Advertisement

Haveri: ಶಂಕಿತ ಡೆಂಗ್ಯೂ ಜ್ವರಕ್ಕೆ ಬಾಲಕಿ ಬಲಿ

01:21 PM Aug 09, 2024 | Team Udayavani |

ಹಾವೇರಿ: ಜಿಲ್ಲೆಯ ಶಿಗ್ಗಾವಿ ತಾಲೂಕಿನಲ್ಲಿ ಶಂಕಿತ ಡೆಂಗ್ಯೂ ಜ್ವರಕ್ಕೆ ಬಾಲಕಿಯೋರ್ವಳು ಮೃತಪಟ್ಟ ಘಟನೆ ನಡೆದಿದೆ.

Advertisement

ಶಿಡ್ಲಾಪುರ ಗ್ರಾಮದ ಬಾಲಕಿ ರೇಖಾ (10) ಡೆಂಗ್ಯೂ ಜ್ವರದಿಂದ ಹುಬ್ಬಳ್ಳಿ ಕೀಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.

ಜ್ವರ ಕಾಣಿಸಿಕೊಳ್ಳುತ್ತಿದ್ದಂತೆ ಶಿಗ್ಗಾವಿ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಕಿಮ್ಸ್ ಆಸ್ಪತ್ರೆಯಲ್ಲಿ ಬಾಲಕಿ ಕೊನೆಯುಸಿರೆಳೆದಿದ್ದಾಳೆ.

ಬಾಲಕಿ ಸಾವಿಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಗ್ರಾಮ ಪಂಚಾಯತಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಲಾಗುತ್ತಿದೆ. ಗ್ರಾಮದಲ್ಲಿ ಸ್ವಚ್ಛತೆ ಕಾಪಾಡದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next