Advertisement

ಹಾವೇರಿ ಜಿಲ್ಲೆಯಲ್ಲಿ 80 ಜನರಿಗೆ ಕೋವಿಡ್ ಸೋಂಕು; ಇಬ್ಬರು ಸಾವು

07:40 PM Oct 06, 2020 | sudhir |

ಹಾವೇರಿ: ಜಿಲ್ಲೆಯಲ್ಲಿ ಮಂಗಳವಾರ 80 ಜನರಿಗೆ ಕೋವಿಡ್ -19 ಸೋಂಕು ದೃಢಪಟ್ಟಿದ್ದು, ಇಬ್ಬರು ಮೃತಪಟ್ಟಿದ್ದಾರೆ.

Advertisement

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9373 ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿನಿಂದ ಇಂದು ಇಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಒಟ್ಟು 174 ಜನರು ಬಲಿಯಾದಂತಾಗಿದೆ.

ಇಂದು ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 88 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿನಿಂದ ಈವರೆಗೆ 7943 ಜನರು ಗುಣಮುಖರಾಗಿ ಕೋವಿಡ್-19 ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇನ್ನೂ ಒಟ್ಟು 1256 ಸಕ್ರಿಯ ಕೋವಿಡ್-19 ಪ್ರಕರಣಗಳು ಜಿಲ್ಲೆಯಲ್ಲಿವೆ.

Advertisement

Udayavani is now on Telegram. Click here to join our channel and stay updated with the latest news.

Next