Advertisement
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಹಾಗೂ ಬುಡಕಟ್ಟು ಉಪಯೋಜನೆಯಡಿ ವಿವಿಧ ಇಲಾಖೆಗೆ ಹಂಚಿಕೆಯಾದ ಅನುದಾನದ ಬಳಕೆ, ಕಾರ್ಯಕ್ರಮದ ಅನುಷ್ಠಾನ ಕುರಿತಂತೆ ಡಿಸೆಂಬರ್ ಅಂತ್ಯದವರೆಗೆ ತ್ತೈಮಾಸಿಕ ಸಭೆ ನಡೆಸಿ ಅವರು ಮಾತನಾಡಿದರು. ಪರಿಶಿಷ್ಟರ ಕಲ್ಯಾಣಕ್ಕಾಗಿ ಸರ್ಕಾರ ಬಿಡುಗಡೆಗೊಳಿಸಿರುವ ಅನುದಾನವನ್ನು ಸಕಾರಣವಿಲ್ಲದೆ ಯೋಜನೆ ಅನುಷ್ಠಾನದಲ್ಲಿ ನಿರ್ಲಕ್ಷ್ಯ ವಹಿಸಿ ಅನುದಾನ ಉಳಿಸಿಕೊಂಡ ಅಧಿಕಾರಿಗಳ ಮೇಲೆ ನಾನೇ ಖುದ್ದಾಗಿ ಮೊಕದ್ದಮೆ ದಾಖಲಿಸುವುದಾಗಿ ತಿಳಿಸಿದರು.
ಕಾಮಗಾರಿಗಳು ಕೈಗೊಂಡಿದ್ದರೆ ಗುಣಮಟ್ಟದ ಕಾಮಗಾರಿಗಳು ಅನುಷ್ಠಾನಗೊಳಿಸಬೇಕು ಎಂದು ಸೂಚನೆ ನೀಡಿದರು. ಪರಿಶಿಷ್ಟರ ಅನುದಾನದಡಿ ಮಂಜೂರಾದ ಮೂಲಸೌಲಭ್ಯಗಳು, ಕಾಮಗಾರಿಗಳು ಅದೇ ಜನಾಂಗಕ್ಕೆ ತಲುಪಬೇಕು. ಅದೇ ಜನಾಂಗದ ಬಡವಾಣೆಗಳಲ್ಲಿ ಅನುಷ್ಠಾನಗೊಳ್ಳಬೇಕು. ಯಾವುದೇ ಕಾರಣಕ್ಕೂ ಈ ಜನಾಂಗದ ಅಭಿವೃದ್ಧಿಗಾಗಿ ಬಿಡುಗಡೆಯಾದ ಅನುದಾನ ಬೇರೆ ಕಡೆ ಬಳಕೆಯಾಗಬಾರದು. ಈ ಕುರಿತಂತೆ ಗರಿಷ್ಠ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ತಾಕೀತು ಮಾಡಿದರು. ವಿಶೇಷ ಅನುದಾನದಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಫಲಾನುಭವಿಗಳು ಈಗಾಗಲೇ ಆಯ್ಕೆಗೊಂಡಿದ್ದರೆ ತಕ್ಷಣವೇ ಅವರ ಖಾತೆಗೆ ಅನುದಾನ ಜಮಾ ಮಾಡಬೇಕು. ಇನ್ನೂ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಿ ಅಧಿಕಾರಿಗಳು ತ್ವರಿತವಾಗಿ ಮಾರ್ಗಸೂಚಿಯಂತೆ ಫಲಾನುಭವಿಗಳನ್ನು ಆಯ್ಕೆಮಾಡಲು ಅನುಷ್ಠಾನಾಧಿಕಾರಿಗಳಿಗೆ ಸೂಚನೆ ನೀಡಿದರು.
Related Articles
Advertisement
ಇದೇ ಸಂದರ್ಭದಲ್ಲಿ ಸಭೆಗೆ ಗೈರು ಹಾಜರಾದ ತುಂಗಾ ಮೇಲ್ದಂಡೆ ಯೋಜನೆಯ ಅಭಿಯಂತರರು, ಪಿಡಬ್ಲೂಡಿ, ಸಣ್ಣ ನೀರಾವರಿ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿಮಾಡಲು ಸೂಚನೆ ನೀಡಿದರು. ಸಮಾಜ ಕಲ್ಯಾಣಾಧಿಕಾರಿ ಜಗದೀಶ ಹೆಬ್ಬಳ್ಳಿ ಸ್ವಾಗತಿಸಿದರು. ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಮ್ಮದ್ ರೋಷನ್, ಡಿಎಫ್‌ಒ ಕ್ರಾಂತಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಮಖಾನೆ, ಜಂಟಿ ಕೃಷಿ ನಿರ್ದೇಶಕ ಮಂಜುನಾಥ್, ಪಶು ಸಂಗೋಪನೆ ಇಲಾಖೆಯ ಉಪನಿರ್ದೇಶಕ ರಾಜೀವ ಕೂಲೇರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವಿರಕ್ತಿಮಠ, ಡಿಡಿಪಿಐ ಅಂದಾನೆಪ್ಪ ವಡಗೇರಿ, ಡಿಡಿಪಿಯು ನಾಗರಾಜ, ಕಾರ್ಮಿಕ ಇಲಾಖಾ ಅಧಿಕಾರಿ ಸಾತೇನಹಳ್ಳಿ, ಕೈಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ವಿನಾಯಕ ಜೋಶಿ ಹಾಗೂ ವಿವಿಧ ಅಭಿವೃದ್ಧಿ ನಿಗಮದ ಅಧಿಕಾರಿಗಳು, ಇತರ ಅಧಿಕಾರಿಗಳು ಇದ್ದರು.
ಓದಿ : ನಾನು ಇರುವವರೆಗೂ ಜಿ.ಟಿ.ಡಿ ಯನ್ನು ವಾಪಸ್ ಜೆಡಿಎಸ್‌ಗೆ ಸೇರಿಸಿಕೊಳ್ಳುವುದಿಲ್ಲ: HDK ಆಕ್ರೋಶ