Advertisement
ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಾರ್ಯಕ್ರಮದಲ್ಲಿ 567ಶ್ರೇಷ್ಠ ಸಾಧಕರಿಗೆ ಸಮ್ಮಾನ, 300ಕ್ಕೂ ಅಧಿಕ ಕಲಾವಿದರಿಂದ ಸಾಂಸ್ಕೃತಿಕ ವೈಭವ, ಹಳ್ಳಿ ಸೊಗಡಿನ ಆಲೆಮನೆ, 100ಕ್ಕೂ ಅಧಿಕ ಪಾರಂಪರಿಕ ವಸ್ತುಗಳು, ದೇಶಿ ಗೋ, 6000 ಹವ್ಯಕ ಕನ್ನಡ ಪುಸ್ತಕಗಳು, 108 ವರ್ಷಗಳ ಪಂಚಾಂಗ ದರ್ಶನಗಳ ಪ್ರದರ್ಶನವಿದೆ ಎಂದು ಮಾಹಿತಿ ನೀಡಿದರು.
ಡಿ.27ರಂದು ನಡೆಯುವ ಉದ್ಘಾಟನ ಕಾರ್ಯಕ್ರಮಕ್ಕೆ ಶ್ರೀರಾಮಚಂದ್ರಾಪುರ ಮಠದ ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಚಾಲನೆ ನೀಡಲಿದ್ದಾರೆ. ಮಂತ್ರಾಲಯದ ಶ್ರೀ ಸುಬುಧೇಂದ್ರ ತೀರ್ಥರು, ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಯದುಗಿರಿ ಯತಿರಾಜಮಠದ ಶ್ರೀ ಯತಿರಾಜ ಜೀಯರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಮಂಕಾಳು ವೈದ್ಯ, ಶಾಸಕ ವಿಜಯೇಂದ್ರ ಸೇರಿ ಇತರರು ಭಾಗವಹಿಸಲಿದ್ದಾರೆ.
Related Articles
ಡಿ.28ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಕ್ಷಾತ್ಕಾರ’ ಕೃತಿ ಬಿಡುಗಡೆಗೊಳಿಸಲಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ದಿನೇಶ್ ಗುಂಡೂರಾವ್, ಶಾಸಕ ಬಿ.ಕೆ.ಹರಿಪ್ರಸಾದ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ, ಉದಯವಾಣಿ’ ಪ್ರಧಾನ ಸಂಪಾದಕ ರವಿಶಂಕರ್ ಕೆ.ಭಟ್, ವಿಶ್ವವಾಣಿ’ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಪಾಲ್ಗೊಳ್ಳಲಿದ್ದಾರೆ.
Advertisement
ಡಿ.29ರಂದು ಸಮಾರೋಪ ಸಮಾರಂಭದಲ್ಲಿ ಸಂಜೆ 5 ಗಂಟೆಗೆ ಸಹಸ್ರಚಂದ್ರ ಸ್ಮರಣ ಸಂಚಿಕೆ ಬಿಡುಗಡೆಗೊಳ್ಳಲಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸಲಿದ್ದಾರೆ. ಈ ವೇಳೆ ಸಮುದಾಯದ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿ ಸರ್ಕಾರಕ್ಕೆ ಸಲ್ಲಿಸಲಿದೆ.