Advertisement
16 ವರ್ಷದೊಳಗಿನ ಯಾವೊಬ್ಬ ಮಗುವೂ ಶಿಕ್ಷಣದಿಂದ ವಂಚಿತವಾಗಬಾರದೆಂಬ ಕಾರಣಕ್ಕೆ ಸಮಗ್ರ ಶಿಕ್ಷಣ ಕರ್ನಾಟಕ ಅಡಿಯಲ್ಲಿ ಕಳೆದ ಫೆಬ್ರವರಿ ತಿಂಗಳಿಂದಲೇ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ಕಾರ್ಯ ಆರಂಭಿಸಲಾಗಿತ್ತು. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಅವರನ್ನು ಮರಳಿ ಶಾಲೆಗೆಸೇರಿಸುವ ಮೂಲಕ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಕೈಗೊಂಡ ಸಮೀಕ್ಷೆ ವೇಳೆ ಒಟ್ಟು 505 ಮಕ್ಕಳು ಶಾಲೆ ಬಿಟ್ಟಿರುವುದು ಪತ್ತೆಯಾಗಿದೆ.
Related Articles
Advertisement
ಆ ಮೂಲಕ ಎಸ್ಸೆಸ್ಸೆಲ್ಸಿ ಶಿಕ್ಷಣ ಪ್ರತಿ ಮಗುವಿಗೂ ಸಿಗುವಂತೆ ಮಾಡಲು ಮುಂದಾಗಿದ್ದಾರೆ. ಪ್ರೌಢ ಶಿಕ್ಷಣ ಇಲಾಖೆಯಿಂದ ಮುಂಬರುವ ವಾರ್ಷಿಕ ಪರೀಕ್ಷೆಗೆ ನೋಂದಣಿ ಶುರುವಾದಾಗ ಸಮೀಕ್ಷೆಯಲ್ಲಿ ಗುರುತಿಸಿದ ಮಕ್ಕಳ ಹೆಸರು ಸೇರಿಸಲು ಉದ್ದೇಶಿಸಲಾಗಿದೆ.
ಶಾಲೆ ಬಿಡಲು ಹಲವು ಕಾರಣಅರ್ಧದಲ್ಲೇ ಶಾಲೆ ಬಿಡುವುದು, ಶಾಲೆಯಿಂದ ಸಂಪೂರ್ಣ ಹೊರಗಿರಲು ಕುಟುಂಬದ ಆರ್ಥಿಕ ಪರಿಸ್ಥಿತಿಯೇ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಬಡತನ ಕಾರಣಕ್ಕಾಗಿ ಪಾಲಕರು ಮಕ್ಕಳನ್ನು ತಮ್ಮೊಂದಿಗೆ ಕೂಲಿಗೆ ಕರೆದೊಯ್ಯುತ್ತಿದ್ದಾರೆ. ಮಕ್ಕಳ ಶಿಕ್ಷಣಕ್ಕೆ ಬೇಕಾಗುವ ಖರ್ಚು ಭರಿಸಲಾಗದ ಕುಟುಂಬಗಳು ಶಾಲೆ ಬಿಡಿಸುತ್ತಿವೆ. ಇನ್ನು ಕೆಲವರು ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗುತ್ತಿದ್ದು, ಮಕ್ಕಳನ್ನು ಅಲ್ಲಿಗೇ ಕರೆದೊಯ್ಯುತ್ತಿದ್ದಾರೆ. ಅಂಥವರಲ್ಲಿ ಕೆಲ ಪಾಲಕರು ಸ್ಥಳೀಯವಾಗಿ ಶಾಲೆಗಳಿಗೆ ಕಳುಹಿಸುತ್ತಿದ್ದರೆ, ಇನ್ನೂ ಕೆಲವರು ಆ ಬಗ್ಗೆ ಆಸಕ್ತಿ ತೋರುತ್ತಿಲ್ಲ. ಇದರಿಂದ ಮಕ್ಕಳು ಕಡ್ಡಾಯ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ಸಲ ಶಾಲೆ ಬಿಟ್ಟವರ ಸಂಖ್ಯೆ ಜಿಲ್ಲೆಯಲ್ಲಿ ಕಡಿಮೆ ಎಂದು ಅಧಿಕಾರಿಗಳು ಹೇಳುತ್ತಾರೆ. ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮತ್ತು ಅರ್ಧಕ್ಕೆ ಬಿಟ್ಟ ಮಕ್ಕಳ ಸಮೀಕ್ಷೆ ಕೈಗೊಳ್ಳಲಾಗಿದ್ದು, ಸೆಪ್ಟೆಂಬರ್ ಅಂತ್ಯದವರೆಗೂ ನಡೆಯಲಿದೆ. 505 ಮಕ್ಕಳ ಪೈಕಿ ಒಂದು ಮಗುವಿಗೆ ಗೃಹ ಆಧಾರಿತ ಶಿಕ್ಷಣಕ್ಕೆ, 273 ಮಕ್ಕಳನ್ನು ಶಾಲೆಗಳಿಗೆ ಸೇರಿಸಲಾಗಿದೆ. ಯಾವ ಮಗುವು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಲು ಪ್ರಯತ್ನಿಸಲಾಗುತ್ತಿದೆ.
ಗಿರೀಶ ಪದಕಿ, ಡಿಡಿಪಿಐ ಹಾವೇರಿ