Advertisement

ಹಾವೇರಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ನಾಲ್ಕು ಮಂದಿ ಸಾವು! 111 ಹೊಸ ಕೇಸ್ ಪತ್ತೆ

07:21 PM Aug 20, 2020 | sudhir |

ಹಾವೇರಿ: ಜಿಲ್ಲೆಯಲ್ಲಿ ಗುರುವಾರ ವೈದ್ಯರು, ಅಂಗನವಾಡಿ ಕಾರ್ಯಕರ್ತೆ, ಪೊಲೀಸ್ ಹಾಗೂ ಶಿಕ್ಷಣ ಇಲಾಖೆ ಸಿಬ್ಬಂದಿ ಸೇರಿದಂತೆ ಒಟ್ಟು 111 ಜನರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2883 ಕ್ಕೆ ಏರಿಕೆಯಾಗಿದೆ.

Advertisement

ಇಂದು ನಾಲ್ವರು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಒಟ್ಟು 66 ಜನರು ಬಲಿಯಾದಂತಾಗಿದೆ.

ಇಂದು ಒಂದೇ ದಿನದಲ್ಲಿ ಕೋವಿಡ್ ಸೋಂಕಿನಿಂದ 42 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣದಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 1786 ಆಗಿದೆ. ಇನ್ನೂ ಒಟ್ಟು 1031 ಸಕ್ರಿಯ ಕೋವಿಡ್ 19 ಪ್ರಕರಣಗಳು ಜಿಲ್ಲೆಯಲ್ಲಿವೆ.

Advertisement

Udayavani is now on Telegram. Click here to join our channel and stay updated with the latest news.

Next