಳು ದ್ವೇಷ ರಾಜಕಾರಣ ಮುಂದುವರಿಸಿದ್ದಾರೆ ಎಂದು ದೂರಿದರು. ಮಾಧ್ಯಮದ ಪ್ರಮುಖ ವ್ಯಕ್ತಿಗಳು, ಅಂಕಣಕಾರರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದ ಮೈತ್ರಿ ಸರ್ಕಾರದ ದ್ವೇಷ ರಾಜಕಾರಣವು ಇನ್ನೂ ನಿಂತಿಲ್ಲ. ರಾಜ್ಯದ ಪ್ರಮುಖ ಪತ್ರಿಕೆಯೊಂದರ ಪ್ರಧಾನ ಸಂಪಾದಕರ ಮೇಲೆ ದೂರು ದಾಖಲಿಸಿ, ಆರೋಪ ಪಟ್ಟಿ ಸಲ್ಲಿಸಲಾಗಿದೆ. ಮುಖ್ಯಮಂತ್ರಿಗಳ ಕೀಳು ಮಟ್ಟದ ರಾಜಕಾರಣಕ್ಕೆ ಇದು ಕೈಗನ್ನಡಿಯಾಗಿದೆ ಎಂದು ಆರೋಪಿಸಿದರು.

Advertisement

ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಪತ್ರಿಕಾ ಸ್ವಾತಂತ್ರದ ಪರ ಹೋರಾಟ ನಡೆಸಿ ಎಚ್.ಡಿ.ದೇವೇಗೌಡರು ಜೈಲಿಗೆ ಹೋಗಿದ್ದನ್ನು ಕುಮಾರಸ್ವಾಮಿ ಮರೆತಿ ದ್ದಾರೆಯೇ? ಈ ಎಲ್ಲಾ ವಿಷಯಗಳನ್ನು ಗಮನಿಸಿದರೆ ರಾಜ್ಯದಲ್ಲಿ ಮತ್ತೂಮ್ಮೆ ತುರ್ತು ಪರಿಸ್ಥಿತಿಯ ವಾತಾವರಣ ನಿರ್ಮಾಣ ವಾಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ ಎಂದು ಮೈತ್ರಿ ಸರ್ಕಾರದ ವಿರುದ್ಧ ಕಿಡಿ ಕಾರಿದರು. ರಾಜ್ಯದ ಪತ್ರಿಕೆಯೊಂದರ ಸಂಪಾದಕರ ಮೇಲೆ ದಾಖಲಿಸಿರುವ ಮೊಕದ್ದಮೆಯನ್ನು ವಾಪಸ್‌ ಪಡೆಯಬೇಕು, ರಾಜ್ಯದ ಜನತೆಯಲ್ಲಿ ಮುಖ್ಯ ಮಂತ್ರಿಗಳು ಬೇಷರತ್‌ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next