ಹಾವೇರಿ: ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆಯ ಆತಂಕ ಸೃಷ್ಟಿಯಾಗಿದ್ದು, ಜಿಲ್ಲೆಯಲ್ಲೂ ಕಳೆದ ಒಂದು ವಾರದಿಂದ ಕೋವಿಡ್ ಪ್ರಕರಣಗಳ ಪ್ರಮಾಣ ಹೆಚ್ಚುತ್ತಿದೆ. ಹಾಗಾಗಿ, ಕೋವಿಡ್ ಎರಡನೇಅಲೆ ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿತ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸಿದ್ಧತೆ ನಡೆಸಿದೆ.
ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಕಂಡುಬಂದ ದಿನಗಳಿಂದ ಇಲ್ಲಿಯ ವರೆಗೂ ಜಿಲ್ಲೆಯಲ್ಲಿ ನಿತ್ಯ ಪತ್ತೆಯಾಗುವಕೋವಿಡ್ ಪ್ರಕರಣಗಳ ಸಂಖ್ಯೆಎರಡಂಕಿ ದಾಟುತ್ತಿರುವುದು ಆತಂಕಹೆಚ್ಚಿಸಿದೆ. ಕಳೆದ ಒಂದು ವಾರದಿಂದಜಿಲ್ಲೆ ಕೋವಿಡ್ ಪ್ರಕರಣಗಳ ಸಂಖ್ಯೆಹೆಚ್ಚುತ್ತಿದ್ದು, ನಿತ್ಯ 10-15 ಪ್ರಕರಣಗಳು ಪತ್ತೆಯಾಗುತ್ತಿವೆ.
ಸದ್ಯ ಜಿಲ್ಲೆಯಲ್ಲಿ 98ಸಕ್ರಿಯ ಪ್ರಕರಣಗಳಿದ್ದು, ಕೋವಿಡ್ ಕೇರ್‌ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಎರಡನೇ ಅಲೆಸೃಷ್ಟಿಯಾಗಿರುವ ಹಿನ್ನೆಲೆ ಜಿಲ್ಲಾಡಳಿತಕೋವಿಡ್ ಸೋಂಕಿತರ ಚಿಕಿತ್ಸೆಗಾಗಿಜಿಲ್ಲೆಯ ಎಲ್ಲ ತಾಲೂಕುಗಳಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಸುಮಾರು 1400ಕ್ಕೂ ಹೆಚ್ಚುಬೆಡ್‌ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿಜಿಲ್ಲಾಡಳಿತ ಎಲ್ಲ ಸೌಲಭ್ಯಗಳನ್ನುಕಲ್ಪಿಸಿದ್ದು, ಯಾವುದೇ ಸಮಸ್ಯೆ ಇಲ್ಲಎಂದು ಆರೋಗ್ಯ ಇಲಾಖೆ ಅಧಿ ಕಾರಿಗಳು ತಿಳಿಸಿದ್ದಾರೆ.
ಚಿಕಿತ್ಸೆಗೆ ಅಗತ್ಯ ವ್ಯವಸ್ಥೆ:ಜಿಲ್ಲಾಸ್ಪತ್ರೆ ಸೇರಿದಂತೆ ಜಿಲ್ಲೆಯ 6ತಾಲೂಕು ಆಸ್ಪತ್ರೆಗಳಲ್ಲಿ ಕೋವಿಡ್ ಕೇರ್‌ಸೆಂಟರ್ ತೆರೆಯಲಾಗಿದ್ದು, ಕೋವಿಡ್ಸೋಂಕಿತರ ಚಿಕಿತ್ಸೆಗಾಗಿ ಅಗತ್ಯ ಬೇಡ್,ವೆಂಟಿಲೇಟರ್, ಆಕ್ಸಿಜನ್, ಐಸಿಯು ವ್ಯವಸ್ಥೆಮಾಡಿಕೊಳ್ಳಲಾಗಿದೆ. ಐಸಿಯು ಬೆಡ್‌ಹೊರತುಪಡಿಸಿ ಜಿಲ್ಲೆಯ ಎಲ್ಲ ತಾಲೂಕುಸೇರಿದಂತೆ 220 ಬೆಡ್‌ಗಳನ್ನು ಈಗಾಗಲೇವ್ಯವಸ್ಥೆ ಮಾಡಲಾಗಿದೆ. ಜಿಲ್ಲಾಸ್ಪತ್ರೆ ಸೇರಿದಂತೆಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಒಟ್ಟು 58ವೆಂಟಿಲೇಟರ್ ವ್ಯವಸ್ಥೆ ಮಾಡಲಾಗಿದೆ.
