Advertisement
ಐದನೇ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಜಿಲ್ಲಾ ಪಂಚಾಯಿತಿ, ಜಿಲ್ಲಾಡಳಿತ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಶುಕ್ರವಾರ ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾಮಟ್ಟದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದೃಢವಾದ ದೇಶ ನಿರ್ಮಾಣಕ್ಕೆ ಸದೃಢವಾದ ಮನಸ್ಸು, ಆರೋಗ್ಯವಂತ ಶರೀರ ಹಾಗೂ ಹುಮ್ಮಸ್ಸುಳ್ಳ ಮನೋಬಲ ಅಗತ್ಯವಾಗಿದೆ. ಈ ಎಲ್ಲವೂ ಯೋಗಾಭ್ಯಾಸದಿಂದ ಲಭ್ಯವಾಗುತ್ತದೆ. ಪ್ರತಿಯೊಬ್ಬರೂ ಯೋಗ ಕಲಿತು ಸದೃಢವಾದ ದೇಶ ನಿರ್ಮಾಣಕ್ಕೆ ಶ್ರಮಿಸೋಣ ಎಂದರು.
Related Articles
Advertisement
ಕಾರ್ಯಕ್ರಮದಲ್ಲಿ ಜಿ.ಪಂ. ಸದಸ್ಯರಾದ ಕೊಟ್ರೇಶಪ್ಪ ಬಸೇಗಣ್ಣಿ ಹಾಗೂ ಸಿದ್ದರಾಜ ಕಲಕೋಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಲೀಲಾವತಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿ.ಪಂ. ಉಪಕಾರ್ಯದರ್ಶಿ ಜಿ.ಗೋವಿಂದಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನಪ್ಪ ವಡಗೇರಿ, ವಾರ್ತಾಕಾರಿ ಬಿ.ಆರ್.ರಂಗನಾಥ್, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶಾಕೀರ ಅಹ್ಮದ್, ಪೌರಾಯುಕ್ತ ಬಸವರಾಜ ಜಿದ್ದಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಅನ್ನಪೂರ್ಣ, ತಹಶೀಲ್ದಾರ ಶಿವಕುಮಾರ ಇದ್ದರು. ಜಿಲ್ಲಾ ಆಯುಷ್ ಅಧಿಕಾರಿ ಡಾ.ಎ.ಎ.ಸ್.ಶಿರೋಳ ಸ್ವಾಗತಿಸಿದರು. ಡಾ.ಜಿ.ಸಿ. ನಿಡಗುಂದಿ ಕಾರ್ಯಕ್ರಮ ನಿರೂಪಿಸಿದರು. ಡಾ.ಬಾಬಾಸೇಬ ವಂದಿಸಿದರು.
ಯೋಗ ಪ್ರಾತ್ಯಕ್ಷಿಕೆ.. ಬೆಳಿಗ್ಗೆ 6-30ಕ್ಕೆ ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಲೀಲಾವತಿ ಸ್ವಚ್ಛಮೇವ ಜಯತೆ ಹಾಗೂ ಜಲಾಮೃತ ರಕ್ಷಣೆಗೆ ಪ್ರತಿಜ್ಞಾವಿಧಿ ಬೋಧಿಸಿದರು. ಮುಂಜಾನೆ 7 ಗಂಟೆಗೆ ಸರಿಯಾಗಿ ಆರಂಭಗೊಂಡ ಯೋಗ ಪ್ರದರ್ಶನವನ್ನು ಹಾವೇರಿ ಯೋಗ ಸಂಸ್ಥೆಯ ಮುಖ್ಯಸ್ಥ ಪ್ರೇಮಕುಮಾರ ಮುದ್ದಿ ನೇತೃತ್ವದ ಮಾರ್ಗದರ್ಶಕರು 45 ನಿಮಿಷ ವಿವಿಧ ಯೋಗಾಸನಗಳ ಪ್ರದರ್ಶಿಸಿದರು. ನಂತರ ಈಶ್ವರೀಯ ವಿದ್ಯಾಲಯದ ಲೀಲಾಜಿ ಅವರು ಧ್ಯಾನ ಮಂತ್ರವನ್ನು ಪಠಿಸಿದರು.
ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಯೋಗ ಪ್ರಾತ್ಯಕ್ಷಿಕೆಯಲ್ಲಿ ಭಾಗವಹಿಸಿದ್ದರು. ವಿಶೇಷವಾಗಿ ಜಿಲ್ಲಾ ಮೀಸಲು ಪಡೆಯ ಪೊಲೀಸ್ ಅಧಿಕಾರಿಗಳು ಹಾಗೂ ಪೇದೆಗಳು, ವಿವಿಧ ಶಾಲಾ ಮಕ್ಕಳು, ಸಾರ್ವಜನಿಕರು ಯೋಗಾಸನ ಪ್ರದರ್ಶನದಲ್ಲಿ ಪಾಲ್ಗೊಂಡು ಗಮನ ಸೆಳೆದರು. ಇದರೊಂದಿಗೆ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಜಿಲ್ಲೆಯ ಯೋಗಪಟುಗಳು ಯೋಗದ ಕ್ಲಿಷ್ಟಕರ ಆಸನಗಳನ್ನು ಪ್ರದರ್ಶಿಸಿ ಎಲ್ಲರ ಮೆಚ್ಚುಗೆ ಗಳಿಸಿದರು.