Advertisement

ಸ್ವೀಪ್‌ ಸಮಿತಿಯಿಂದ ಜಾಗೃತಿಗೆ ಮೊಂಬತ್ತಿ ಬೆಳಕಿನ ನಡಿಗೆ

05:44 PM Apr 18, 2019 | Naveen |

ಹಾವೇರಿ: ಲೋಕಸಭಾ ಸಾರ್ವತ್ರಿಕ ಚುನಾವಣೆ ಮತದಾರರ ಜಾಗೃತಿಗಾಗಿ ಜಿಲ್ಲಾಡಳಿತ ಹಾಗೂ ಸ್ವೀಪ್‌ ಸಮಿತಿಯಿಂದ ನಗರದಲ್ಲಿ ಮೊಂಬತ್ತಿ ಬೆಳಕಿನ ನಡಿಗೆ (ಕ್ಯಾಂಡಲ್‌ ಮಾರ್ಚ್‌) ಕಾರ್ಯಕ್ರಮ ನಡೆಯಿತು.

Advertisement

ತಾಲೂಕು ಪಂಚಾಯಿತಿ ಆವರಣದಲ್ಲಿ ಕ್ಯಾಂಡಲ್‌ ಮಾರ್ಚ್‌ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಧಿಕಾರಿ ಕೃಷ್ಣ ಭಾಜಪೇಯಿ, ಕೇಂದ್ರ ಚುನಾವಣಾ ವೆಚ್ಚ ವೀಕ್ಷಕರಾದ ಹಸನ್‌ ಅಹ್ಮದ್‌, ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿ ಕಾರಿ ಹಾಗೂ ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷೆ ಕೆ.ಲೀಲಾವತಿ ಚಾಲನೆ ನೀಡಿದರು.

ಕ್ಯಾಂಡಲ್‌ಗ‌ಳನ್ನು ಬೆಳಗಿಸಿದ ವಿವಿಧ ಅಧಿಕಾರಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಮಹಿಳಾ
ಸಂಘಟನೆಗಳು, ಸಮಾಜ ಕಲ್ಯಾಣ ಇಲಾಖೆ ಹಾಸ್ಟೇಲ್‌ ವಿದ್ಯಾರ್ಥಿಗಳು ತಾಪಂ ಆವರಣದಿಂದ ಪಿ.ಬಿ.ರಸ್ತೆ ಮಾರ್ಗವಾಗಿ
ಹೊಸಮನಿ ಸಿದ್ದಪ್ಪ ಸರ್ಕಲ್‌ ವರೆಗೆ ಬೀದಿಗಳಲ್ಲಿ ಕ್ಯಾಂಡಲ್‌ ಬೆಳಕು ಚೆಲ್ಲುತ್ತ ಮತದಾನದ ಮಹತ್ವ ಸಾರುವ ಜಾಗೃತಿ ಸಂದೇಶಗಳ ಮೂಲಕ ಮತದಾನದ ಜಾಗೃತಿ ಸಂದೇಶ ತಲುಪಿಸಿದರು. ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಕ್ಯಾಂಡಲ್‌ ಗಳನ್ನು ಉರಿಸಿ, ಮತದಾನ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು. ಜಿಲ್ಲಾಧಿಕಾರಿ ಕೃಷ್ಣ
ಭಾಜಪೇಯಿ ಪ್ರತಿಜ್ಞಾವಿಧಿ  ಬೋಧಿಸಿದರು.

ವಾರ್ತಾಧಿಕಾರಿ ರಂಗನಾಥ್‌, ತಾಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅನ್ನಪೂರ್ಣ ಮುದಕಮ್ಮನವರ, ಚುನಾವಣಾ ತಹಶೀಲ್ದಾರ್‌ ಚಂದ್ರಶೇಖರ, ಸಮಾಜ ಕಲ್ಯಾಣಾಧಿಕಾರಿ ಚೈತ್ರಾ, ಹಿಂದುಳಿದ ವರ್ಗಗಳ ಕಲ್ಯಾಣಾ ಧಿಕಾರಿ ಜಮಖಾನೆ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ
ಅಂದಾನೆಪ್ಪ ವಡಗೇರಿ, ಕ್ಷೇತ್ರ ಶಿಕ್ಷಣಾಧಿಕಾರಿ
ಶಿವಣ್ಣ, ಅಕ್ಷರ ದಾಸೋಹ ಅಧಿಕಾರಿ ಅಡಿಗ, ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ಶಾಖೀರ್‌ ಅಹ್ಮದ್‌, ವಿಕಲಚೇತರ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ ಮಠದ, ವಯಸ್ಕರ ಶಿಕ್ಷಣಾಧಿಕಾರಿ ಎಂ.ಎಚ್‌.ಪಾಟೀಲ ಸೇರಿದಂತೆ ವಿವಿಧ ಅಧಿಕಾರಿಗಳು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next