Advertisement

ಮುಂದುವರೆದ ಮಳೆ: ಹಾವೇರಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ

08:13 AM Jul 27, 2023 | Team Udayavani |

ಹಾವೇರಿ: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಜು.27ರಂದು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಗುರುವಾರ ಬೆಳಗ್ಗೆ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಆದೇಶಿಸಿದ್ದಾರೆ.

Advertisement

ಜಿಲ್ಲಾದ್ಯಂತ ಬಿಟ್ಟು ಬಿಡದೇ ಮಳೆ ಸುರಿಯುತ್ತಿದ್ದು, ಗುರುವಾರ ಸಹ ಮಳೆ ಮುಂದುವರೆಯುವ ಸಂಭವ ಇರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಖಾಸಗಿ ಹಾಗೂ ಸರ್ಕಾರಿ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ.

ಉಳಿದಂತೆ ಎಲ್ಲ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಎಂಜಿನೀಯರಿಂಗ್ ಮತ್ತು ಐಟಿಐ ಕಾಲೇಜುಗಳ ತರಗತಿಗಳು ಎಂದಿನಂತೆ ನಡೆಯುತ್ತವೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಸಿಸಿಟಿವಿ ದೃಶ್ಯಾವಳಿ ಸಲ್ಲಿಸಲು ಹೈಕೋರ್ಟ್‌ ಸೂಚನೆ

Advertisement

Udayavani is now on Telegram. Click here to join our channel and stay updated with the latest news.

Next