Advertisement

ಹಾವೇರಿ: ನೇಣು ಬಿಗಿದುಕೊಂಡು ಅತಹತ್ಯೆಗೆ ಶರಣಾದ ಖಾಸಗಿ ಆಸ್ಪತ್ರೆಯ ವೈದ್ಯ

07:15 PM Aug 23, 2020 | sudhir |

ಹಾವೇರಿ: ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆಯ ಬಸವೇಶ್ವರ ನಗರದಲ್ಲಿ ರವಿವಾರ ನಡೆದಿದೆ.

Advertisement

ಆತ್ಮಹತ್ಯೆ ಮಾಡಿಕೊಂಡ ವೈದ್ಯರನ್ನು ಡಾ. ಜಗದೀಶ್ ಗೊಡ್ಡೆಮ್ಮಿ (47) ಎಂದು ತಿಳಿದುಬಂದಿದೆ. ತಮ್ಮ ನಿವಾಸದಲ್ಲೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಾವೇರಿ ನಗರದಲ್ಲಿರುವ ಗೌರಮ್ಮ ಸ್ಮಾರಕ ಮೆಮೋರಿಯಲ್ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ವಿಭಾಗದ ವೈದ್ಯರಾಗಿದ್ದರು ಎನ್ನಲಾಗಿದೆ ಆದರೆ ಆತ್ಮಹತ್ಯೆ ಮಾಡಿಕೊಳ್ಳಲು ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ.

ಸ್ಥಳಕ್ಕೆ ಸಿಪಿಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆ ಕಾರಣವೇನೆಂದು ಇನ್ನಷ್ಟೇ ತಿಳಿದುಬರಬೇಕಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next