Advertisement

ಹಾವೇರಿ : ಕೋವಿಡ್ ಸೋಂಕಿಗೆ ಓರ್ವ ಬಲಿ: 109 ಹೊಸ ಪ್ರಕರಣ ದೃಢ

06:47 PM Sep 19, 2020 | sudhir |

ಹಾವೇರಿ : ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಓರ್ವ ಸಾವನ್ನಪ್ಪಿದ್ದು ಜೊತೆಗೆ 109 ಹೊಸ ಪ್ರಕರಣಗಳು ದೃಢಪಟ್ಟಿವೆ.

Advertisement

ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7698 ಕ್ಕೆ ಏರಿಕೆಯಾಗಿದ್ದು, ಇಂದು ಕೋವಿಡ್ 19 ಸೋಂಕಿನಿಂದ ಒರ್ವ ಮೃತಪಟ್ಟಿದ್ದು ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಒಟ್ಟು 143 ಜನರು ಬಲಿಯಾದಂತಾಗಿದೆ.

ಇಂದು ಒಂದೇ ದಿನ 83 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಸೋಂಕಿನಿಂದ ಈವರೆಗೆ 5739 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಸದ್ಯ ಒಟ್ಟು 1816 ಸಕ್ರಿಯ ಕೋವಿಡ್ 19 ಪ್ರಕರಣಗಳು ಜಿಲ್ಲೆಯಲ್ಲಿವೆ.

Advertisement

Udayavani is now on Telegram. Click here to join our channel and stay updated with the latest news.

Next