Advertisement

ಮಕ್ಕಳ ಕಲಿಕಾ ಹಂತದಲ್ಲಿ ಗುಣಮಟ್ಟ ಶಿಕ್ಷಣ ಸಿಗಲಿ

05:07 PM Sep 30, 2021 | Team Udayavani |

ಯಾದಗಿರಿ: ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಮಕ್ಕಳ ಕಲಿಕೆಯ ಪ್ರಾರಂಭದ ಹಂತದಲ್ಲಿಯೇ ಗುಣಮಟ್ಟ ಶಿಕ್ಷಣ ಅಗತ್ಯದ ಜೊತೆಗೆ ಉತ್ತಮ ಪರಿಸರದೊಂದಿಗೆ ಬೆಳೆಯುವುದು ಮುಖ್ಯವಾಗಿದೆ ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಡಾ| ಅಂತೋಣಿ ಸೆಬಾಸ್ಟಿಯನ್‌ ಹೇಳಿದರು.

Advertisement

ಇಲ್ಲಿನ ಜಿಲ್ಲಾಡಳಿತ, ಜಿಪಂ, ಮಕ್ಕಳ ಮತ್ತು ಮಹಿಳಾ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ವಿವಿಧ ಇಲಾಖೆಗಳು ಮತ್ತು ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಬುಧವಾರ ಜಿಪಂ ಸಭಾಂಗಣದಲ್ಲಿ ಆರ್‌.ಟಿ.ಇ 2009, ಪೋಕ್ಸೊ 2012 ಹಾಗೂ ಬಾಲ ನ್ಯಾಯ ಕಾಯ್ದೆ 2015ರ ಅನುಷ್ಠಾನದ ಪಗ್ರತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಶಿಕ್ಷಣದಿಂದ ವಂಚಿತರಾದ ಮಕ್ಕಳನ್ನು ಮರಳಿ ಶಾಲೆಗೆ ತರುವಂತಹ ಪ್ರಯತ್ನಗಳು ಅಧಿಕಾರಿಗಳಿಂದ ಆಗಬೇಕು. ಶಾಲೆಗಳಲ್ಲಿ ಮೂಲ ಸೌಕರ್ಯಗಳನ್ನು ಸಂಪೂರ್ಣ ಒದಗಿಸುವುದರ ಜೊತೆಗೆ ಮಕ್ಕಳ ಸಂರಕ್ಷಣೆ ಮುಖ್ಯವಾಗಿದೆ. ಕುಡಿಯುವ ನೀರಿನ ಸಮಸ್ಯೆ, ಶೌಚಾಲಯದ ಸಮಸ್ಯೆ ಹಾಗೂ ಶಿಕ್ಷಕರ ಕೊರತೆಯನ್ನು ಆದಷ್ಟು ಬೇಗ ಬಗೆಹರಿಸಬೇಕು. ಸರಿಯಾದ ಸಮಯಕ್ಕೆ ಸರಿಯಾದ ಶಿಕ್ಷಣ ನೀಡುವುದರಿಂದಾಗಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗುತ್ತದೆ ಎಂದರು.

ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್‌. ಮಾತನಾಡಿ, ಮಕ್ಕಳ ಸಹಾಯವಾಣಿ ಸೇವೆ: 1098 ಇದು ರಾಷ್ಟ್ರ ವ್ಯಾಪ್ತಿಯಲ್ಲಿ ಚಾಲ್ತಿಯಲ್ಲಿರುವ ಮಕ್ಕಳ ಸಹಾಯವಾಣಿ ಬಾಲ್ಯ ವಿವಾಹ, ಬಾಲ ಕಾರ್ಮಿಕರು, ಭಿಕ್ಷಾಟನೆ, ಮಕ್ಕಳ ಮಾರಾಟ, ಕಾಣೆಯಾದ ಮಕ್ಕಳು, ನಿರ್ಗತಿಕ ಮಕ್ಕಳು, ಬೀದಿ ಮಕ್ಕಳು, ವಲಸೆ ಮಕ್ಕಳು, ವಿಕಲ ಚೇತನ ಮಕ್ಕಳು, ಮಾದಕ ವಸ್ತುಗಳ ವ್ಯಸನಿ ಮಕ್ಕಳು, ಹಿಂಸೆ ಮತ್ತು ದೌರ್ಜನ್ಯಕ್ಕೆ ಒಳಗಾದ 18 ವರ್ಷದೊಳಗಿನ ಸಂಕಷ್ಟದಲ್ಲಿ ಸಿಲುಕಿರುವ/ರಕ್ಷಣೆ ಮತ್ತು
ಪೋಷಣೆಗೆ ಅವಶ್ಯಕತೆ ಇರುವ ಮಕ್ಕಳಿಗೆ ತುರ್ತುಸೇವೆ ಒದಗಿಸಲು ಈ ಸಂಖ್ಯೆಗೆ ಕರೆ ಮಾಡುವ ಮೂಲಕ ನೆರವು ಪಡೆಯಬಹುದಾಗಿದೆ.

ಜಿಪಂ ಸಿಇಒ ಶಿಲ್ಪಾ ಶರ್ಮಾ ಮಾತನಾಡಿ, ವಸತಿ ಶಾಲೆಗಳಲ್ಲಿರುವ ಕುಡಿಯುವ ನೀರಿನ ಸಮಸ್ಯೆ, ಶೌಚಾಲಯಗಳ ದುರಸ್ತಿ ಹಾಗೂ ನ್ಯಾಪ್‌ಕೀನ್‌ ಬರ್ನಿಂಗ್ ಮಷಿನ್‌ ಗಳನ್ನು ವಿತರಿಸುವ ಕುರಿತು ಕಮಿಷನರ್‌ ಗಳ ಜೊತೆ ಚರ್ಚಿ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದು ಹೇಳಿದರು.

Advertisement

ಸಭೆಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಂಕರಪ್ಪ ಡಿ, ಅಶೋಕ.ಜಿ. ಯರಗಟ್ಟಿ, ಭಾರತೀ, ಜಯಶ್ರೀ ಮಾತನಾಡಿದರು. ಈ ಸಂದರ್ಭದಲ್ಲಿ ಮಕ್ಕಳ ಹಕ್ಕುಗಳ ರಕ್ಷ‚ಣಾ ಆಯೋಗದ ಸದಸ್ಯರಾದ ರಾಘವೇಂದ್ರ ಎಚ್‌.ಸಿ, ಪರಶುರಾಮ ಎಂ.ಎಲ್‌, ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಎಸ್ಪಿ ಸಿ.ಬಿ. ವೇದಮೂರ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರಭಾಕರ.ಕೆ., ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಲ್ಲಪ್ಪ ದೇಸಾಯಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಹಣಮಂತ್ರಾಯ ಕರಡಿ, ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾದ ಚಂದ್ರಶೇಖರ ಲಿಂಗದಹಳ್ಳಿ, ಮಾಳಪ್ಪ ವಂಟೂರ, ಬಿ.ಜಿ. ಪಾಟೀಲ್‌ ಹಾಗೂ ಗೀತಾ.ಜಿ.ಎಚ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next