Advertisement

ಹಾವೇರಿಯಲ್ಲಿ 119 ಮಂದಿಗೆ ಕೋವಿಡ್ ಪಾಸಿಟಿವ್! ಐದು ಮಂದಿ ಸಾವು

06:12 PM Aug 25, 2020 | sudhir |

ಹಾವೇರಿ: ಜಿಲ್ಲೆಯಲ್ಲಿ ಇಂದು ಪತ್ರಕರ್ತ, ವೈದ್ಯ, ಶೂಶ್ರುಷಕಿ, ಲ್ಯಾಬ್ ಟೆಕ್ನಿಷಿಯನ್, ಆಶಾ ಕಾರ್ಯಕರ್ತೆ ಸೇರಿದಂತೆ 119 ಜನರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ.

Advertisement

ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3668 ಕ್ಕೆ ಏರಿಕೆಯಾಗಿದೆ.

ಇಂದು ಐದು ಜನರು ಕೋವಿಡ್ 19 ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಒಟ್ಟು 85 ಜನರು ಬಲಿಯಾದಂತಾಗಿದೆ.

ಇಂದು ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 82 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣದಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 2259 ಆಗಿದೆ. ಇನ್ನೂ ಒಟ್ಟು 1324 ಸಕ್ರಿಯ ಕೋವಿಡ್ 19 ಪ್ರಕರಣಗಳು ಜಿಲ್ಲೆಯಲ್ಲಿವೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next