ಹಾವೇರಿ: ಜಿಲ್ಲೆಯಲ್ಲಿ ಕೋವಿಡ್ ನಾಗಾಲೋಟ ಮುಂದುವರೆದಿದ್ದು, ಇಂದು 300 ಜನರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ.
Advertisement
ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5456 ಕ್ಕೆ ಏರಿಕೆಯಾಗಿದೆ. ಇಂದು ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 214 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಈವರೆಗೆ ಜಿಲ್ಲೆಯಲ್ಲಿ 119 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣದಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 3675 ಆಗಿದೆ. ಇನ್ನೂ ಒಟ್ಟು 1662 ಸಕ್ರಿಯ ಕೋವಿಡ್ 19 ಪ್ರಕರಣಗಳು ಜಿಲ್ಲೆಯಲ್ಲಿವೆ.