Advertisement
ನಗರದ ಜಿಲ್ಲಾಡಳಿತ ಭವನದಲ್ಲಿ ಮುಖ್ಯಮಂತ್ರಿಗಳ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ ನಂತರ ಕೋವಿಡ್ ನಿಯಂತ್ರಣ ದೈನಂದಿನ ಪ್ರಗತಿ ಮಾಹಿತಿ ಪಡೆದುಕೊಂಡ ಅವರು, ಕೋವಿಡ್ ಕರ್ತವ್ಯಕ್ಕೆ ನೇಮಕಗೊಂಡವರು ಗೈರಾಗುತ್ತಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
Related Articles
Advertisement
ವಿಡಿಯೋ ಕಾನ್ಪರೆನ್ಸ್ ಸಭೆಯಲ್ಲಿ ವಿವಿಧ ಜಿಲ್ಲಾ ಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ, ಕೋವಿಡ್ ನಿಯಂತ್ರಣ ಕ್ರಮಗಳು ಹಾಗೂ ವೈದ್ಯಕೀಯ ವ್ಯವಸ್ಥೆ ಕುರಿತಂತೆ ಜಿಲ್ಲಾವಾರು ಮಾಹಿತಿ ಪಡೆದುಕೊಂಡು ಮೇ 12ರವರೆಗೆ ಜಾರಿಗೊಳಿಸಿರುವ ಜನತಾ ಕರ್ಫ್ಯೂ ಕಟ್ಟುನಿಟ್ಟಾಗಿ ಪಾಲಿಸಬೇಕು. ಯಾವುದೇ ಮುಲಾಜಿಲ್ಲದೆ ಕಾರ್ಯರೂಪಗೊಳಿಸಿ ಕೋವಿಡ್ ನಿಯಂತ್ರಣಕ್ಕೆ ತರಬೇಕು. ಇಲ್ಲವಾದರೆ ಕರ್ಫ್ಯೂ ವಿಸ್ತರಿಸಬೇಕಾದೀತು ಎಂದು ಎಚ್ಚರಿಸಿದರು.
ಮನೆಯಲ್ಲೆ ಚಿಕಿತ್ಸೆ ಪಡೆಯುವವರಿಗೆ ವೈದ್ಯಕಿಯ ನಿಗಾ ವಹಿಸಿ, ಮೆಡಿಕಲ್ ಕಿಟ್‌ಗಳನ್ನು ನೀಡಿ ಕೋವಿಡ್ ಕೇರ್ ಸೆಂಟರ್ ಆರಂಭಿಸಿ. ರೆಮ್‌ಡಿಸಿವಿಯರ್ ಅಗತ್ಯವಿದ್ದವರಿಗೆ ಮಾತ್ರ ಬಳಸಿ ಎಂದು ಸಲಹೆ ನೀಡಿದ ಮುಖ್ಯಮಂತ್ರಿಗಳು, ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾ ಧಿಕಾರಿಗಳು ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳುವಂತೆ ಸೂಚಿಸಿದರು.
ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಮಾತನಾಡಿ, ಗ್ರಾಮೀಣ ಕೋವಿಡ್ ಟಾಸ್ಕ್ಫೋರ್ಸ್ ಚುರುಕುಗೊಳಿಸಿ, ಹಳ್ಳಿಗೆ ಬಂದವರ ತಪಾಸಣೆ ನಡೆಸಿ, ನಿಗಾ ವಹಿಸಬೇಕು. ಹಳ್ಳಿ ಹಳ್ಳಿಗಳಲ್ಲೂ ಕರ್ಫ್ಯೂ ಬಿಗಿಗೊಳಿಸಿ ಸರ್ಕಾರದ ಹೊಸ ಮಾರ್ಗ ಸೂಚಿಯಂತೆ ತಪಾಸಣೆ ಲಸಿಕೆ, ಸಂಪರ್ಕ ಪತ್ತೆ, ಐಸೋಲೇಷನ್ ವ್ಯವಸ್ಥೆ ಸಮಪರ್ಕವಾಗಿ ಕೈಗೊಳ್ಳಿ. ಅಗತ್ಯವಾದ ವೈದ್ಯಕೀಯ ಅಗತ್ಯಗಳನ್ನು ಸ್ಥಳೀಯವಾಗಿಯೇ ಖರೀದಿಗೆ ಅವಕಾಶ ನೀಡಲಾಗಿದೆ. ಜಿಲ್ಲಾ ಧಿಕಾರಿಗಳಿಗೆ ಎಲ್ಲಾ ಅ ಧಿಕಾರ ನೀಡಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ಜಿಲ್ಲೆಗಳಿಗೆ ಸರ್ಕಾರದಿಂದ ಎಲ್ಲ ನೆರವು ನೀಡಲಾಗುವುದು ಎಂದರು. ಎಸ್ಪಿ ಕೆ.ಜಿ.ದೇವರಾಜ, ಹೆಚ್ಚುವರಿ ಎಸ್ಪಿ ಸಂತೋಷ ವಿಜಯಕುಮಾರ, ಡಿಎಚ್‌ಒ ಇತರ ಅ ಧಿಕಾರಿಗಳು ಉಪಸ್ಥಿತರಿದ್ದರು.