Advertisement

ಬೂಸ್ಟರ್ ಡೋಸ್ ಕುರಿತು ಕೇಂದ್ರ ಸಚಿವರೊಂದಿಗೆ ಚರ್ಚೆ ನಡೆಸುತ್ತೇವೆ: ಸಿಎಂ ಬೊಮ್ಮಾಯಿ

09:24 AM Dec 01, 2021 | Team Udayavani |

ಹುಬ್ಬಳ್ಳಿ: ಕೋವಿಡ್-19 ಮೂರನೇ ಅಲೆ ಭೀತಿಯ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡುವ ಕುರಿತು ಕೇಂದ್ರ ಆರೋಗ್ಯ ಸಚಿವರೊಂದಿಗೆ ಚರ್ಚಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಆರೋಗ್ಯ ಸಚಿವರನ್ನು ಭೇಟಿ ಮಾಡಿ ಕೋವಿಡ್-19ರ ವೈಜ್ಞಾನಿಕ ಪ್ರಗತಿ ಮತ್ತು ಬೂಸ್ಟರ್ ಡೋಸ್ ಕೊಡುವ ಬಗ್ಗೆ ಚರ್ಚಿಸಲು ಗುರುವಾರ ದೆಹಲಿಗೆ ಹೊರಟಿದ್ದೇನೆ. ಡೋಸ್ ನೀಡುವ ಬಗ್ಗೆ ಟಾಸ್ಕ್ ಫೋರ್ಸ್ ಸಮಿತಿಯೊಂದಿಗೆ ಚರ್ಚಿಸುವೆ. ಒಂದು ಡೋಸ್ ಎನ್ ಸಿಬಿಎಸ್ ಗೆ ಕಳುಹಿಸಲಾಗಿದೆ. ಅದರ ವರದಿ ಬಂದ ನಂತರ ಬೂಸ್ಟರ್ ಡೋಸ್ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

ಕಳೆದ ಬಾರಿಯ ಅನುಭವದಿಂದಾಗಿ ಈ ಬಾರಿ ಕೋವಿಡ್ ವಿಚಾರದಲ್ಲಿ ವಿದೇಶಿಗಳಿಂದ ಬಂದ ಸುಮಾರು 2000ದಿಂದ 2500 ಜನರನ್ನು ಸಂಪೂರ್ಣ ತಪಾಸಣೆ ಮಾಡಬೇಕೆಂದು ನಿರ್ಧಾರ ಮಾಡಿದ್ದೇವೆ. ವಿದೇಶದಿಂದ‌ ಬಂದವರನ್ನು ಒಂದು ವಾರ ಗಮನಿಸುತ್ತೇವೆ. ವಿದೇಶ ಹಾಗೂ ಕೇರಳದಿಂದ ಬಂದವರಿಗೆ ನಿಗಾ ವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕೇರಳ‌ ಗಡಿಗಳಲ್ಲಿ ಹೆಚ್ಚಿನ ತಪಾಸಣೆ ಮಾಡುತ್ತಿದ್ದೇವೆ. ಕೋವಿಡ್ ನಿಯಂತ್ರಿಸಲು ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದೇವೆ. ಲಸಿಕಾಕರಣ ತೀವ್ರಗೊಳಿಸಿದ್ದೇವೆ ಎಂದರು.

ಇದನ್ನೂ ಓದಿ:ಕ್ರೆಡಿಟ್ ಕಾರ್ಡ್ ನಿಂದ ಬೆಂಕಿಪೊಟ್ಟಣ ದರದವರೆಗೆ..: ಇಂದಿನಿಂದ ಏನೇನು ಬದಲಾವಣೆ?

ಲಾಕ್ ಡೌನ್ ಮಾಡುವ ಪ್ರಸಾಪ್ತ ಇಲ್ಲ. ಮಾಡುವುದೂ ಇಲ್ಲ. ಜನರು ಆ ಬಗ್ಗೆ ಆತಂಕಗೊಳ್ಳುವ ಅವಶ್ಯಕತೆ ಇಲ್ಲ. ಕ್ರಿಸ್ ಮಸ್ ಹಾಗೂ ಹೊಸ ವರ್ಷ ಸಂಭ್ರಮಾಚರಣೆ ವೇಳೆ ನಿರ್ಬಂಧ ಹೇರುವ ಬಗ್ಗೆ ತೀರ್ಮಾನ ಮಾಡಿಲ್ಲ ಎಂದರು.

