Advertisement

ಹಾವೇರಿ: ಗ್ಯಾರಂಟಿ ಯೋಜನೆ ಮೇಲ್ವಿಚಾರಣೆಗೆ ಅನುಷ್ಠಾನ ಸಮಿತಿ-ಶಾಸಕ ರುದ್ರಪ್ಪ ಲಮಾಣಿ

05:33 PM Aug 27, 2024 | Team Udayavani |

ಉದಯವಾಣಿ ಸಮಾಚಾರ
ಹಾವೇರಿ: ಪಂಚ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಮತ್ತು ಮೇಲ್ವಿಚಾರಣೆ ಮಾಡಲು
ಜಿಲ್ಲಾಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ರಚಿಸಲಾಗಿದೆ ಎಂದು ವಿಧಾನಸಭೆ ಉಪ ಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ಹೇಳಿದರು.

Advertisement

ಸ್ಥಳೀಯ ಜಿಪಂ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಉದ್ಘಾಟಿಸಿ ಮಾತನಾಡಿದ ಅವರು, ಈಗಾಗಲೇ ರಾಜ್ಯಮಟ್ಟದಲ್ಲಿ ಸಮಿತಿ ರಚಿಸಲಾಗಿದೆ. ಹಾಗೆಯೇ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚಿಸುವ ಮೂಲಕ ಬಡವರ ಕಲ್ಯಾಣ ಕೈಕೊಳ್ಳಲಾಗುವುದು ಎಂದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ರಾಜ್ಯ ಉಪಾಧ್ಯಕ್ಷ ಎಸ್‌.ಆರ್‌. ಪಾಟೀಲ್‌ ಮಾತನಾಡಿ, ರಾಜ್ಯದಲ್ಲಿ ಗ್ಯಾರಂಟಿ
ಯೋಜನೆಗಳ ಜಾರಿಯಿಂದ ಹೊಸ ಕ್ರಾಂತಿ ಪ್ರಾರಂಭವಾಗಿದೆ. ಬೇರೆ ಬೇರೆ ರಾಜ್ಯದವರು ಕೂಡ ಇಂದು ನಮ್ಮ ಸರ್ಕಾರ ಜಾರಿಗೆ
ತಂದಿರುವ ಗ್ಯಾರಂಟಿ ಯೋಜನೆಗಳನ್ನು ಅಳವಡಿಸಿಕೊಳ್ಳುತ್ತಿವೆ. ಇದು ರಾಜ್ಯದಲ್ಲಿ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ
ಯೋಜನೆಗಳ ಉಪಯುಕ್ತತೆ ಮತ್ತು ಮಹತ್ವ ತಿಳಿಸುತ್ತಿದೆ ಎಂದರು.

ಈಗಾಗಲೇ ಸರ್ಕಾರ ಜಿಲ್ಲೆಗೆ 1300 ಕೋಟಿ ಅನುದಾನವನ್ನು ವಿವಿಧ ಗ್ಯಾರಂಟಿ ಯೋಜನೆಗಳಿಗೆ ಹಂಚಿಕೆ ಮಾಡಿದೆ. ಇದು ಜಿಲ್ಲೆಯ ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗಿವೆ ಎಂದರು.

ಹಾನಗಲ್ಲ ಶಾಸಕ ಶ್ರೀನಿವಾಸ ಮಾನೆ ಮಾತನಾಡಿ, ಅನೇಕ ಟೀಕೆ ಟಿಪ್ಪಣಿಗಳ ನಡುವೆ ರಾಜ್ಯ ಸರ್ಕಾರ ಈ ಐದು ಗ್ಯಾರಂಟಿ
ಯೋಜನೆಗಳನ್ನು ಜಾರಿಗೊಳಿಸಿದೆ. ಇಂದು ಈ ಯೋಜನೆಗಳು ಜನರಿಗೆ ಆರ್ಥಿಕ ಶಕ್ತಿ ತುಂಬಿವೆ ಎಂದರು.

Advertisement

ಶಾಸಕ ಬಸವರಾಜ ಶಿವಣ್ಣನವರ, ನಗರಾಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ ಎಸ್‌. ಎಫ್‌.ಎನ್‌. ಗಾಜಿಗೌಡ್ರ, ಜಿಪಂ ಸಿಇಒ ಅಕ್ಷಯ ಶ್ರೀಧರ, ದೇವಗಿರಿ ಗ್ರಾಪಂ ಅಧ್ಯಕ್ಷ ಪ್ರಭಾಕರ ಪಾರಿಗಂಟಿ, ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಇತರರು ಇದ್ದರು.

ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲೆಯಲ್ಲಿ ಸಮಿತಿ ರಚಿಸಿ, ಅದರ ಕಚೇರಿ ಉದ್ಘಾಟನೆ ಮಾಡಲಾಯಿತು. ಮುಂದಿನ ದಿನಮಾನಗಳಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಸಮನ್ವಯದೊಂದಿಗೆ ಗ್ಯಾರಂಟಿ
ಯೋಜನೆಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸಲು ಕಾರ್ಯನಿರ್ವಹಿಸಲಾಗುವುದು.
ಎಂ.ಎಂ. ಹಿರೇಮಠ, ಜಿಲ್ಲಾಮಟ್ಟದ ಗ್ಯಾರಂಟಿ
ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ

Advertisement

Udayavani is now on Telegram. Click here to join our channel and stay updated with the latest news.

Next