ಹಾವೇರಿ: ಹಾವೇಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಂ ಹೆಬ್ಬಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಅವರು ಬಿಡುಗಡೆಗೊಳಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಜನೇವರಿ 6, 7, 8 ರಂದು ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯದ ಲಾಂಛನ ಬಿಡುಗಡೆಗೊಳಿಸಲಾಯಿತು.
ಈ ವೇಳೆ ಕಸಾಪ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ, ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ, ಜಿಪಂ ಸಿಇಒ ಮಹ್ಮದ್ ರೋಷನ್, ಶಾಸಕರಾದ ನೆಹರು ಓಲೇಕಾರ, ಅರುಣಕುಮಾರ್ ಪೂಜಾರ, ಮಾಜಿ ಸಚಿವ ರುದ್ರಪ್ಪ ಲಮಾಣಿ, ನಗರಸಭೆ ಅಧ್ಯಕ್ಷ ಸಂಜೀವಕುಮಾರ್ ನೀರಲಗಿ, ಕಸಾಪ ಜಿಲ್ಲಾಧ್ಯಕ್ಷ ಎಚ್.ಬಿ. ಲಿಂಗಯ್ಯ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.