ಮುಂಬಯಿ: ಜಾನ್ಸನ್ ಅಂಡ್ ಜಾನ್ಸನ್ ತನ್ನ ಬೇಬಿ ಪೌಡರ್ ತಯಾರಿಸಲು, ಮಾರಾಟ ಮಾಡಲು ಮತ್ತು ವಿತರಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ .
ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿಯ ಪರವಾನಗಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರಕಾರವು ಹೊರಡಿಸಿದ ಆದೇಶಗಳನ್ನು ಬಾಂಬೆ ಹೈಕೋರ್ಟ್ ರದ್ದುಗೊಳಿಸಿದೆ.
ನ್ಯಾಯಮೂರ್ತಿಗಳಾದ ಗೌತಮ್ ಪಟೇಲ್ ಮತ್ತು ಎಸ್‌ಜಿ ಡಿಗೆ ಅವರ ವಿಭಾಗೀಯ ಪೀಠವು ಡಿಸೆಂಬರ್ 2018 ರಲ್ಲಿ ವಶಪಡಿಸಿಕೊಂಡ ಕಂಪನಿಯ ಬೇಬಿ ಪೌಡರ್‌ನ ಮಾದರಿಯನ್ನು ಪರೀಕ್ಷಿಸಲು ವಿಳಂಬ ಮಾಡಿದ್ದಕ್ಕಾಗಿ ರಾಜ್ಯ ಆಹಾರ ಮತ್ತು ಔಷಧ ಆಡಳಿತ (ಎಫ್‌ಡಿಎ) ವಿರುದ್ಧ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು.
ಸೌಂದರ್ಯವರ್ಧಕ ಉತ್ಪನ್ನಗಳಿಗೆ ಗುಣಮಟ್ಟ ಮತ್ತು ಸುರಕ್ಷತೆಯ ಮಾನದಂಡಗಳನ್ನು ಕಾಪಾಡಿಕೊಳ್ಳುವುದು ಅತ್ಯಂತ ಮಹತ್ವದ್ದಾಗಿದೆ ಎಂದು ಪೀಠವು ಗಮನಿಸಿದ್ದು, ಆದರೆ ಒಂದು ಉತ್ಪನ್ನದಲ್ಲಿ ಸಣ್ಣ ಪ್ರಮಾಣದ ವ್ಯತ್ಯಾಸ ಕಂಡುಬಂದಾಗ ಆ ಕಂಪನಿಯ ಎಲ್ಲಾ ಉತ್ಪನ್ನಗಳನ್ನು ರದ್ದುಪಡಿಸುವುದು ಸಮಂಜಸವಾದುದಲ್ಲ ಎಂದು ಕೋರ್ಟ್ ತಿಳಿಸಿದೆ.