Advertisement

ಹಾವೇರಿ ಜಿಲ್ಲೆಯಲ್ಲಿ 52 ಮಂದಿಯಲ್ಲಿ ಕೋವಿಡ್ ಸೋಂಕು ದೃಢ!

08:09 PM Jul 25, 2020 | sudhir |

ಹಾವೇರಿ: ಜಿಲ್ಲೆಯಲ್ಲಿ ಶನಿವಾರ 52 ಜನರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. 64ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ ಹಾಗೂ ಇಬ್ಬರು ಮೃತ ಪಟ್ಟಿದ್ದಾರೆ.

Advertisement

ರಾಣಿಬೆನ್ನೂರ-16, ಹಿರೇಕೆರೂರು-12, ಹಾವೇರಿ-10, ಶಿಗ್ಗಾಂವ-06, ಸವಣೂರು-05, ಹಾನಗಲ್-02 ಹಾಗೂ ಬ್ಯಾಡಗಿ ತಾಲೂಕಿನಲ್ಲಿ ಒಂದು ಪ್ರಕರಣ ಪತ್ತೆಯಾಗಿವೆ.

ಜಿಲ್ಲೆಯಲ್ಲಿ ಈವರೆಗೆ 712ಕೋವಿಡ್-19 ಪಾಸಿಟಿವ್ ಪ್ರಕರಣಗಳು ದೃಢಗೊಂಡಿವೆ. ಇಂದಿನವರೆಗೆ 452 ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ ಹಾಗೂ ಈವರೆಗೆ 23 ಜನರು ಮೃತಪಟ್ಟಿದ್ದಾರೆ. 237 ಪ್ರಕರಣಗಳು ಸಕ್ರಿಯವಾಗಿವೆ ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next