Advertisement

ಮಹಾಮಾರಿ ವಿರುದ್ಧ ಹೋರಾಟಕ್ಕೆ ಪ್ರತ್ಯೇಕ ಆಸ್ಪತ್ರೆ

03:00 PM Apr 07, 2020 | Naveen |

ಹಾವೇರಿ: ಕೋವಿಡ್‌-19 ಸೋಂಕು ಪೀಡಿತರಿಗೆ ತುರ್ತು ಚಿಕಿತ್ಸೆಗಾಗಿ ಪ್ರತ್ಯೇಕ ಕೋವಿಡ್‌-19 ಆಸ್ಪತ್ರೆಯನ್ನು ಗುರುತಿಸಿ ಪೂರ್ಣ ಪ್ರಮಾಣದ ವೈದ್ಯಕೀಯ
ಸೌಲಭ್ಯದೊಂದಿಗೆ ಸಜ್ಜಾಗಿ ಎಂದು ಕರ್ನಾಟಕ ಸರ್ಕಾರದ ಸಾರ್ವಜನಿಕ ಜಮೀನುಗಳ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್‌ ಜೈನ್‌ ಸೂಚನೆ ನೀಡಿದರು.

Advertisement

ಜಿಲ್ಲೆಯಲ್ಲಿ ನೋವೆಲ್‌ ಕೊರೊನಾ ವೈರಸ್‌ ತಡೆಗೆ ಜಿಲ್ಲಾಡಳಿತ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯ್ದ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು. ಜಿಲ್ಲಾ ಕೇಂದ್ರದಲ್ಲಿ ಕೋವಿಡ್‌-19 ಆಸ್ಪತ್ರೆಯನ್ನು ಸಜ್ಜುಗೊಳಿಸಿ. ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿರುವ ಎಲ್ಲ ವೆಂಟಿಲೇಟರ್‌ಗಳನ್ನು ಜಿಲ್ಲಾ ಕೋವಿಡ್‌ ಆಸ್ಪತ್ರೆಗೆ ಸ್ಥಳಾಂತರಿಸಿ. ತಜ್ಞವೈದ್ಯರ ತಂಡ, ಅರೆವೈದ್ಯಕೀಯ ಸಿಬ್ಬಂದಿ ತಂಡ ರಚನೆ ಮಾಡಿ. ಕೊರೊನಾ ಸೋಂಕಿತರು ಕಂಡುಬಂದರೆ ತುರ್ತಾಗಿ ಚಿಕಿತ್ಸೆ ನೀಡಲು ಸಜ್ಜಾಗಬೇಕು. ಒಂದಕ್ಕಿಂತ ಹೆಚ್ಚು ಪ್ರಕರಣಗಳು ಕಂಡುಬಂದರೂ ಒಂದೆಡೆ ಕೋವಿಡ್‌ ಚಿಕಿತ್ಸೆಗೆ ಸ್ಪಂದಿಸಲು ಒಂದೇ ಕಾಂಪ್ಲೆಕ್ಸ್‌ನಲ್ಲಿ ಕೋವಿಡ್‌ ಆಸ್ಪತ್ರೆ ಪೂರ್ಣ ಪ್ರಮಾಣದ ವೈದ್ಯಕೀಯ ಸೌಕರ್ಯದೊಂದಿಗೆ ಸಿದ್ಧಗೊಳ್ಳಬೇಕು ಎಂದು ಸಲಹೆ ನೀಡಿದರು.

ಸಾರ್ವಜನಿಕರಿಗೆ ದಿನನಿತ್ಯದ ದಿನಸಿ, ತರಕಾರಿಗಳಿಗೆ ಯಾವುದೇ ತೊಂದರೆಯಾಗಬಾರದು. ರೈತರ ಉತ್ಪನ್ನಗಳ ಮಾರಾಟ ಹಾಗೂ ಕೃಷಿ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗಬಾರದು. ಕೃಷಿ ಉತ್ಪನ್ನ ಮಾರುಕಟ್ಟೆಗಳನ್ನು ಮುಚ್ಚಬಾರದು. ಚೆಕ್‌ಪೋಸ್ಟ್‌ಗಳಲ್ಲಿ ಸರಕು ಸಾಗಾಣಿಕೆಗೆ ತೊಂದರೆಯಾಗಬಾರದು. ಅಗತ್ಯ ವಸ್ತುಗಳ ಉತ್ಪಾದನಾ ಚಟುವಟಿಕೆಗಳನ್ನು ಆರಂಭಿಸಲು ನಿಯಮಾನುಸಾರ ಕ್ರಮ ತೆಗೆದುಕೊಳ್ಳಬೇಕೆಂದರು.

ಜನಧನ್‌ ಸೇರಿದಂತೆ ವಿವಿಧ ಯೋಜನೆಗಳಡಿ ಫಲಾನುಭವಿಗಳ ಖಾತೆಗೆ ನೇರ ನಗದು ಜಮಾ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ಎಟಿಎಂಗಳ
ಮುಂದೆ ಹಾಗೂ ಬ್ಯಾಂಕ್‌ಗಳ ಮುಂದೆ ಜನಜಂಗುಳಿಯಾಗದಂತೆ ಅಂತರವನ್ನು ಕಾಯ್ದುಕೊಳ್ಳಬೇಕು. ಅಧಿಕಾರಿಗಳು ಕ್ಷೇತ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಸಲಹೆ ನೀಡಿದರು. ವೈದ್ಯರಿಗೆ ಮಾತ್ರ ಎನ್‌-95: ಚಿಕಿತ್ಸೆ ನೀಡುವ ವೈದ್ಯರು ಮಾತ್ರ ಎನ್‌-95 ಮಾಸ್ಕ್
ಧರಿಸಬೇಕು. ಅ ಧಿಕಾರಿಗಳು, ಸಾಮಾನ್ಯ ಜನರಿಗೆ ಎನ್‌ 95 ಮಾಸ್ಕ್ ಅವಶ್ಯಕತೆ ಇಲ್ಲ. ಅನಗತ್ಯವಾಗಿ ಎನ್‌- 95 ಮಾಸ್ಕ್ಗಳನ್ನು ವೈದ್ಯಕೀಯ ಸಿಬ್ಬಂದಿ ಹೊರತುಪಡಿಸಿ ಬೇರೆಯವರಿಗೆ ನೀಡಬೇಡಿ ಎಂದು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ, ಎಸ್ಪಿ ಕೆ.ಜಿ. ದೇವರಾಜು, ಜಿಪಂ ಸಿಇಒ ರಮೇಶ ದೇಸಾಯಿ, ಅಪರ ಜಿಲ್ಲಾ ಧಿಕಾರಿ ಯೋಗೇಶ್ವರ,
ಹೆಚ್ಚುವರಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಉಪವಿಭಾಗಾ ಕಾರಿಗಳಾದ ಡಾ| ದಿಲೀಷ್‌ ಶಶಿ, ಅನ್ನಪೂರ್ಣಾ ಮುದಕಮ್ಮನವರ,
ಡಿಎಚ್‌ಒ ಡಾ| ರಾಜೇಂದ್ರ ದೊಡ್ಡಮನಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ನಾಗರಾಜ ನಾಯಕ, ವಿನೋದಕುಮಾರ ಹೆಗ್ಗಳಗಿ, ಮಂಜುನಾಥ, ಬಿ.ಆರ್‌. ರಂಗನಾಥ್‌ ಇನ್ನಿತರರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next