Advertisement

Haveri: ಕುಡಿಯುವ ನೀರಿನ ವ್ಯವಸ್ಥೆಗೆ ಮುನ್ನೆಚ್ಚರಿಕೆ ವಹಿಸಿ

05:31 PM Oct 21, 2023 | Team Udayavani |

ಹಾವೇರಿ: ಜಿಲ್ಲೆಯ ನಗರ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ವಿತ್ತೀಯ ಸುಧಾರಣೆ, ಆರ್ಥಿಕ ಇಲಾಖೆ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ| ಆರ್‌. ವಿಶಾಲ್‌ ಸೂಚನೆ ನೀಡಿದರು.

Advertisement

ಸ್ಥಳೀಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಗರಾಭಿವೃದ್ಧಿ ಹಾಗೂ ಆರೋಗ್ಯ ಇಲಾಖೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಜಿಲ್ಲೆಯ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂಬ ಮಾಹಿತಿ ನೀಡುತ್ತಿದ್ದೀರಿ. ಆದರೆ, ಯಾವ ನೀರಿನ ಮೂಲದಿಂದ ನಗರ-ಪಟ್ಟಣ ಪ್ರದೇಶಗಳಿಗೆ ನೀರು ಪೂರೈಸಲಾಗುತ್ತದೆ, ನೀರಿನ ಮೂಲ, ಸಂಗ್ರಹ ವಿವರ, ಸಂಗ್ರಹ ಮಾಡಲಾದ ನೀರು ಎಷ್ಟು ತಿಂಗಳವರೆಗೆ ಪೂರೈಸಲು ಸಾಧ್ಯವಾಗುತ್ತದೆ ಎಂಬ ವಿವರ ಸಲ್ಲಿಸಬೇಕೆಂದು ಸೂಚನೆ ನೀಡಿದರು.

ಜಿಲ್ಲೆಯ ಎಲ್ಲ ನಗರ, ಪಟ್ಟಣಗಳ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ನಗರದ ಕುಡಿಯುವ ನೀರಿನ ಮೂಲ, ಕೊಳವೆಬಾವಿಗಳ ವಿವರ, ಅಂತರ್ಜಲ ಮಟ್ಟಗಳ ವಿವರ, ದುರಸ್ತಿಯಲ್ಲಿರುವ ಹಾಗೂ ಸುಸ್ಥಿತಿಯಲ್ಲಿರುವ ಕೊಳವೆಬಾವಿಗಳ ಮಾಹಿತಿ ಸಂಗ್ರಹಿಸಬೇಕು. ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಸಿದ್ಧತೆ ಮಾಡಿಕೊಳ್ಳಬೇಕು. ಪರ್ಯಾಯ ನೀರಿನ ಲಭ್ಯತೆ, ಮೂಲಗಳನ್ನು ಗುರುತು ಮಾಡಿಕೊಂಡು ಅಗತ್ಯ ಬಿದ್ದಾಗ ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕೆಂದು ತಾಕೀತು ಮಾಡಿದರು.

ಆರೋಗ್ಯ ಕಾರ್ಯಕ್ರಮಗಳ ಪರಿಶೀಲನೆ: ಜಿಲ್ಲೆಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನ, ತಪಾಸಣೆ, ಚಿಕಿತ್ಸೆ ಪ್ರಗತಿ ಕುರಿತಂತೆ ಜಿಲ್ಲೆಯ ತಾಲೂಕು ಹಾಗೂ ಜಿಲ್ಲಾ ಮಟ್ಟದ ವೈದ್ಯರಿಂದ ಪ್ರಗತಿಯ ಮಾಹಿತಿ ಪಡೆದುಕೊಂಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಡಯಾಲಿಸಿಸ್‌ ಸೈಕಲ್‌ಗ‌ಳನ್ನು ಹೆಚ್ಚು ಮಾಡಿ ರೋಗಿಗಳಿಗೆ ಅನುಕೂಲ ಕಲ್ಪಿಸಿ. ಡಯಾಲಿಸಿಸ್‌ ಯಂತ್ರ ನಿರ್ವಹಣೆಗೆ ಹೆಚ್ಚುವರಿ ತಾಂತ್ರಿಕ ಸಿಬ್ಬಂದಿ ನೇಮಕ ಮಾಡಿಕೊಳ್ಳಿ ಎಂದು ಸೂಚನೆ ನೀಡಿದರು.

