Advertisement

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

01:30 AM May 03, 2024 | Team Udayavani |

ಹಾವೇರಿ: ಏಲಕ್ಕಿ ಕಂಪಿನ ನಾಡು ಹಾವೇರಿಯಲ್ಲಿ ಲೋಕ ಸಭಾ ಚುನಾವಣೆ ಕಣ ಕಾವೇರಿದೆ. ಕಣದಲ್ಲಿ 14 ಅಭ್ಯರ್ಥಿ ಗಳಿದ್ದರೂ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ. ಬಿಜೆಪಿಯಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಕಾಂಗ್ರೆಸ್‌ನಿಂದ ಆನಂದಸ್ವಾಮಿ ಗಡ್ಡದೇವರಮಠ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

Advertisement

1952ರಿಂದ 2009ರವರೆಗೆ ಧಾರವಾಡ ದಕ್ಷಿಣ ಲೋಕಸಭೆ ಕ್ಷೇತ್ರಕ್ಕೆ ಸೇರಿದ್ದ ಹಾವೇರಿ, 2008ರಲ್ಲಿ ಕ್ಷೇತ್ರ ಮರು ವಿಂಗಡನೆಯಾದ ಬಳಿಕ ಪ್ರತ್ಯೇಕ ಲೋಕಸಭೆ ಕ್ಷೇತ್ರವಾಗಿದೆ. ಪ್ರಸ್ತುತ ಕ್ಷೇತ್ರದಲ್ಲಿ ಕಾಂಗ್ರೆಸ್‌ನ 7, ಬಿಜೆಪಿಯ ಓರ್ವ ಶಾಸಕರಿದ್ದಾರೆ. 2019ರಲ್ಲಿ ಐದರಲ್ಲಿ ಬಿಜೆಪಿ, ಎರಡರಲ್ಲಿ ಕಾಂಗ್ರೆಸ್‌, ಓರ್ವ ಕೆಪಿಜೆಪಿ ಶಾಸಕರಿದ್ದರು. ಈವರೆಗೂ ನಡೆದ 17 ಚುನಾವಣೆಗಳಲ್ಲಿ 12 ಬಾರಿ ಕಾಂಗ್ರೆಸ್‌, 4 ಬಾರಿ ಬಿಜೆಪಿ, ಒಮ್ಮೆ ಲೋಕಶಕ್ತಿ ಪಕ್ಷ ಗೆಲುವು ಸಾಧಿ ಸಿದೆ.
ಅನುಭವಿ ರಾಜಕಾರಣಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಬಿಜೆಪಿಯಿಂದ ಕಣಕ್ಕಿಳಿದಿದ್ದರೆ, ಕಾಂಗ್ರೆಸ್‌ನಿಂದ ಹೊಸ ಮುಖ ಆನಂದಸ್ವಾಮಿ ಗಡ್ಡದೇವರಮಠ ಸ್ಪಧಿಸಿದ್ದಾರೆ. ವಿಶೇಷವೆಂದರೆ ಲೋಕಸಭೆ ಚುನಾವಣೆಗೆ ಇಬ್ಬರೂ ಹೊಸಬರು. ಮೊದಲ ಬಾರಿ ಸ್ಪರ್ಧಿಸುತ್ತಿದ್ದಾರೆ.

ಬಸವರಾಜ ಬೊಮ್ಮಾಯಿ ಅವರಿಗೆ 2 ಬಾರಿ ವಿಧಾನ ಪರಿಷತ್‌ ಸದಸ್ಯರಾಗಿ, ಶಿಗ್ಗಾವಿ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ, 2008ರಲ್ಲಿ ಯಡಿಯೂರಪ್ಪ ಸಂಪುಟದಲ್ಲಿ ಜಲ ಸಂಪನ್ಮೂಲ ಸಚಿವರಾಗಿ, 2019ರಲ್ಲಿ ಗೃಹ ಸಚಿವರಾಗಿ, ಬಳಿಕ ರಾಜ್ಯದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಅನುಭವ ವಿದೆ. ಕ್ಷೇತ್ರದಲ್ಲಿ ಸಾಕಷ್ಟು ಹಿಡಿತವಿದೆ. ತಂದೆ ಎಸ್‌.ಆರ್‌. ಬೊಮ್ಮಾಯಿ ನಡೆದ ದಾರಿಯಲ್ಲಿಯೇ ಸಾಗುತ್ತಿರುವ ಬೊಮ್ಮಾಯಿ ಈಗ ದಿಲ್ಲಿಯತ್ತ ಚಿತ್ತ ನೆಟ್ಟಿದ್ದಾರೆ.

