ಹಾವೇರಿ: ಮನುಷ್ಯ ಜೀವನದಲ್ಲಿ ಚತುರ್ವಿಧ ಪುರುಷಾರ್ಥಗಳಲ್ಲಿ ಒಂದನ್ನಾದರೂ ಸಂಪಾದಿಸಿ ಕೊಳ್ಳದಿದ್ದರೆ ಜೀವನ ವ್ಯರ್ಥ. ನಮ್ಮ ನಡೆ ನುಡಿಗಳು ಸತ್ಯದ ಪರವಾಗಿರಬೇಕು. ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆಗೊಳ್ಳಲು ಸಾಧ್ಯವಾಗುವುದು ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ| ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು.
Advertisement
ತಾಲೂಕಿನ ನೆಗಳೂರು ಹಿರೇಮಠದಲ್ಲಿ ರವಿವಾರ ಕರ್ತೃ ಗುರುಶಾಂತೇಶ್ವರ ಮಂದಿರದ ನೂತನ ಗೋಪುರ ಉದ್ಘಾಟನೆ, ಕಳಸಾರೋಹಣ, ಸಾಮೂಹಿಕ ವಿವಾಹ, ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.
ಶಕ್ತಿಯಿದ್ದರೆ ಸತ್ಯದ ಜೊತೆ ದೈವಶಕ್ತಿ ಇರುತ್ತದೆ. ನೋಡುವ ದೃಷ್ಟಿ ಸರಿಯಿದ್ದರೆ ಎಲ್ಲವೂ ಒಳ್ಳೆಯದೇ ಆಗುತ್ತದೆ. ಸಂಪತ್ತು ಮತ್ತು ಬಯಕೆ ಹೊಂದಿರುವ ಮನುಷ್ಯ ಮೊದಲು ಧರ್ಮ ಮಾರ್ಗದಲ್ಲಿ ನಡೆಯಬೇಕೆಂದು ಜಗದ್ಗುರು ರೇಣುಕಾಚಾರ್ಯರು ವೀರಶೈವ ಧರ್ಮ ಸಂವಿಧಾನದಲ್ಲಿ ನಿರೂಪಿಸಿದ್ದಾರೆ. ಸಮಾಜದಲ್ಲಿ ಆಗುವ ದುಂದು ವೆಚ್ಚ ತಡೆಗಟ್ಟಲು ಸಾಮೂಹಿಕ ವಿವಾಹ ಸಮಾರಂಭಗಳ ಅವಶ್ಯಕತೆಯಿದೆ. ನೂತನ ದಂಪತಿಗಳ ಬಾಳು ಉಜ್ವಲವಾಗಲೆಂದು ಶುಭ ಹಾರೈಸಿದರು.
Related Articles
Advertisement
ಪವಿತ್ರವಾದ ಗೃಹಸ್ಥಾಶ್ರಮಕ್ಕೆ ಪಾದಾರ್ಪಣೆ ಮಾಡಿದ ನವ ದಂಪತಿಗಳ ಬಾಳು ಉಜ್ವಲವಾಗಲೆಂದು ಬಯಸಿ ಶ್ರೀ ರಂಭಾಪುರಿ ಜಗದ್ಗುರುಗಳ ಅಶೀರ್ವಾದ ಯಾವಾಗಲೂ ನಮಗೆ ಶ್ರೀರಕ್ಷೆಯಾಗಿದೆ ಎಂದರು. ಇದೇ ಸಂದರ್ಭದಲ್ಲಿ 40 ಜನ ಜಂಗಮವಟುಗಳಿಗೆ ಶಿವದೀಕ್ಷಾ ಅಯ್ನಾಚಾರ ನಡೆಯಿತು. ಸಮಾರಂಭದ ನೇತೃತ್ವ ವಹಿಸಿದ ಬಂಕಾಪುರ ಅರಳೆಲೆ ಹಿರೇಮಠದ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಜಗತ್ತಿನಲ್ಲಿ ಗುರು ಶಕ್ತಿಗಿಂತ ಮಿಗಿಲಾದ ಶಕ್ತಿ ಇನ್ನೊಂದಿಲ್ಲ. ಗುರು ಕಾರುಣ್ಯ ವೊಂದಿದ್ದರೆ ಏನೆಲ್ಲ ಸೌಭಾಗ್ಯ ಸಂಪತ್ತು ಪಡೆಯಲು ಸಾಧ್ಯ. ನೆಗಳೂರು ಹಿರೇಮಠದ ಗುರುಶಾಂತೇಶ್ವರ ಶ್ರೀಗಳು ಪರಿಶ್ರಮ ಮತ್ತು ಸಾಧನೆಯಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದರು. ಅಂಗೂರು ಶಿವಯೋಗೀಶ್ವರ ಶಿವಾಚಾರ್ಯರು, ಲಕ್ಷೇ¾ಶ್ವರದ ಮಳೆ ಮಲ್ಲಿಕಾರ್ಜುನ ಶಿವಾಚಾರ್ಯರು, ತುಪ್ಪದ ಕುರಹಟ್ಟಿ ಡಾ| ವಾಗೀಶ ಪಂಡಿತಾರಾಧ್ಯ ಶ್ರೀಗಳು, ಕುಂದಗೋಳದ ಶಿತಿಕಂಠೇಶ್ವರ ಶ್ರೀಗಳು, ಅಮ್ಮಿನಬಾವಿ ಅಭಿನವ ಶಾಂತಲಿಂಗ ಶ್ರೀಗಳು,
ಹಂಪಸಾಗರದ ಅಭಿನವ ಶಿವಲಿಂಗ ರುದ್ರಮುನಿ ಶಿವಾಚಾರ್ಯರು, ಹಾವೇರಿ ಅಭಿನವರುದ್ರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯರು, ಬೆಳಗುಂಪ ಅಭಿನವ ಪರ್ವತೇಶ್ವರ ಶಿವಾಚಾರ್ಯರು, ಕುಂದರಗಿ ವೀರಸಂಗಮೇಶ್ವರ ಶಿವಾಚಾರ್ಯರು, ಹಾವನೂರು ಶಿವಕುಮಾರ ಸ್ವಾಮೀಜಿ ಪಾಲ್ಗೊಂಡಿದ್ದರು.