Advertisement

ಕೋವಿಡ್ ಹಿನ್ನೆಲೆಯಲ್ಲಿ ಹೊಸ ತಾಲೂಕಗಳಿಗೆ ಮೂಲಸೌಕರ್ಯ ಒದಗಿಸಲು ತಡವಾಗಿದೆ. ಮುಂದಿನ ದಿನಗಳಲ್ಲಿ ಅವಶ್ಯಕ ಕನಿಷ್ಟ ಸವಲತ್ತು, ಸೌಲಭ್ಯಗಳು, ಕಚೇರಿ ನೀಡುತ್ತೇವೆ ಎಂದರು.

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ಮಾಡಿ ಹಲವು ವಿಚಾರ ಚರ್ಚೆ ಮಾಡಿದ್ದಾರೆ. ಜೆಡಿಎಸ್ ಜೊತೆ ಮೈತ್ರಿ ವಿಚಾರವಾಗಿ ರಾಜ್ಯದಲ್ಲಿ ಕುಮಾರಸ್ವಾಮಿ ಹಾಗೂ ಬಿಎಸ್ ವೈ ಚರ್ಚೆ ಮಾಡಿ ಅಂತಿಮ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.

ಪಿಜಿ ವೈದ್ಯರ ಕೋವಿಡ್ ಭತ್ಯೆ ಈಗಾಗಲೇ ಬಿಡುಗಡೆ ಆಗಿದೆ. ಆದರೆ ಸಮರ್ಪಕ ದಾಖಲೆ ಕೊರತೆಯಿಂದ ಭತ್ಯೆ ನೀಡಲಾಗಿಲ್ಲ. ಎರಡು-ಮೂರು ದಿನಗಳಲ್ಲಿ ಎಲ್ಲರಿಗೂ ಭತ್ಯೆ ವಿತರಣೆ ಮಾಡಲಾಗುವುದು ಎಂದರು.

ಗುತ್ತಿಗೆದಾರರಿಗೆ ಟೆಂಡರ್ ಹಂಚಿಕೆ ಮಾಡುವುದು ಮುಖ್ಯ ಕಾರ್ಯದರ್ಶಿ ಅಲ್ಲ. ಹೀಗಾಗಿ ಅವರನ್ನು ತನಿಖೆಗೆ ನೇಮಿಸಲಾಗಿದೆ. ಹಾವೇರಿಯಲ್ಲಿ ಕಣಕ್ಕೆ ಇಳಿದವರು ಬಿಜೆಪಿಯ ಬಂಡಾಯ ಅಭ್ಯರ್ಥಿ ಅಲ್ಲ. ಒಮ್ಮೆ ಕಾಂಗ್ರೆಸ್ ಅಂತಾರೆ. ಇನ್ನೊಮ್ಮೆ ಬಿಜೆಪಿ ಅಭ್ಯರ್ಥಿ ಅಂತಾರೆ. ಅವರಿಂದ ನಮಗೆ ಯಾವುದೇ ಪರಿಣಾಮ ಆಗಲ್ಲ. ನಮ್ಮ ಅಭ್ಯರ್ಥಿ ಪ್ರದೀಪ ಶೆಟ್ಟರ ಪ್ರಥಮ ಪ್ರಾಶಸ್ತ್ಯ ಮತಗಳೊಂದಿಗೆ ಆರಿಸಿ ಬರಲಿದ್ದಾರೆ.

ಇದನ್ನೂ ಓದಿ:ಒಮಿಕ್ರಾನ್‌ : ಭಾರತೀಯರು ಸುರಕ್ಷಿತ, ಯಾವುದೇ ರೂಪಾಂತರಿಗೂ ಹೆದರಬೇಕಿಲ್ಲ: ಡಾ.ಜಮೀಲ್‌

ಧಾರವಾಡದಲ್ಲಿ 306 ಜನರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಸುಮಾರು 7ಸಾವಿರ ಜನರ ತಪಾಸಣೆ ಮಾಡಲಾಗಿದೆ. ಏಳು ದಿನಗಳ ನಂತರ ಇಬ್ಬರಿಗೆ ಮಾತ್ರ ಪಾಸಿಟಿವ್ ಬಂದಿದೆ. ಕ್ರಮೇಣ ಇಳಿಕೆ ಆಗುತ್ತಿದೆ. ನಿಗಾ ವಹಿಸಲಾಗಿದೆ. ಭಯ ಪಡುವ ಅವಶ್ಯಕತೆ ಇಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next