ಹಾವೇರಿ : ಜಿಲ್ಲೆಯಲ್ಲಿ ಇಂದು ಶೂಶ್ರುಷಕಿ, ಆರೋಗ್ಯ, ಶಿಕ್ಷಣ ಹಾಗೂ ಪೊಲೀಸ್ ಇಲಾಖೆ ಉದ್ಯೋಗಿಗಳು ಸೇರಿದಂತೆ 150 ಜನರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ.
Advertisement
ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3549 ಕ್ಕೆ ಏರಿಕೆಯಾಗಿದೆ.
ಇಂದು ಆರು ಜನರು ಕೋವಿಡ್ 19 ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಒಟ್ಟು 80 ಜನರು ಬಲಿಯಾದಂತಾಗಿದೆ.
ಇಂದು ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 221 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
Related Articles
ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣದಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 2177 ಆಗಿದೆ. ಇನ್ನೂ ಒಟ್ಟು 1292 ಸಕ್ರಿಯ ಕೋವಿಡ್ 19 ಪ್ರಕರಣಗಳು ಜಿಲ್ಲೆಯಲ್ಲಿವೆ.
Advertisement