Advertisement
ಶಿಕ್ಷಕರು ದೇವರಿಗೆ ಸಮಾನರು. ನಾವು ಎಷ್ಟೇ ಉನ್ನತ ಹುದ್ದೆ ಹೊಂದಿದರೂ ಅದಕ್ಕೆ ಕಾರಣ ಶಿಕ್ಷಕರು. ಶಿಕ್ಷಕರನ್ನು ಎಲ್ಲರೂ ಗೌರವಿಸಬೇಕು. ಸಮಾಜದಲ್ಲಿ ರೈತರು ಎಷ್ಟು ಮುಖ್ಯವೋ ಶಿಕ್ಷಕರು ಅಷ್ಟೇ ಮುಖ್ಯವಾಗಿದ್ದಾರೆ. ಶಿಕ್ಷಣವಿಲ್ಲವೆಂದರೆ ಏನನ್ನೂ ಉಳಿಹಿಸಿಕೊಳ್ಳಲು ಸಾಧ್ಯವಿಲ್ಲ. ಸುಭದ್ರ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದರು. ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಅವರು ಶಿಕ್ಷಕ ವೃತ್ತಿಯನ್ನು ಅಪಾರವಾಗಿ ಗೌರವಿಸುತ್ತಿದ್ದರು. ಹೀಗಾಗಿ ಅವರ ಜನ್ಮ ದಿನವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಬೇಕು ಎಂದು ಹೇಳುವ ಮೂಲಕ ಶಿಕ್ಷಕ ವೃತ್ತಿಗೆ ಮೆರಗು ನೀಡಿದ್ದಾರೆ. ವಿಶೇಷವಾಗಿ ಅವರು ಮೈಸೂರು ಮಹಾರಾಜಾ ಕಾಲೇಜಿನಲ್ಲಿ ಸಹ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದು ನಮ್ಮೆಲ್ಲರಿಗೂ ಅಭಿಮಾನದ ಸಂಗತಿ ಎಂದ ಅವರು, ಶಿಕ್ಷಕರ ಸಮಸ್ಯೆ ನನ್ನ ಸಮಸ್ಯೆ. ಬೇಡಿಕೆಗಳಿಗೆ ನಾನು ಸ್ಪಂದಿಸುತ್ತೇನೆ ಎಂದು ಭರವಸೆ ನೀಡಿದರು.
Related Articles
Advertisement
ನಮ್ಮ ಪರಂಪರೆ ಶಿಕ್ಷಕರಿಗೆ ದೈವತ್ವ ಸ್ಥಾನ ನೀಡಿದೆ. ದೇಶದ ಅಭಿವೃದ್ಧಿಗೆ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನೆಪ್ಪ ವಡಗೇರಿ ಪ್ರಾಸ್ತಾವಿಕ ಮಾತನಾಡಿದರು. ಸಮಾರಂಭದಲ್ಲಿ ವಿಪ ಸದಸ್ಯ ಶ್ರೀನಿವಾಸ ಮಾನೆ, ಜಿಪಂ ಉಪಾಧ್ಯಕ್ಷೆ ದೀಪಾ ಅತ್ತಿಗೇರಿ, ತಾಲೂಕು ಪಂಚಾಯತ್ ಅಧ್ಯಕ್ಷ ಕರಿಯಪ್ಪ ಮಲ್ಲಪ್ಪ ಉಂಡಿ, ತಾಪಂ ಉಪಾಧ್ಯಕ್ಷೆ ಕಮಲವ್ವ ಪಾಟೀಲ, ಜಿಪಂ ಸದಸ್ಯರಾದ ಸಿದ್ದರಾಜ ಕಲಕೋಟಿ, ಅಬ್ದುಲ್ ಮುನಾಫ್ ಎಲಿಗಾರ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ನಾಗ್, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಣ್ಣ, ಕರ್ನಾಟಕ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಇದ್ದರು.
ಅತ್ಯುತ್ತಮ ಶಿಕ್ಷಕರಿಗೆ ಸನ್ಮಾನಜಿಲ್ಲಾ ಮತ್ತು ತಾಲೂಕು ಮಟ್ಟದ ಅತ್ಯುತ್ತಮ ಶಿಕ್ಷಕರು ಹಾಗೂ ನಿವೃತ್ತ ಶಿಕ್ಷಕರನ್ನು ಸಚಿವರು, ಶಾಸಕರು ಸನ್ಮಾನಿಸಿ ಪ್ರಶಸ್ತಿಪತ್ರಗಳನ್ನು ವಿತರಿಸಿದರು. ಎಸ್‌ಎಸ್ ಎಲ್‌ಸಿಯಲ್ಲಿ ಅ ಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿದ ಸಚಿವರು, ವೈಯಕ್ತಿಕವಾಗಿ ಆರು ವಿದ್ಯಾರ್ಥಿಗಳಿಗೆ ತಲಾ 10 ಸಾವಿರ ರೂ. ಹಾಗೂ ಸಚಿನ್ ಹೊಳಲ ಎಂಬ ಎಸ್‌ಎಸ್‌ಎಲ್‌ಸಿ ಟಾಪರ್ ವಿದ್ಯಾರ್ಥಿಯ ವಿದ್ಯಾಭ್ಯಾಸಕ್ಕೆ ಲಕ್ಷ ರೂ. ಪ್ರೋತ್ಸಾಹಧನ ನೀಡಿದರು.