ಶಿರಹಟ್ಟಿ ಮಾಜಿ ಶಾಸಕ ಜಿ.ಎಸ್‌.ಗಡ್ಡದೇವರಮಠ ಪುತ್ರ ರಾಗಿರುವ ಆನಂದಸ್ವಾಮಿ ಗಡ್ಡದೇವರಮಠ 2011ರ ವಿಧಾನ ಪರಿಷತ್‌ ಚುನಾವಣೆಯಲ್ಲಿ ಮಾಜಿ ಸಿಎಂ ಸದಾನಂದ ಗೌಡ ವಿರುದ್ಧ ಸ್ಪಧಿ ìಸಿ ಪರಾಭಗೊಂಡಿದ್ದು, ಇದೇ ಮೊದಲ ಬಾರಿಗೆ ಲೋಕಸಭೆ ಚುನಾವಣೆಗೆ ಸ್ಪಧಿ ìಸುತ್ತಿದ್ದಾರೆ. ತಂದೆಯ ಗರಡಿಯಲ್ಲಿ ಬೆಳೆದಿರುವ ಆನಂದ, ಯಶಸ್ವಿ ಉದ್ಯಮಿ ಯಾಗಿಯೂ ಗುರುತಿಸಿಕೊಂಡಿದ್ದಾರೆ. ಕಳೆದ ಒಂದು ವರ್ಷದಿಂದಲೇ ಲೋಕಸಭೆ ಚುನಾವಣೆಗಾಗಿ ಕ್ಷೇತ್ರದಲ್ಲಿ ಓಡಾಡಿ ಗುರುತಿಸಿಕೊಂಡಿದ್ದಾರೆ. ಇದೇ ಕಾರಣಕ್ಕೆ ಕಾಂಗ್ರೆಸ್‌ ತನ್ನ ಮೊದಲ ಪಟ್ಟಿಯಲ್ಲೇ ಇವರ ಹೆಸರು ಘೋಷಣೆ ಮಾಡಿತು. ಕ್ಷೇತ್ರದಲ್ಲಿ ಕಾಂಗ್ರೆಸ್‌ ಶಾಸಕರ ಸಂಖ್ಯಾ ಬಲ ಅವರ ಬೆನ್ನಿಗೆ ಇದ್ದು, ಲೋಕಸಭೆ ಪ್ರವೇಶಿಸುವ ಕನಸು ನನಸಾಗಿಸಿಕೊಳ್ಳಲು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ.

ಬಿಜೆಪಿ, ಕಾಂಗ್ರೆಸ್‌ ಜಿದ್ದಾಜಿದ್ದಿ

Advertisement

ಲೋಕಸಭೆ ಚುನಾವಣೆಯಲ್ಲಿ ಸತತ 4 ಬಾರಿ ಬಿಜೆಪಿ ಗೆಲುವು ಸಾಧಿಸಿ ಭದ್ರಕೋಟೆಯಾಗಿ ಮಾಡಿಕೊಂಡಿದೆ. ಸತತ ಸೋಲುಗಳಿಂದ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್‌ ಈ ಬಾರಿ ಬಿಜೆಪಿ ಗೆಲುವಿಗೆ ಬ್ರೇಕ್‌ ಹಾಕಲು ಕಸರತ್ತು ನಡೆಸಿದೆ. ಶಾಸಕರ ಸಂಖ್ಯಾಬಲ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು, ಗ್ಯಾರಂಟಿ ಯೋಜನೆ ಗಳು ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಹುಮ್ಮಸ್ಸು ಹೆಚ್ಚಿಸಿದೆ. ಬಿಜೆಪಿಯ ಬಸವರಾಜ ಬೊಮ್ಮಾಯಿ ಕೇಂದ್ರದ ಬಿಜೆಪಿ ಸರಕಾರದ ಸಾಧನೆ, ಮೋದಿ ಅಲೆ, ತಾವು ಸಿಎಂ ಆಗಿದ್ದಾಗ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ನೆಚ್ಚಿಕೊಂಡಿದ್ದಾರೆ. ಕ್ಷೇತ್ರದಲ್ಲಿ ಲಿಂಗಾಯತ ಮತದಾರರೇ ನಿರ್ಣಾಯಕ. ಎರಡೂ ಪಕ್ಷಗಳು ಅದೇ ಸಮುದಾಯದ ಅಭ್ಯರ್ಥಿಯನ್ನು ಕಣಕ್ಕಿಳಿಸಿವೆ. ಇನ್ನು ಮುಸ್ಲಿಂ, ಪರಿಶಿಷ್ಟ ಜಾತಿ-ಪಂಗಡ, ಕುರುಬ ಸೇರಿ ಹಿಂದುಳಿದ ವರ್ಗಕ್ಕೆ ಸೇರಿದ ಮತದಾರರೂ ಗಣನೀಯ ಸಂಖ್ಯೆಯಲ್ಲಿದ್ದಾರೆ. ಲಿಂಗಾಯತ ಮತಗಳು ವಿಭಜನೆಯಾದರೆ ಉಳಿದ ಸಮುದಾಯದವರ ಮತಗಳನ್ನು ಹೆಚ್ಚಿಗೆ ಪಡೆದವರು ಗೆಲುವಿನ ದಡ ಸೇರಲಿದ್ದಾರೆ.

