Advertisement

ಉತ್ತರ ಪ್ರದೇಶ ವಿಧಾನ ಸಭಾ ಚುನಾವಣೆ : ಮೈತ್ರಿ ಬಗ್ಗೆ ಪಕ್ಷ ಮುಕ್ತವಾಗಿದೆ : ಪ್ರಿಯಾಂಕ ಗಾಂಧಿ

05:46 PM Jul 18, 2021 | Team Udayavani |

ಲಕ್ನೋ : ಉತ್ತರಪ್ರದೇಶ ವಿಧಾನಸಭಾ ಚುನಾವಣೆಗೆ ಇತರ ರಾಜಕೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ತಮ್ಮ ಪಕ್ಷವು ಮುಕ್ತವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಹಾಗೂ ಉತ್ತರ ಪ್ರದೇಶದ ಪೂರ್ವ ಭಾಗದ ಕಾಂಗ್ರೆಸ್  ಉಸ್ತುವಾರಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ಹೇಳಿದ್ದಾರೆ.

Advertisement

ಉತ್ತರ ಪ್ರದೇಶದ 403 ವಿಧಾನ ಸಭಾ ಕ್ಷೇತ್ರಗಳ  ಚುನಾವಣೆಯನ್ನು ಕಾಂಗ್ರೆಸ್ ಪಕಕ್ಷವೊಂದೆ ಎದುರಿಸಲಿದೆಯೇ ಅಥವಾ ಇತೆರೆ ರಾಜಕೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತದೆಯೇ ಎಂಬ ಪ್ರಶ್ನೆಗೆ ಅನೌಪಚಾರಿಕ ಸಭೆಯಲ್ಲಿ ಉತ್ತರಿಸದ ಪಕ್ಷದ ಪ್ರಧಾನ ಕಾರ್ಯದರ್ಶಿ, ಸದ್ಯಕ್ಕೆ ಪಕ್ಷ ಏನೂ ಆ ಬಗ್ಗೆ ಚಿಂತನೆ ಮಾಡಿಲ್ಲ. ಚುನಾವಣೆಯನ್ನು ಎದುರಿಸಲು ಕಾಂಗ್ರೆಸ್ ಪಕ್ಷ ತಯಾರಾಗುತ್ತಿದೆ. ಮೈತ್ರಿ ವಿಚಾರ ಮಾತಾನಾಡುವುದಕ್ಕೆ ಇನ್ನೂ ಚುನಾವಣೆಗೆ ತುಂಬಾ ದಿನಗಳಿವೆ ಎಂದಿದ್ದಾರೆ.

ಇದನ್ನೂ ಓದಿ : ಶರದ್ ಪವಾರ್ ಬಿಜೆಪಿಯೊಂದಿಗೆ ಸೇರಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಬೇಕು: ಅಠಾವಳೆ

ಮೈತ್ರಿಯ ವಿಚಾರವನ್ನು ಅಲ್ಲಗಳೆಯುವುದಿಲ್ಲ. ನಾವು ಮುಕ್ತ ಮನಸ್ಸನ್ನು ಹೊಂದಿದ್ದೇವೆ. ಬಿಜೆಪಿ ಪಕ್ಷವನ್ನು ಅಧಿಕಾರ ಹಿಡಿಯಲು ಬಿಡಬಾರದು ಎಂಬ ಕಾರಣಕ್ಕೆ ನಾವು ಪ್ರಯತ್ನ ಪಡುತ್ತಿದ್ದೇವೆ. ಮೈತ್ರಿ ಬಗ್ಗೆ ಇನ್ನೂ ಅಂತಿಮ  ತೀರ್ಮಾನ ಆಗಿಲ್ಲ ಎಂದಿದ್ದಾರೆ.

ಪಕ್ಷ ಉತ್ತರ ಪ್ರದೇಶದಲ್ಲಿ ಅನೇಕ ಯೋಜನೆಗಳನ್ನು ಹೊಂದಿದೆ. ಅದನ್ನು ಯಾವುದೇ ಪ್ರಚಾರ ಇಲ್ಲದೇ  ಕಾಂಗ್ರೆಸ್ ಮಾಡುತ್ತದೆ. ಮೈತ್ರಿಯ ವಿಚಾರಕ್ಕೆ ನಾನು ಮುಕ್ತ ಮನಸ್ಕಳಾಗಿದ್ದೇನೆ. ಆದರೇ, ನಾನು ಯಾವ ನಿರ್ಧಾರವನ್ನು ತೆಗೆದುಕೊಳ್ಳುವುದಕ್ಕೆ ಸಾಧ್ಯವಿಲ್ಲ. ಪಕ್ಷದ ತೀರ್ಮಾನವೇ ಅಂತಿಮ ಎಂದು ಅವರು ಹೇಳಿದ್ದಾರೆ.

