ಈ ಸಂದರ್ಭದಲ್ಲಿ ಮಾತನಾಡಿ, ಕೋವಿಡ್ ಸೋಂಕಿತರ ಚಿಕಿತ್ಸೆಯಲ್ಲಿ ಯಾವುದೇ ಲೋಪ, ಕೊರತೆಗಳಾಗಬಾರದು. ವೈದ್ಯಕೀಯ
ವಿಭಾಗದಿಂದ ಯಾವುದೇ ದೂರು ಬರದಂತೆ ಎಲ್ಲ ಮುನ್ನೆಚ್ಚರಿಕೆ ವಹಿಸಬೇಕು. ಪ್ರಸರೈಸ್ ಆಕ್ಸಿಜನ್ ಪೂರೈಕೆಯಲ್ಲಿ ಯಾವುದೇ ಲೋಪವಾಗದಂತೆ ಗರಿಷ್ಠ ಎಚ್ಚರಿಕೆ ಇರಬೇಕು. ಯಾವುದೇ ತಾಂತ್ರಿಕ ತೊಂದರೆಗಳು ಯಂತ್ರದಲ್ಲಿ ಎದುರಾದರೂ ತಕ್ಷಣ
ದುರಸ್ತಿಗೆ ಕ್ರಮ ವಹಿಸಬೇಕು. ವೈದ್ಯಕೀಯ ಸಿಬ್ಬಂದಿ ಹಾಗೂ ಅರೆವೈದ್ಯಕೀಯ ಸಿಬ್ಬಂದಿ ಸಕಾಲದಲ್ಲಿ ರೋಗಿಗಳಿಗೆ ಸ್ಪಂದಿಸಬೇಕು ಎಂದು ಸೂಚನೆ ನೀಡಿದರು. ಜಿಪಂ ಸಿಇಒ ರಮೇಶ ದೇಸಾಯಿ, ಅಪರ ಜಿಲ್ಲಾಧಿಕಾರಿ ಎಸ್.ಯೋಗೇಶ್ವರ, ಶಿಗ್ಗಾವಿ
ತಹಶೀಲ್ದಾರರು ಉಪಸ್ಥಿತರಿದ್ದರು.
Advertisement
ಕೋವಿಡ್ ಚಿಕಿತ್ಸೆಗೆ ವ್ಯವಸ್ಥೆ: ಜಿಲ್ಲಾಸ್ಪತ್ರೆಯಲ್ಲಿ 78 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದ್ದು, 10 ಐಸಿಯು ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ. 58 ಕೇಂದ್ರೀಕೃತ ಪ್ರಸರೈಸ್ ಆಕ್ಸಿಜನ್ ವ್ಯವಸ್ಥೆ ಮಾಡಲಾಗಿದೆ. 36 ವೆಂಟಿಲೇಟರ್ ಅಳವಡಿಸಲಾಗಿದೆ.ಅವಶ್ಯಕತೆಗನುಗುಣವಾಗಿ ವೈದ್ಯಾ ಧಿಕಾರಿಗಳ ನೇಮಕಾತಿ ನಡೆಸಲಾಗಿದೆ. ಈಗಾಗಲೇ 55 ವೈದ್ಯಾಧಿಕಾರಿಗಳ ನೇಮಕಾತಿ ಮಾಡಿಕೊಳ್ಳಲಾಗಿದೆ. 20 ಶುಶ್ರೂಷಕರು, 25 ಲ್ಯಾಬ್‌ಟೆಕ್ನಿಷಿಯನ್‌ಗಳನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ.
ಜಿಲ್ಲಾಸ್ಪತ್ರೆಯಲ್ಲಿ 150 ಲಕ್ಷ ರೂ. ವೆಚ್ಚದಲ್ಲಿ ಕೋವಿಡ್ ಶಂಕಿತರ ಗಂಟಲು ದ್ರವ ಪರೀಕ್ಷೆಗಾಗಿ ಸುಸಜ್ಜಿತ ಪ್ರಯೋಗಾಲಯ ತೆರೆಯಲಾಗಿದೆ. 8000 ರ್ಯಾಪಿಡ್ ಆಂಟಿಜನ್ ಕಿಟ್‌ಗಳು ಜಿಲ್ಲೆಗೆ ಪೂರೈಕೆಯಾಗಿವೆ. ಅಗತ್ಯಕ್ಕೆ ತಕ್ಕಂತೆ ವೈದ್ಯಕೀಯ
ಸೌಲಭ್ಯಗಳ ಹೆಚ್ಚಳಕ್ಕೆ ಕ್ರಮ ವಹಿಸಲಾಗುತ್ತಿದೆ.
ಹೆಲ್ತ್‌ಕೇರ್ ಸೆಂಟರ್ ಆರಂಭಿಸುವ ಕಾರ್ಯ ಪ್ರಗತಿಯಲ್ಲಿದೆ. ಬಸಾಪುರ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ, ಕಲಕೇರಿ ಇಂದಿರಾಗಾಂಧಿ ವಸತಿ ಶಾಲೆ, ಹಲಗೇರಿ ಪರಿಶಿಷ್ಟ ವರ್ಗಗಳ ಬಾಲಕಿಯರ ಹಾಸ್ಟೆಲ್, ದೂದಿಹಳ್ಳಿ ಕಿತ್ತೂರು ರಾಣಿ ಚನ್ನಮ್ಮ
ವಸತಿ ಶಾಲೆ, ಬ್ಯಾಡಗಿ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆಯಲಾಗಿದೆ. ಈಗಾಗಲೇ 400 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ. ಅಕ್ಕಿಆಲೂರು ಹಾಗೂ ಬಾಡ ವಸತಿ ಶಾಲೆಯಲ್ಲಿ ಸೌಲಭ್ಯ ಕಲ್ಪಿಸುವ ಕಾರ್ಯ ಪ್ರಗತಿಯಲ್ಲಿದೆ. ವಾರದಲ್ಲಿ ಹೆಚ್ಚುವರಿಯಾಗಿ 485 ಹಾಸಿಗೆಗಳ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹೆಚ್ಚುವರಿಯಾಗಿ ಒಟ್ಟಾರೆ 830 ಹಾಸಿಗೆಗಳ ವ್ಯವಸ್ಥೆ ಕಲ್ಪಿಸುವ ಕಾರ್ಯ ಪ್ರಗತಿಯಲ್ಲಿದೆ. ತಲಾ 50 ಹಾಸಿಗೆ ಸೌಲಭ್ಯಯುಳ್ಳ ಕೋವಿಡ್ ಕೇರ್ ಸೆಂಟರ್‌ಗಳನ್ನು ತೆರೆದು 400 ಹಾಸಿಗೆಗಳ ಸೌಲಭ್ಯ ಕಲ್ಪಿಸಲಾಗಿದೆ. ಜಿಲ್ಲೆಯಾದ್ಯಂತ 425 ಹಾಸಿಗೆಗಳಿಗೆ ಪ್ರಸರೈಸ್ ಆಕ್ಸಿಜನ್ ಪೂರೈಕೆ ಕಲ್ಪಿಸುವ ಕಾರ್ಯ ಪ್ರಗತಿಯಲ್ಲಿದೆ. ಈಗಾಗಲೇ 185 ಹಾಸಿಗೆಗಳಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.