Advertisement

Hathras: ಹೆದ್ದಾರಿಯಲ್ಲಿ ಮಿನಿ ಟ್ರಕ್‌ – ಬಸ್ ಅಪಘಾತ: 15 ಮಂದಿ ದುರ್ಮರಣ,16 ಜನರಿಗೆ ಗಾಯ

10:55 PM Sep 06, 2024 | Team Udayavani |

ಹಥ್ರಾಸ್‌ (ಉತ್ತರ ಪ್ರದೇಶ) : ರಾಷ್ಟ್ರೀಯ ಹೆದ್ದಾರಿ 93ರಲ್ಲಿ ಮಿನಿ ಟ್ರಕ್‌ – ಬಸ್ ಡಿಕ್ಕಿ ಹೊಡೆದ ಪರಿಣಾಮ  15 ಮಂದಿ ಮೃತಪಟ್ಟಿದ್ದು, 16 ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.

Advertisement

ಬಸ್‌ ಪ್ರಯಾಣಿಕರು ಹಥ್ರಾಸ್‌ನಿಂದ ಆಗ್ರಾಕ್ಕೆ ತೆರಳುತ್ತಿದ್ದರು. ಮಿನಿ ಲಾರಿಯಲ್ಲಿದ್ದವರು ಊಟ ಮುಗಿಸಿ ಸೇವಾಲ ಗ್ರಾಮಕ್ಕೆ ಹಿಂತಿರುಗುತ್ತಿದ್ದರು. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಮಾಹಿತಿಯ ಪ್ರಕಾರ, ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಮಾಹಿತಿ ಬಂದ ಕೂಡಲೇ ಹತ್ರಾಸ್ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಆಸ್ಪತ್ರೆಗೆ ತಲುಪಿದ್ದಾರೆ .

ಅಪಘಾತಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅಲಿಘರ್‌ ಜಿಲ್ಲಾಧಿಕಾರಿ ಚೈತ್ರಾ ವಿ. ” ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಪ್ರಸ್ತುತ 15 ಮಂದಿ ಮೃತಪಟಿದ್ದು, ಅದರಲ್ಲಿ 7 ಮಂದಿ ಪುರುಷರು, ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು ಮೃತಪಟ್ಟಿದ್ದಾರೆ ಎಂದು ತಿಳಿಸಿದರು.

“ಆಗ್ರಾ – ಆಲಿಘರ್‌  ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಅನ್ನು ಓವರ್‌ಟೇಕ್ ಮಾಡಲು ಪ್ರಯತ್ನಿಸುವಾಗ ಬಸ್ ವ್ಯಾನ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ”. ಮೃತರನ್ನು ಮತ್ತು ಅಪಘಾತಕ್ಕೆ ಕಾರಣರಾದವರ ಗುರುತಿಸುತ್ತಿದ್ದೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ನಿಪುನ್ ಅಗರ್ವಾಲ್ ಹೇಳಿದ್ದಾರೆ. ಪ್ರಾಣ ಕಳೆದುಕೊಂಡವರ ಗುರುತಿಸಲು ಪ್ರಯತ್ನಿಸುತ್ತಿದ್ದು, ಘಟನೆಯಲ್ಲಿ ಪ್ರಾಣ ಕಳೆದುಕೊಂಡವರಲ್ಲಿ ನಾಲ್ವರು ಮಕ್ಕಳೂ ಸೇರಿದ್ದಾರೆ ಎಂದು ಹೇಳಿದರು.

Advertisement

ಪ್ರಧಾನಿ ಮೋದಿ ಸಂತಾಪ ಪರಿಹಾರ ಘೋಷಣೆ, ಸಿಎಂ ಯೋಗಿ ಸಂತಾಪ:  

ರಾಷ್ಟ್ರೀಯ ಹೆದ್ದಾರಿ 93ರಲ್ಲಿ ಭೀಕರ ಅಪಘಾತ ಉಂಟಾಗಿ ಕನಿಷ್ಠ 15 ಮಂದಿ ಮೃತಪಟ್ಟಿರುವುದಕ್ಕೆ ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ)  ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿ, ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50ಸಾವಿರ ರೂಪಾಯಿ  (ಪಿಎಂಎನ್‌ಆರ್‌ಎಫ್‌) ಪರಿಹಾರ ಘೋಷಿಸಿದ್ದಾರೆ.  ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಪಘಾತದ ಬಗ್ಗೆ ತಿಳಿದು ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಪರಿಹಾರ ಕಾರ್ಯವನ್ನು ತ್ವರಿತಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next