Advertisement

ಸಿರಿಧಾನ್ಯ ಸೇವನೆ ಆರೋಗ್ಯಕರ

06:13 AM Jan 19, 2019 | Team Udayavani |

ಚನ್ನಗಿರಿ: ಹೆಚ್ಚಿನ ಇಳುವರಿ ಉದ್ದೇಶ, ರಾಸಾಯನಿಕ ಗೊಬ್ಬರ, ಕೀಟನಾಶಕಗಳ ಬಳಕೆ ಅನೇಕ ರೋಗಗಳಿಗೆ ಕಾರಣವಾಗುತ್ತಿವೆ. ಆದ್ದರಿಂದ ಸಾವಯವ ಪದ್ಧತಿಯಲ್ಲಿ ಸಿರಿಧಾನ್ಯ ಬೆಳೆದು ತಿನ್ನುವುದರ ಮುಖಾಂತರ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸಜ್ಜಾಗಿ ಎಂದು ನಿವೃತ್ತ ಕೃಷಿ ಸಹಾಯಕ ನಿರ್ದೇಶಕ ರಾಜಶೇಖರ್‌ ಹೇಳಿದ್ದಾರೆ.

Advertisement

ತಾಲೂಕಿನ ಎಕ್ಕೆಗೊಂದಿ ಗ್ರಾಮದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಹಾಗೂ ಮಹಿಳಾ ಒಕ್ಕೂಟಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಸಿರಿಧಾನ್ಯಗಳ ಮಾಹಿತಿ ಕಾರ್ಯಗಾರವನ್ನು ಉದ್ಘಾಟಿಸಿ, ಅವರು ಮಾತನಾಡಿದರು. ಕೃಷಿ ಉತ್ಪನ್ನಗಳು ಹಾಗೂ ದಿನನಿತ್ಯದ ಆಹಾರ ಪದಾರ್ಥಗಳಲ್ಲಿ ವಿಷಕಾರಿ ಅಂಶ ಸೇರ್ಪಡೆ ಆಗುತ್ತಿರುವುದರಿಂದ ಮನುಷ್ಯ ಸಂಕುಲ ಮುಂದಿನ ದಿನಗಳಲ್ಲಿ ರೋಗಿಷ್ಟರಾಗಿ ಜೀವನ ಸಾಗಿಸುವ ಸ್ಥಿತಿ ಬಂದೊದಗಬಹುದು. ಆದ್ದರಿಂದ ಮುಂಜಾಗ್ರತೆಯಾಗಿ ಸಾವಯವ ಕೃಷಿ ಪದ್ಧತಿಗೆ ಸಿದ್ಧರಾಗಬೇಕು. ಸಿರಿಧಾನ್ಯಗಳ ಬಳಕೆಯಿಂದ ನಾವು ಆರೋಗ್ಯಕರ ಜೀವನ ನಡೆಸಬಹುದಾಗಿದೆ ಎಂದು ಹೇಳಿದರು. ಕೃಷಿ ಜತೆಗೆ ಮನೆಗಳಲ್ಲಿ ಎಮ್ಮೆ, ಆಕಳು, ಎತ್ತು, ಕೋಳಿ, ಕುರಿ, ಮೇಕೆಗಳನ್ನು ಸಾಕುವುದರ ಜೊತೆಗೆ ಹೆಚ್ಚಿನ ಆದಾಯವನ್ನು ಪಡೆದು ಉತ್ತಮ ಜೀವನ ನಡೆಸಬಹುದು ಎಂದರು. ಒಕ್ಕೂಟದ ಅಧ್ಯಕ್ಷೆ ಸುಮಂಗಳ ಅಧ್ಯಕ್ಷತೆ ವಹಿಸಿದ್ದರು. ಕೃಷಿ ಮೇಲ್ವಿಚಾರಕ ರಾಕೇಶ್‌, ಮಂಜುನಾಥ್‌, ಒಕ್ಕೂಟದ ಉಪಾಧ್ಯಕ್ಷ ಶಿವಕುಮಾರ್‌, ನಾಗವೇಣಿ, ಸವಿತಾ, ಬಸಣ್ಣ ಕಲ್ಲೇನಹಳ್ಳಿ, ಶೃತಿ ಗಣೇಶ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next