ಬಸವರಾಜ ಬೊಮ್ಮಾಯಿ ಮೈತ್ರಿ ಅಭ್ಯರ್ಥಿ ಸಾಮರ್ಥ್ಯ
ಮೋದಿ ಅಲೆ, ಕೇಂದ್ರ ಬಿಜೆಪಿ ಸರಕಾರದ ಸಾಧನೆ
ಸಿಎಂ ಆಗಿದ್ದಾಗ ಮಾಡಿದ ಕೆಲಸಗಳು
ಕ್ಷೇತ್ರದ ಜತೆಗಿರುವ ಒಡನಾಟ, ಬಿಗಿ ಹಿಡಿತ

ಪ್ರಧಾನಿ ನರೇಂದ್ರ ಮೋದಿ ಭಾರತವನ್ನು ಹತ್ತು ವರ್ಷದಲ್ಲಿ ಬಲಿಷ್ಠ ದೇಶವನ್ನಾಗಿ ಮಾಡಿದ್ದಾರೆ. ಅವರ ಬಗ್ಗೆ ದೇಶಾದ್ಯಂತ ಅಲೆ ಇದೆ. ಜತೆಗೆ ಸಿಎಂ ಆಗಿದ್ದ ವೇಳೆ ಕ್ಷೇತ್ರದಲ್ಲಿ ಕೈಗೊಂಡ ಜನಪರ ಕಾರ್ಯಗಳು ಚುನಾವಣೆಯಲ್ಲಿ ಸಹಕಾರಿಯಾಗಲಿವೆ.

ಆನಂದಸ್ವಾಮಿ ಗಡ್ಡದೇವರಮಠ ಕಾಂಗ್ರೆಸ್‌ ಅಭ್ಯರ್ಥಿ ಸಾಮರ್ಥ್ಯ

ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು
ಕ್ಷೇತ್ರದಲ್ಲಿ ಕಾಂಗ್ರೆಸ್‌ ಶಾಸಕರ ಸಂಖ್ಯಾಬಲ
ಕ್ಷೇತ್ರದಲ್ಲಿ ನಿರಂತರವಾಗಿ ಗುರುತಿಸಿಕೊಂಡಿರುವುದು

ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ನುಡಿದಂತೆ ನಡೆದು ಗ್ಯಾರಂಟಿ ಯೋಜನೆ ಜಾರಿಗೊಳಿಸಿ ಜನರಿಗೆ ಶಕ್ತಿ ತುಂಬಿದೆ. ಕ್ಷೇತ್ರದಾದ್ಯಂತ ಜನಬೆಂಬಲ ವ್ಯಕ್ತವಾಗುತ್ತಿದ್ದು, ಜನರ ಮಧ್ಯೆ ಇದ್ದು ಸೇವೆ ಮಾಡುವ ಸಂಕಲ್ಪ ಹೊಂದಿದ್ದೇನೆ.

ವೀರೇಶ ಮಡ್ಲೂರ

Advertisement

Udayavani is now on Telegram. Click here to join our channel and stay updated with the latest news.

Next