Advertisement

ಕಾರಾಗೃಹಗಳಲ್ಲಿ ವೈದ್ಯಾಧಿಕಾರಿಗಳ ಹುದ್ದೆ ಭರ್ತಿಗೆ ಹೈಕೋರ್ಟ್‌ ನಿರ್ದೇಶನ

12:27 PM Apr 16, 2021 | Team Udayavani |

ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ ಖಾಲಿ ಇರುವ ವೈದ್ಯಾಧಿಕಾರಿ ಹುದ್ದೆಗಳನ್ನುತುಂಬಲು ರಾಜ್ಯ ಸರ್ಕಾರ ಕೂಡಲೇ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕುಎಂದು ಹೈಕೋರ್ಟ್‌ ಸರ್ಕಾರಕ್ಕೆ ನಿರ್ದೇಶಿದೆ.

Advertisement

ಕಾರಾಗೃಹಗಳಲ್ಲಿ ಕೈದಿಗಳಿಗೆ ಅಗತ್ಯಸೌಲಭ್ಯಗಳಿಲ್ಲದೆ ಕೊರೊನಾ ಭಯದಲ್ಲಿ ಜೀವಿಸುತ್ತಿದ್ದಾರೆ ಎಂದು ಆರೋಪಿಸಿ ಗೌರಿಹತ್ಯೆ ಪ್ರಕರಣದ ಆರೋಪಿ ಅಮೋಲ್‌ ಕಾಳೆಸಲ್ಲಿಸಿರುವ ಅರ್ಜಿಯನ್ನು ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಾಗಿ ಪರಿವರ್ತಿಸಿಕೊಂಡಿದೆ.ಈ ಅರ್ಜಿಯನ್ನು ಗುರುವಾರ ಮುಖ್ಯ ನ್ಯಾಯಮೂರ್ತಿ ಎ.ಎಸ್‌ ಓಕ್‌ ನೇತೃತ್ವದ ವಿಭಾಗೀಯನ್ಯಾಯಪೀಠ ವಿಚಾರಣೆ ನಡೆಸಿತು.

ಕೆಲ ಕಾಲ ರಾಜ್ಯಕಾನೂನು ಸೇವಾ ಪ್ರಾಧಿಕಾರದ ಪರ ವಕೀಲ ವಾದಆಲಿಸಿದ ನ್ಯಾಯಪೀಠ, ಸರ್ಕಾರದ ವರದಿಯಂತೆ ರಾಜ್ಯದ 51 ಕಾರಾಗೃಹಗಳ ಪೈಕಿ20 ಕಾರಾಗೃಹಗಳಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಕೈದಿಗಳಿದ್ದಾರೆ. ಜೈಲುಗಳಲ್ಲಿಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

ಆದರೆಸರ್ಕಾರ ನೀಡಿರುವ ವರದಿ ಸಂಪೂರ್ಣವಾಗಿಲ್ಲ. ಇನ್ನೂ ಕೆಲವು ವಿಚಾರಗಳ ಬಗ್ಗೆಸ್ಪಷ್ಟನೆ ಬೇಕಿದೆ. ಈ ನಿಟ್ಟಿನಲ್ಲಿ ಕಾರಾಗೃಹಗಳಲ್ಲಿ ಕೈದಿಗಳ ದಟ್ಟಣೆ ಕಡಿಮೆಗೊಳಿಸುವಕುರಿತು, ಪೌಷ್ಠಿಕ ಆಹಾರ ಪೂರೈಸುವ ಬಗ್ಗೆ ಹಾಗೂ ವೈದ್ಯಕೀಯ ಸೌಲಭ್ಯಗಳ ಬಗ್ಗೆವರದಿ ಸಲ್ಲಿಸಬೇಕು. ಇನ್ನು 86 ವೈದ್ಯಕೀಯ ಹುದ್ದೆಗಳು ಖಾಲಿ ಇರುವ ಕುರಿತುಮಾಹಿತಿ ನೀಡಿದ್ದು, ಅವುಗಳಲ್ಲಿ ವೈದ್ಯಕೀಯ ಸಿಬ್ಬಂದಿ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಕೊರತೆ ಎಷ್ಟಿದೆ. ಮನೋವೈದ್ಯರ ಸಂಖ್ಯೆ ಎಷ್ಟಿದೆ ಎಂಬ ಕುರಿತು ಮಾಹಿತಿ ನೀಡಬೇಕು.

ಖಾಲಿ ಇರುವ ವೈದ್ಯರ, ದಾದಿಯರ ಹುದ್ದೆಗಳನ್ನು ತುಂಬಲು ಸರ್ಕಾರ ಕೂಡಲೇಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಈ ಸಂಬಂಧ ಕೈಗೊಂಡ ಕ್ರಮಗಳ ಕುರಿತು ಮೇತಿಂಗಳ ಒಳಗೆ ವರದಿ ನೀಡುವಂತೆ ಸೂಚಿಸಿ ಜೂನ್‌ 4ಕ್ಕೆ ಮುಂದೂಡಿತು.

Advertisement
Advertisement

Udayavani is now on Telegram. Click here to join our channel and stay updated with the latest news.

Next