Advertisement

Haveri: ಮನೆಗೋಡೆ ಕುಸಿದು ಗಾಯಗೊಂಡಿದ್ದ ಮಗು ಸಾವು

12:47 PM Jul 25, 2023 | Team Udayavani |

ಹಾವೇರಿ: ನಿರಂತರ ಮಳೆ ಹಿನ್ನಲೆ ಮನೆ ಗೋಡೆ ಕುಸಿದು ಗಾಯಗೊಂಡಿದ್ದ ಪುಟ್ಟ ಮಗುವೊಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ.

Advertisement

ಹಾವೇರಿ ತಾಲೂಕಿನ ಮಾಳಪುರ ಗ್ರಾಮದ ಭಾಗ್ಯ ಚಲಮರದ್ (3) ಮೃತ ಬಾಲಕಿ. ಕಳೆದ ಎರಡು ದಿನಗಳ ಹಿಂದೆ ನಿರಂತರ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದು ಮಗು ಗಂಭೀರವಾಗಿ ಗಾಯಗೊಂಡಿತ್ತು.

ಮಗುವನ್ನು ಹುಬ್ಬಳ್ಳಿ ಕಿಮ್ಸ್ ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿದೆ. ಗಾಯಗೊಂಡ ಮತ್ತೊಂದು ಮಗುವಿಗೆ ಚಿಕಿತ್ಸೆ ಮುಂದುವರೆದಿದೆ.

ಈ ಕುರಿತು ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

Advertisement

Udayavani is now on Telegram. Click here to join our channel and stay updated with the latest news.

Next