Advertisement

ಹಾವೇರಿ: ಇಂದು 107 ಜನರಿಗೆ ಸೋಂಕು ಧೃಢ; 107 ಜನರು ಗುಣಮುಖ

07:35 PM Aug 30, 2020 | Mithun PG |

ಹಾವೇರಿ: ಜಿಲ್ಲೆಯಲ್ಲಿ ಇಂದು ಪೊಲೀಸ್, ಶಿಕ್ಷಣ, ರೈಲ್ವೆ ಹಾಗೂ ಅರಣ್ಯ ಇಲಾಖೆ ನೌಕರರು ಸೇರಿದಂತೆ  107 ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4259 ಕ್ಕೆ ಏರಿಕೆಯಾಗಿದೆ.

Advertisement

ಜಿಲ್ಲೆಯಲ್ಲಿ ಇಂದು ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 3 ಜನರು ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಒಟ್ಟು 104 ಜನರು ಬಲಿಯಾದಂತಾಗಿದೆ.

ಇಂದು 107 ಜನ ಕೋವಿಡ್ 19 ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣದಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 2,878 ಆಗಿದೆ. ಇನ್ನೂ ಒಟ್ಟು 1278 ಸಕ್ರಿಯ ಕೋವಿಡ್ 19 ಪ್ರಕರಣಗಳು ಜಿಲ್ಲೆಯಲ್ಲಿವೆ.

Advertisement

Udayavani is now on Telegram. Click here to join our channel and stay updated with the latest news.

Next