Advertisement

ಜಿಲ್ಲಾ ಚಾಲೆಂಜ್‌ ಫಂಡ್‌ನಿಂದ ಡಯಾಲಿಸಿಸ್‌ ಯಂತ್ರ ಖರೀದಿಗೆ ಪ್ರಸ್ತಾವನೆ ಸಲ್ಲಿಸಿ, ಆರೋಗ್ಯ ಸುರಕ್ಷಾ ಸಮಿತಿಯ ಅನುದಾನದಲ್ಲಿ ಡಯಾಲಿಸಿಸ್‌ ಯಂತ್ರ ಸೇರಿದಂತೆ ವಿವಿಧ ವೈದ್ಯಕೀಯ ಉಪಕರಣಗಳ ದುರಸ್ತಿಗೆ ಕ್ರಮ ವಹಿಸಬೇಕು. ಕಾರ್ಲೋಸ್ಕೋಪಿಕ್‌ ಯಂತ್ರ ಖರೀದಿಗೆ ಕ್ರಮ ವಹಿಸಿ, ಆಯುಷ್ಮಾನ ಭಾರತ್‌ ಆರೋಗ್ಯ ರಕ್ಷಾ ಕರ್ನಾಟಕ ಯೋಜನೆಯಡಿ ಪ್ರತಿ ಆಸ್ಪತ್ರೆಯಲ್ಲಿ 10 ರಿಂದ 20 ಲಕ್ಷ ರೂ. ಅನುದಾನವಿದೆ.

ಈ ಅನುದಾನದಲ್ಲಿ ಮಾರ್ಗಸೂಚಿಯಂತೆ ಔಷ ಧ ಖರೀದಿ, ಆಸ್ಪತ್ರೆಯ ಇತರ ಅಗತ್ಯತೆಗಳ ಖರೀದಿಗೆ ಬಳಸಿಕೊಳ್ಳಬೇಕೆಂದು ಸಲಹೆ ನೀಡಿದರು. ಸಂತಾನ ಹರಣ ಶಸ್ತ್ರ ಚಿಕಿತ್ಸಾ ಕ್ಯಾಂಪ್‌ಗ್ಳನ್ನು ಹೆಚ್ಚು ಮಾಡಬೇಕು. ಹೆಚ್ಚು ಶಸ್ತ್ರ ಚಿಕಿತ್ಸೆಗಳು ನಡೆಯಬೇಕು.

ತಾಲೂಕುವಾರು ವೈದ್ಯರಿಗೆ ಕ್ಯಾಂಪ್‌ಗಳ ಗುರಿ ನಿಗದಿಪಡಿಸಿ ಜನರಿಗೆ ಅರಿವು ಮತ್ತು ಮನವೊಲಿಸಿ ಶಸ್ತ್ರ ಚಿಕಿತ್ಸಾ ಪ್ರಮಾಣ ಹೆಚ್ಚಾಗುವಂತೆ ನೋಡಿಕೊಳ್ಳಬೇಕು. ಇದರಿಂದ ಬಹಳ ಜನರಿಗೆ ಅನುಕೂಲವಾಗಲಿದೆ ಎಂದರು. ಅಂಧತ್ವ ನಿವಾರಣೆ ನಿಟ್ಟಿನಲ್ಲಿ ಆಶಾಕಿರಣ ಯೋಜನೆಯಡಿ ಉಚಿತ ಕನ್ನಡ ವಿತರಣೆ ಟೆಂಡರ್‌ ಪ್ರಕ್ರಿಯೆ ತ್ವರಿತಗೊಳಿಸಿ ಉಚಿತ ಕನ್ನಡಕ ವಿತರಣೆಗೆ ಕ್ರಮ ವಹಿಸಬೇಕು. ಅಂಬ್ಯುಲೆನ್ಸ್‌ ಸೇವೆ ಸೇರಿದಂತೆ ವೈದ್ಯಕೀಯ ಸೌಲಭ್ಯಗಳನ್ನು ಹೆಚ್ಚಳ ಮಾಡಿಕೊಳ್ಳಬೇಕು.

