Advertisement

Haveri: ದಾಖಲೆ ಇಲ್ಲದ ಕೋಟ್ಯಂತರ ರೂ. ಮೌಲ್ಯದ ಚಿನ್ನ, ಬೆಳ್ಳಿಯ ಆಭರಣಗಳು ವಶಕ್ಕೆ

10:17 PM Apr 18, 2023 | sudhir |

ಹಾವೇರಿ: ನಗರದ ಹೊರವಲಯದಲ್ಲಿರುವ ಅಜ್ಜಯ್ಯನ ಗುಡಿ ಚೆಕ್ ಪೋಸ್ಟ್ ನಲ್ಲಿ ಮಂಗಳವಾರ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟ್ಯಂತರ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

Advertisement

ಹಾವೇರಿ ಎಸ್.ಎಸ್.ಟಿ ತಂಡದ ಅಧಿಕಾರಿಗಳು ₹6 ಕೋಟಿ 90 ಲಕ್ಷ ಮೌಲ್ಯದ ಚಿನ್ನಾಭರಣಗಳು ಎಂದು ಅಂದಾಜಿಸಿದ್ದಾರೆ.

ಹುಬ್ಬಳ್ಳಿಯಿಂದ ಹಾವೇರಿ ಮತ್ತು ದಾವಣಗೆರೆಯ ಚಿನ್ನದ ಅಂಗಡಿಗಳಿಗೆ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಸಾಗಿಸಲಾಗುತ್ತಿತ್ತು.

11 ಕೆ.ಜಿ.ಯಷ್ಟು ಚಿನ್ನ, 70 ಕೆ.ಜಿ.ಯಷ್ಟು ಬೆಳ್ಳಿಯ ಆಭರಣಗಳನ್ನ ಜಪ್ತಿ ಮಾಡಲಾಗಿದೆ.

‘ಚುನಾವಣೆ ಅಧಿಕಾರಿಯಿಂದ ಯಾವುದೇ ಅನುಮತಿಯನ್ನ ಪಡೆದಿರಲಿಲ್ಲ. ನಿಖರವಾಗಿ ಚಿನ್ನಾಭರಣಗಳನ್ನು ಯಾವ ಊರಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ ಅನ್ನುವ ದಾಖಲೆಗಳು ಇರಲಿಲ್ಲ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೇತೃತ್ವದ ಸಮಿತಿಗೆ ಚಿನ್ನಾಭರಣ ವರ್ಗಾವಣೆ ಮಾಡಲಾಗಿದೆ.

Advertisement

ಹಾವೇರಿ ಗ್ರಾಮೀಣ ಠಾಣೆಯ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: Karnataka Poll: ಸಿಎಂ ಬೊಮ್ಮಾಯಿ ತವರು ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

Advertisement

Udayavani is now on Telegram. Click here to join our channel and stay updated with the latest news.

Next