Advertisement

Haveri: ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಬಂಧನ

07:42 PM Nov 06, 2024 | Team Udayavani |

ಹಾವೇರಿ: ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ರಾಜಸ್ತಾನ ಮೂಲದ ಬಿಕಾರಾಮ್‌ನನ್ನು ಹಾವೇರಿ ನಗರದಲ್ಲಿ ಬುಧವಾರ(ನ.6) ರಂದು ಬಂಧಿಸಲಾಗಿದೆ.

Advertisement

ರಾಜಸ್ತಾನ ಮೂಲದ ಬಿಕಾರಾಮ್ ಕೂಲಿ ಕೆಲಸಕ್ಕೆಂದು ಇತ್ತೀಚೆಗೆ ಹಾವೇರಿ ನಗರಕ್ಕೆ ಬಂದಿದ್ದ. ಇಲ್ಲಿನ ಗೌಡರ ಓಣಿಯಲ್ಲಿ ರೂಮ್‌ವೊಂದರಲ್ಲಿ ಕೂಲಿಕಾರರೊಂದಿಗೆ ವಾಸವಾಗಿದ್ದ. ಗ್ರಿಲ್ ಕೆಲಸ ಮಾಡಿಕೊಂಡಿದ್ದ. ಮುಂಬೈ ಪೊಲೀಸರ ಮಾಹಿತಿ ಆಧಾರದಲ್ಲಿ ಆರೋಪಿಯನ್ನು ಜಿಲ್ಲಾ ಪೊಲೀಸರು ವಶಕ್ಕೆ ಪಡೆದು, ಮುಂಬೈ ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಮೊದಲು ಬೇರೆಡೆ ಕೆಲಸ ಮಾಡುತ್ತಿದ್ದ. ಒಂದೂವರೆ ತಿಂಗಳ ಹಿಂದೆ ಬಿಕಾರಾಮ್ ಕೂಲಿಗಾಗಿ ಹಾವೇರಿಗೆ ಬಂದಿದ್ದ. ಮುಂಬೈ ಪೊಲೀಸರ ಮಾಹಿತಿ ಆಧಾರದ ಮೇಲೆ ವಶಕ್ಕೆ ಪಡೆದು ಅವರಿಗೆ ಒಪ್ಪಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Moo Deng: ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಗೆಲುವು… ನೀರಾನೆ ಮರಿಯ ಭವಿಷ್ಯ ನಿಜವಾಯ್ತು

Advertisement

Udayavani is now on Telegram. Click here to join our channel and stay updated with the latest news.

Next