Advertisement

ಹಾವೇರಿ: ಇಂದು 155 ಜನರಿಗೆ ಸೋಂಕು ದೃಢ ; 101 ಜನರು ಗುಣಮುಖ

08:05 PM Sep 03, 2020 | Mithun PG |

ಹಾವೇರಿ: ಜಿಲ್ಲೆಯಲ್ಲಿ ಇಂದು  155 ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,792 ಕ್ಕೆ ಏರಿಕೆಯಾಗಿದೆ.

Advertisement

ಜಿಲ್ಲೆಯಲ್ಲಿ ಇಂದು ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 4 ಜನರು ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಒಟ್ಟು 119 ಜನರು ಬಲಿಯಾದಂತಾಗಿದೆ.

ಇಂದು 101 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣದಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 3262 ಆಗಿದೆ. ಒಟ್ಟು 1411 ಸಕ್ರಿಯ ಕೋವಿಡ್ 19 ಪ್ರಕರಣಗಳು ಜಿಲ್ಲೆಯಲ್ಲಿವೆ.

Advertisement

Udayavani is now on Telegram. Click here to join our channel and stay updated with the latest news.

Next