ಕ್ಯಾಂಪ್‌ಗಳ ಮೂಲಕ ಸಾಮೂಹಿಕ ತಪಾಸಣಾ ಕಾರ್ಯ ಚುರುಕುಗೊಳಿಸಬೇಕು. ವೈದ್ಯರ ಕೊರತೆ ಇದ್ದಲ್ಲಿ ಹುಬ್ಬಳ್ಳಿಯ ಕಿಮ್ಸ್‌ ತರಬೇತಿ ವಿದ್ಯಾರ್ಥಿಗಳನ್ನು ಬಳಸಿಕೊಳ್ಳುವಂತೆ ಸಲಹೆ ನೀಡಿದರು. ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಮಮತಾ ಅವರು, ನಗರ ಕುಡಿಯುವ ನೀರಿನ ವ್ಯವಸ್ಥೆ ಕುರಿತಂತೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ರಘುನಂದನ್‌ ಮೂರ್ತಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ್‌, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಹಾವೇರಿ ಉಪವಿಭಾಗಾಧಿಕಾರಿ ಡಾ.ಕೆ.ಚನ್ನಪ್ಪ, ಸವಣೂರ ಉಪವಿಭಾಗಾಧಿಕಾರಿ
ಮಹ್ಮದ್‌, ನಗರಾಭಿವೃದ್ಧಿ ಕೋಶದ ಅಭಿಯಂತರ ವಿರಕ್ತಿಮಠ, ಜಿಲ್ಲಾ ಶಸ್ತ್ರಚಿಕಿತ್ಸ ಡಾ.ಪಿ.ಆರ್‌.ಹಾವನೂರ, ಜಿಲ್ಲಾ ಆರ್‌.ಸಿ.ಎಚ್‌.ಅಧಿಕಾರಿ ಡಾ.ಜಯಾನಂದ, ತಾಲೂಕು ವೈದ್ಯಾಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಅಭಿಯಂತರರು ಹಾಗೂ ವಿವಿಧ ವೈದ್ಯರು ಹಾಜರಿದ್ದರು.

ಘನತ್ಯಾಜ್ಯ ವಿಲೇವಾರಿ ಘಟಕ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ ನಗರದ ತ್ಯಾಜ್ಯ ವಿಲೇವಾರಿ ಕ್ರಮಬದ್ಧವಾಗಿರಬೇಕು. ಮುಂದಿನ 15 ದಿನದೊಳಗಾಗಿ ಈಗಾಗಲೇ ಪ್ರಗತಿಯಲ್ಲಿರುವ ಘನತ್ಯಾಜ್ಯ ವಿಲೇವಾರಿ ಘಟಕಗಳ ಕಾಮಗಾರಿಗಳನ್ನು ಪೂರ್ಣಗೊಳಿಸಿ ಕಾರ್ಯರೂಪಕ್ಕೆ ತರಬೇಕು. ಹಸಿ ಕಸ, ಒಣ ಕಸಗಳ ಪ್ರತ್ಯೇಕ ಸಂಗ್ರಹ ಹಾಗೂ ವಿಲೇವಾರಿ, ನಗರದ ಸ್ವತ್ಛತಾ ಕಾರ್ಯ, ಡ್ರೆ„ನೇಜ್‌ ಗಳ ಸ್ವತ್ಛತಾ ಕಾರ್ಯವನ್ನು ಕೇವಲ ಪೌರಕಾರ್ಮಿಕರ ಮೇಲೆ ಬಿಡದೆ ಖುದ್ದಾಗಿ ಎಲ್ಲ ಮುಖ್ಯಾಧಿಕಾರಿಗಳು ಬೆಳಗಿನ ವೇಳೆ ನಗರ ಸಂಚಾರ ಮಾಡಿ ಖುದ್ದಾಗಿ ಪರಿಶೀಲಿಸಬೇಕು. ಮುಂದಿನ ದಿನಗಳಲ್ಲಿ ನಾನೇ ಖುದ್ದಾಗಿ
ಅನಿರೀಕ್ಷಿತ ಭೇಟಿ ನೀಡಿ, ನಗರ ಸ್ವಚ್ಛತೆ ಪರಿಶೀಲಿಸುವುದಾಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಿಳಿಸಿದರು.

ನಗರದ ನೀರಿನ ಕರ, ಮನೆಗಳ ಕರ ಹಾಗೂ ಮಳಿಗೆಗಳ ಬಾಡಿಗೆಯನ್ನು ಕಾಲಮಿತಿಯೊಳಗೆ ಸಂಗ್ರಹ ಮಾಡಬೇಕು. ನಗರ ಸ್ಥಳೀಯ ಸಂಸ್ಥೆಗಳ ಬಿಲ್‌ ಕಲೆಕ್ಟರ್‌ ಹಾಗೂ ಕಂದಾಯ ಅಧಿ ಕಾರಿಗಳಿಗೆ ಗುರಿ ನಿಗದಿಪಡಿಸಿ ನಿಯಮಿತವಾಗಿ ಕರ ಸಂಗ್ರಹಕ್ಕೆ ಕ್ರಮ ವಹಿಸಬೇಕು. ಕನಿಷ್ಟ ಶೇ.75ರಷ್ಟು ಪ್ರಮಾಣದಲ್ಲಿ ಕರ ಸಂಗ್ರಹ ಪ್ರಮಾಣ ಇರಬೇಕು.
*ಡಾ| ಆರ್‌.ವಿಶಾಲ್‌, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ

Advertisement

Udayavani is now on Telegram. Click here to join our channel and stay updated with the latest news.

Next