Advertisement

ಹಾವೇರಿಯಲ್ಲಿ ಇಂದು 96 ಜನರಲ್ಲಿ ಕೋವಿಡ್ ಸೋಂಕು ಪತ್ತೆ! ಮೂರು ಮಂದಿ ಸಾವು

06:00 PM Aug 13, 2020 | sudhir |

ಹಾವೇರಿ ; ಜಿಲ್ಲೆಯಲ್ಲಿ ಕೋವಿಡ್ ಮಹಾಮಾರಿ ಮುಂದುವರೆದಿದ್ದು ಇಂದು ಸೋಂಕಿಗೆ ಜಿಲ್ಲೆಯಲ್ಲಿ ಮೂರು ಮಂದಿ ಸಾವನ್ನಪ್ಪಿದ್ದು 96 ಹೊಸ ಪ್ರಕರಣಗಳು ದೃಢಪಟ್ಟಿವೆ.

Advertisement

ಇಂದಿನ 96 ಹೊಸ ಪ್ರಕರಣಗಳು ಸೇರಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 2153ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇಂದು ಮೂವರು ಬಲಿಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಒಟ್ಟು 46 ಜನರು ಬಲಿಯಾದಂತಾಗಿದೆ.

ಇಂದು ಒಂದೇ ದಿನ 195 ಜನ ಕೋವಿಡ್ 19 ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣದಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 1474 ಆಗಿದೆ. ಇನ್ನೂ ಒಟ್ಟು 633 ಸಕ್ರಿಯ ಕೋವಿಡ್ 19 ಪ್ರಕರಣಗಳು ಜಿಲ್ಲೆಯಲ್ಲಿವೆ.

Advertisement

Udayavani is now on Telegram. Click here to join our channel and stay updated with the latest news.

Next