Advertisement

ಇನ್ನು, ರಾಜ್ಯದಲ್ಲಿ ನಿಮ್ಮ ಉಪಸ್ಥಿತಿ ಇದ್ದಾಗ ಮಾತ್ರ ಕಾಂಗ್ರೆಸ್ ಚಟುವಟಿಕೆಯಿಂದ ಇರುತ್ತದೆ. ನಿಮ್ಮ ಅನುಪಸ್ಥಿತಿಯಲ್ಲಿ ಪಕ್ಷದ ಚಟುವಟಿಗಳು ಕಾಣಿಸುವುದಿಲ್ಲ ಯಾಕೆ ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ, ನಾನು ಉತ್ತರ ಪ್ರದೇಶಕ್ಕೆ ಬಂದಾಗ ಮಾಧ್ಯಮಗಳು  ನನ್ನನ್ನೇ ಕೇಂದ್ರವಾಗಿಟ್ಟುಕೊಂಡು ವರದಿ ಮಾಡುತ್ತವೆ. ನನ್ನ ಅನುಪಸ್ಥಿತಿಯಲ್ಲಿ ಯಾವುದೇ ರೀತಿಯ ಪಕ್ಷದ ಕೆಲಸದ ಬಗ್ಗೆ ಗಮನ ನೀಡುವುದಿಲ್ಲ. ಪಕ್ಷ ತನ್ನ ಎಂದಿಗೂ ಜನ ಪರ ಕಾರ್ಯಗಳಲ್ಲಿ ನಿರತವಾಗಿದೆ. ನಮ್ಮ ಕೆಲಸಗಳು ನಿರಂತರವಾಗಿ ನಡೆಯುತ್ತಿರುತ್ತದೆ. ನಮ್ಮ ಕೆಲಸಗಳಿಗೂ ಮಾಧ್ಯಮದವರು ಗಮನ ನೀಡಬೇಕು ಎಂದು ಅವರು ಹೇಳಿದ್ದಾರೆ.

ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ರಾಜ್ಯದಲ್ಲಿ ಆದ ಸಮಸ್ಯೆಗಳಿಗೆ ಧ್ವನಿಯಾಗಿ ಇರುವ ಎಲ್ಲಾ  ಪ್ರಯತ್ನವನ್ನು ಒಂದು ವಿರೋಧ ಪಕ್ಷವಾಗಿ ಕಾಂಗ್ರೆಸ್ ಮಾಡಿದೆ. ಆಡಳಿತ ಪಕ್ಷದ ಅಸಮರ್ಪಕ  ನಿರ್ವಹಣೆಯ ಬಗ್ಗೆ ಕೂಡ ನಾವು ಧ್ವನಿ ಎತ್ತಿದ್ಧೆವೆ. ನಮ್ಮ ಪಕ್ಷವು 30-32 ವರ್ಷಗಳಿಂದ ಅಧಿಕಾರದಿಂದ ಹೊರಗುಳಿದಿದೆ. ಪಕ್ಷ ಸಂಘಟನೆಯ ಕಾರ್ಯ ನಿರಂತರವಾಗಿ ಸಾಗುತ್ತಿದೆ. ಉತ್ತರ ಪ್ರದೇಶದ ಜನರಿಗೆ ಉತ್ತಮ ಆಡಳಿತ ನೀಡುವ ವಿಶ್ವಾಸ ನಮಗಿದೆ ಎಂದಿದ್ದಾರೆ.

ಇನ್ನು,  ರಾಜ್ಯದಲ್ಲಿ ಕಾಂಗ್ರೆಸ್ ಸೇವಾ ದಳವನ್ನು ಪುನರುಜ್ಜೀವನಗೊಳಿಸುವ ಯೋಜನೆ ರೂಪಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಅಫ್ಘಾನ್ ನ ಭಾರತದ ಆಸ್ತಿಗಳನ್ನು ಗುರಿಯಾಗಿಸಲು ತಾಲಿಬಾನ್, ಪಾಕ್ ಬಂಡುಕೋರರಿಗೆ ಐಎಸ್ಐ ಸೂಚನೆ!

Advertisement

Udayavani is now on Telegram. Click here to join our channel and stay updated with the latest news.

Next