Advertisement

ಹಾವೇರಿ : ಕೋವಿಡ್ ಸೋಂಕಿಗೆ ಮೂವರು ಸಾವು! 127 ಹೊಸ ಪ್ರಕರಣ ದೃಢ

10:09 PM Sep 26, 2020 | sudhir |

ಹಾವೇರಿ : ಜಿಲ್ಲೆಯಲ್ಲಿ ಶನಿವಾರ 127 ಜನರಿಗೆ ಕೋವಿಡ್ -19 ಸೋಂಕು ದೃಢಪಟ್ಟಿದ್ದು, ಮೂವರು ಮೃತಪಟ್ಟಿದ್ದಾರೆ.

Advertisement

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8408 ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿನಿಂದ ಶನಿವಾರ ಮೂವರು ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಒಟ್ಟು 156 ಜನರು ಬಲಿಯಾದಂತಾಗಿದೆ.

ಇಂದು ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 200 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿನಿಂದ ಈವರೆಗೆ 6812 ಜನರು ಗುಣಮುಖರಾಗಿ ಕೋವಿಡ್-19 ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಇನ್ನೂ ಒಟ್ಟು 1440 ಸಕ್ರಿಯ ಕೋವಿಡ್-19 ಪ್ರಕರಣಗಳು ಜಿಲ್ಲೆಯಲ್ಲಿವೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next