ಜಿಲ್ಲಾಸ್ಪತ್ರೆಯಲ್ಲಿ 148 ಆಕ್ಸಿಜನ್ ಬೆಡ್‌ಹಾಗೂ ಜಿಲ್ಲೆಯ ಎಲ್ಲ ತಾಲೂಕುಆಸ್ಪತ್ರೆಗಳಲ್ಲಿ ಒಟ್ಟು 209 ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕೋವಿಡ್ಮೊದಲ ಅಲೆ ಕಂಡು ಬಂದಾಗ ಚಿಕಿತ್ಸೆಗೆ ಅಗತ್ಯ ಸೌಲಭ್ಯ ಇಲ್ಲದೇ ಸಮಸ್ಯೆಎದುರಿಸುವಂತಾಗಿತ್ತು. ಆದರೆ, ಈಗಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಅತ್ಯಾಧುನಿಕಸೌಲಭ್ಯಗಳನ್ನು ಕಲ್ಪಿಸಲಾಗಿದ್ದು,ಸೋಂಕಿತರ ಚಿಕಿತ್ಸೆಯಲ್ಲಿ ಯಾವುದೇಸಮಸ್ಯೆ ಎದುರಾಗುವುದಿಲ್ಲ ಎಂದುಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಎರಡನೇ ಅಲೆ ಎದರಿಸಲು ಸಿದ್ಧತೆ :
ರಾಜ್ಯಾದ್ಯಂತ ಕೋವಿಡ್ ಎರಡನೇ ಅಲೆ ಸದ್ದುಮಾಡುತ್ತಿದ್ದು, ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಸಮರ್ಥವಾಗಿ ಎದುರಿಸಲು ಮುಂಜಾಗ್ರತಾ ಕ್ರಮದ ಸಿದ್ಧತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಜನರಲ್ಲಿಕೋವಿಡ್ ವೈರಸ್ ಬಗ್ಗೆ ನಿರ್ಲಕ್ಷ್ಯ ಬೇಡ. ಮಾಸ್ಕ್ಕಡ್ಡಾಯವಾಗಿ ಧರಿಸಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂಕಡ್ಡಾಯವಾಗಿ ಲಸಿಕೆ ಪಡೆಯುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ಆದರೂ ಕೂಡಬಹುತೇಕ ಕಡೆ ಜನರು ಮಾಸ್ಕ್ ಧರಿಸಿರುವುದು ಕಂಡು ಬರುತ್ತಿಲ್ಲ. ಸಾಮಾಜಿಕ ಅಂತರ ಸಂಪೂರ್ಣ ನಿರ್ಲಕ್ಷ್ಯ ವಹಿಸುತ್ತಿರುವುದು ಕಂಡು ಬರುತ್ತಿದೆ.
ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದ್ದು, ಇದುವರೆಗೆ ಜಿಲ್ಲೆಯಲ್ಲಿ 98 ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ. ಸೋಂಕಿತರಿಗೆ ಅಗತ್ಯ ಚಿಕಿತ್ಸೆಸಹ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಇದುವರೆಗೂ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಯ ನೆರವು ಪಡೆದಿಲ್ಲ. ಅಲ್ಲದೇ, ಆಸ್ಪತ್ರೆಗೆ ಬರುವ ಕೊರೊನೇತರ ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ಚಿಕಿತ್ಸೆ ನೀಡಲು ಸೂಚನೆ ನೀಡಲಾಗಿದೆ.
– ಡಾ|ಎಚ್.ಎಸ್.ರಾಘವೇಂದ್ರಸ್ವಾಮಿ, ಡಿಎಚ್ಒ ಹಾವೇರಿ