Advertisement

ಹಾವೇರಿ : ಗೆಳೆಯರೊಂದಿಗೆ ನದಿಗೆ ಈಜಲು ಹೋದ ಇಬ್ಬರು ಬಾಲಕರು ನೀರುಪಾಲು

08:29 PM Apr 25, 2022 | Team Udayavani |

ಹಾವೇರಿ : ಗೆಳೆಯರೊಂದಿಗೆ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನದಿಯಲ್ಲಿ ಮುಳುಗಿ ಮೃತಪಟ್ಟಿರುವ ದುರ್ಘಟನೆ ಘಟನೆ ಸೋಮವಾರ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ತಿಪ್ಪಾಯಿಕೊಪ್ಪ ಗ್ರಾಮದಲ್ಲಿ ನಡೆದಿದೆ.

Advertisement

ನಿಖಿಲ್ ಕಿಲಾರಿ (14) ಸಂಜಯ್ ಚಳಗೇರಿ (14) ಮೃತ ದುರ್ದೈವಿಗಳು. ಮೃತರು ತಾಲೂಕಿನ ಮಾಸೂರು ಗ್ರಾಮದ ನಿವಾಸಿಗಳು ಎನ್ನಲಾಗಿದೆ. ಬೇಸಿಗೆ ರಜೆ ಹಿನ್ನೆಲೆ ಐವರು ಗೆಳೆಯರೊಂದಿಗೆ ಸೋಮವಾರ ಮಧ್ಯಾಹ್ನ ಕುಮದ್ವತಿ ನದಿಯಲ್ಲಿ ಈಜಾಡಲು ತೆರಳಿದ್ದರು. ಈ ವೇಳೆ ಇಬ್ಬರು ಬಾಲಕರು ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ನಿಖಿಲ್ ಮೃತದೇಹ ನದಿಯಿಂದ ಹೊರತೆಗೆಯಲಾಗಿದ್ದು, ಸಂಜಯ್ ಮೃತದೇಹದ ಶೋಧ ಮುಂದುವರಿದಿದೆ.

ಮೃತ ಬಾಲಕರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹಿರೇಕೆರೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next