Advertisement
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಆರೋಗ್ಯ ಸಚಿವರನ್ನು ಭೇಟಿ ಮಾಡಿ ಕೋವಿಡ್-19ರ ವೈಜ್ಞಾನಿಕ ಪ್ರಗತಿ ಮತ್ತು ಬೂಸ್ಟರ್ ಡೋಸ್ ಕೊಡುವ ಬಗ್ಗೆ ಚರ್ಚಿಸಲು ಗುರುವಾರ ದೆಹಲಿಗೆ ಹೊರಟಿದ್ದೇನೆ. ಡೋಸ್ ನೀಡುವ ಬಗ್ಗೆ ಟಾಸ್ಕ್ ಫೋರ್ಸ್ ಸಮಿತಿಯೊಂದಿಗೆ ಚರ್ಚಿಸುವೆ. ಒಂದು ಡೋಸ್ ಎನ್ ಸಿಬಿಎಸ್ ಗೆ ಕಳುಹಿಸಲಾಗಿದೆ. ಅದರ ವರದಿ ಬಂದ ನಂತರ ಬೂಸ್ಟರ್ ಡೋಸ್ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.
Related Articles
Advertisement
ಕೋವಿಡ್ ಹಿನ್ನೆಲೆಯಲ್ಲಿ ಹೊಸ ತಾಲೂಕಗಳಿಗೆ ಮೂಲಸೌಕರ್ಯ ಒದಗಿಸಲು ತಡವಾಗಿದೆ. ಮುಂದಿನ ದಿನಗಳಲ್ಲಿ ಅವಶ್ಯಕ ಕನಿಷ್ಟ ಸವಲತ್ತು, ಸೌಲಭ್ಯಗಳು, ಕಚೇರಿ ನೀಡುತ್ತೇವೆ ಎಂದರು.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ಮಾಡಿ ಹಲವು ವಿಚಾರ ಚರ್ಚೆ ಮಾಡಿದ್ದಾರೆ. ಜೆಡಿಎಸ್ ಜೊತೆ ಮೈತ್ರಿ ವಿಚಾರವಾಗಿ ರಾಜ್ಯದಲ್ಲಿ ಕುಮಾರಸ್ವಾಮಿ ಹಾಗೂ ಬಿಎಸ್ ವೈ ಚರ್ಚೆ ಮಾಡಿ ಅಂತಿಮ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.
ಪಿಜಿ ವೈದ್ಯರ ಕೋವಿಡ್ ಭತ್ಯೆ ಈಗಾಗಲೇ ಬಿಡುಗಡೆ ಆಗಿದೆ. ಆದರೆ ಸಮರ್ಪಕ ದಾಖಲೆ ಕೊರತೆಯಿಂದ ಭತ್ಯೆ ನೀಡಲಾಗಿಲ್ಲ. ಎರಡು-ಮೂರು ದಿನಗಳಲ್ಲಿ ಎಲ್ಲರಿಗೂ ಭತ್ಯೆ ವಿತರಣೆ ಮಾಡಲಾಗುವುದು ಎಂದರು.
ಗುತ್ತಿಗೆದಾರರಿಗೆ ಟೆಂಡರ್ ಹಂಚಿಕೆ ಮಾಡುವುದು ಮುಖ್ಯ ಕಾರ್ಯದರ್ಶಿ ಅಲ್ಲ. ಹೀಗಾಗಿ ಅವರನ್ನು ತನಿಖೆಗೆ ನೇಮಿಸಲಾಗಿದೆ. ಹಾವೇರಿಯಲ್ಲಿ ಕಣಕ್ಕೆ ಇಳಿದವರು ಬಿಜೆಪಿಯ ಬಂಡಾಯ ಅಭ್ಯರ್ಥಿ ಅಲ್ಲ. ಒಮ್ಮೆ ಕಾಂಗ್ರೆಸ್ ಅಂತಾರೆ. ಇನ್ನೊಮ್ಮೆ ಬಿಜೆಪಿ ಅಭ್ಯರ್ಥಿ ಅಂತಾರೆ. ಅವರಿಂದ ನಮಗೆ ಯಾವುದೇ ಪರಿಣಾಮ ಆಗಲ್ಲ. ನಮ್ಮ ಅಭ್ಯರ್ಥಿ ಪ್ರದೀಪ ಶೆಟ್ಟರ ಪ್ರಥಮ ಪ್ರಾಶಸ್ತ್ಯ ಮತಗಳೊಂದಿಗೆ ಆರಿಸಿ ಬರಲಿದ್ದಾರೆ.
ಇದನ್ನೂ ಓದಿ:ಒಮಿಕ್ರಾನ್ : ಭಾರತೀಯರು ಸುರಕ್ಷಿತ, ಯಾವುದೇ ರೂಪಾಂತರಿಗೂ ಹೆದರಬೇಕಿಲ್ಲ: ಡಾ.ಜಮೀಲ್
ಧಾರವಾಡದಲ್ಲಿ 306 ಜನರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಸುಮಾರು 7ಸಾವಿರ ಜನರ ತಪಾಸಣೆ ಮಾಡಲಾಗಿದೆ. ಏಳು ದಿನಗಳ ನಂತರ ಇಬ್ಬರಿಗೆ ಮಾತ್ರ ಪಾಸಿಟಿವ್ ಬಂದಿದೆ. ಕ್ರಮೇಣ ಇಳಿಕೆ ಆಗುತ್ತಿದೆ. ನಿಗಾ ವಹಿಸಲಾಗಿದೆ. ಭಯ ಪಡುವ ಅವಶ್ಯಕತೆ ಇಲ್ಲ ಎಂದರು.