Advertisement
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಅಧಿಕಾರಿಗಳು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರು ಶಾಲಾ-ಕಾಲೇಜು ಶಿಕ್ಷಕರು ಒಳಗೊಂಡಂತೆ ವಿವಿಧ ಸಂಘ-ಸಂಸ್ಥೆಗಳು ಸಕ್ರೀಯವಾಗಿ ಭಾಗವಹಿಸಿ ಜಾಗೃತಿ ಮೂಡಿಸುತ್ತಿದ್ದಾರೆ. 18 ವರ್ಷ ತುಂಬಿದ ಎಲ್ಲರೂ ಮತದಾರರಾಗಿ ನೋಂದಾಯಿಸಿಕೊಳ್ಳಲು ಅವಕಾಶವಿದೆ ಎಂದು ತಿಳಿಸಿದರು.
Related Articles
ಅರಿವು ಹಾಗೂ ಜಾಗೃತಿ ಮೂಡಿಸಲು ಚುನಾವಣಾ ಜಾಗೃತಿ ಸಮಿತಿ ರಚಿಸಲಾಗಿದೆ. ಜಿಲ್ಲೆಯಲ್ಲಿ 17,239 ವಿಶೇಷ ಚೇತನ ಮತದಾರರಿದ್ದು, ಮತದಾನದಲ್ಲಿ ಪಾಲ್ಗೊಳ್ಳಲು ಸೂಕ್ತ ಸಾರಿಗೆ ವ್ಯವಸ್ಥೆ, ಸುಗಮ ಮತದಾನದಕ್ಕಾಗಿ ಮೂಲ ಸೌಕರ್ಯ ಒದಗಿಸುವ ಕೆಲಸವನ್ನು ಕೈಗೊಳ್ಳಲಾಗಿದೆ. ಮಹಿಳೆಯರಿಗಾಗಿ 12 ಸಖೀ ಮತಗಟ್ಟೆ, ವಿಕಲಚೇತನರಿಗಾಗಿ ವಿಶೇಷ ಮತಗಟ್ಟೆ ಹಾಗೂ ಮಾದರಿ ಮತಗಟ್ಟೆಗಳನ್ನು ವಿಶೇಷ ವಿನ್ಯಾಸಗೊಳಿಸಿ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.
Advertisement
ಕಳೆದ ಡಿಸೆಂಬರ್‌ನಿಂದ ಮತದಾರ ದಿನಾಚರಣೆ ಅಂಗವಾಗಿ ಮತದಾನದ ಮಹತ್ವ ಕುರಿತು ಶಾಲಾ-ಕಾಲೇಜು ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ಸಾಕಷ್ಟು ಜಾಗೃತಿ ಮೂಡಿಸಲಾಗಿದೆ. ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯತಿಗಳಲ್ಲಿ ಅಂತಾರಾಷ್ಟ್ರೀಯ ಮತದಾರರ ದಿನಾಚರಣೆ ಆಚರಣೆ ಮೂಲಕ ಯುವ ಮತದಾರರಿಗೆ ಜಾಗೃತಿ ಮೂಡಿಸಲಾಗಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಮತದಾರರ ಜಾಗೃತಿ ಕುರಿತಂತೆ ಪ್ರಬಂಧ ಹಾಗೂ ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಮತದಾರರಲ್ಲಿ ಇವಿಎಂ, ವಿವಿಪ್ಯಾಟ್ ಬಗೆಗೆ ವಿಶ್ವಾರ್ಹತೆ ಮೂಡಿಸಲು ಸ್ವಅನುಭವದ ಮೂಲಕ ಜಾಗೃತಿ ಮೂಡಿಸಲು ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಸೆಕ್ಟರ್ ಅ ಧಿಕಾರಿಗಳ ಮೂಲಕ ಮತಗಟ್ಟೆಗಳಲ್ಲಿ ಅಣುಕು ಮತದಾನದ ಮೂಲಕ ಪ್ರಾತ್ಯಕ್ಷಿಕೆ ನಡೆಸಲಾಗಿದೆ ಎಂದು ತಿಳಿಸಿದರು.
ಲೋಕಸಭಾ ಚುನಾವಣೆಯಲ್ಲಿ ಪಾಲಕರು ಕಡ್ಡಾಯವಾಗಿ ಮತದಾನದಲ್ಲಿ ಪಾಲ್ಗೊಳ್ಳುವ ಕುರಿತಂತೆ ಅವರ ಮಕ್ಕಳ ಮೂಲಕ ಪಾಲಕರಿಗೆ ಪತ್ರ ಬರೆಸಲು ಪ್ರತಿಜ್ಞಾವಿಧಿ, ಪತ್ರ ಸಂಕಲ್ಪ ಕಾರ್ಯಕ್ರಮ ಶಾಲಾ-ಕಾಲೇಜು ವಿದ್ಯಾರ್ಥಿ ನಿಲಯಗಳ ನಿವಾಸಿ ವಿದ್ಯಾರ್ಥಿಗಳಿಂದ ಕಾರ್ಯಕ್ರಮ ಹಮ್ಮಿಕೊಂಡು ಯಶಸ್ವಿಗೊಳಿಸಲಾಗಿದೆ ಎಂದು ತಿಳಿಸಿದರು.
ವಿವಿಧ ಇಲಾಖೆಗಳ ಸಹಕಾರದೊಂದಿಗೆ ಲೋಕಸಭಾ ಚುನಾವಣೆ ಮತದಾನ ನಡೆಯುವವರೆಗೆ ವಿಶೇಷ ಮತದಾರರ ಜಾಗೃತಿ ಕಾರ್ಯಕ್ರಮವನ್ನು ನಡೆಸಲು ಉದ್ದೇಶಿಸಿದೆ. ಈಗಾಗಲೇ ಫೆಬ್ರುವರಿ 23,24 ಹಾಗೂ ಮಾರ್ಚ್ 2 ಮತ್ತು 3 ರಂದು ಮಿಂಚಿನ ನೋಂದಣಿ ಮೂಲಕ ಹೊಸದಾಗಿ ಮತದಾರರ ಸೇರ್ಪಡೆಗೆ ಕಾರ್ಯಕ್ರಮ ನಡೆಸಲಾಗಿದೆ ಎಂದು ತಿಳಿಸಿದರು.
ಕಳೆದ ಡಿಸೆಂಬರನಿಂದ ಜಿಲ್ಲಾ ಕಾರಾಗೃಹ, ಎನ್‌ಎಸ್‌ಎಸ್ ಶಿಬಿರ, ಬೃಹತ್ ಆರೋಗ್ಯ ಮೇಳ ಇತರ ಕಾರ್ಯಕ್ರಮಗಳಲ್ಲಿ ಮತದಾನ ಜಾಗೃತಿ ಹಾಗೂ ಇವಿಎಂ ಹಾಗೂ ವಿವಿಪ್ಯಾಟ್ ಗಳ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ನಡೆಸಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿ ಕಾರಿ ಕೃಷ್ಣ ಭಾಜಪೇಯಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ ಇದ್ದರು.