Advertisement

ಡಿಕೆಶಿಗೆ ಹೈಕೋರ್ಟ್‌ ನೋಟಿಸ್‌

10:50 PM Jun 28, 2019 | Lakshmi GovindaRaj |

ಬೆಂಗಳೂರು: ಐಟಿ ದಾಳಿಗೆ ಸಂಬಂಧಿಸಿದ ಮೂರು ಪ್ರಕರಣಗಳಲ್ಲಿ “ಆರೋಪಗಳಿಂದ ಕೈಬಿಟ್ಟು’ ಅಧೀನ ನ್ಯಾಯಾಲಯ ನೀಡಿದ್ದ ತೀರ್ಪು ಪ್ರಶ್ನಿಸಿ ಆದಾಯ ತೆರಿಗೆ ಇಲಾಖೆ ಸಲ್ಲಿಸಿದ ಮೇಲ್ಮನವಿ ವಿಚಾರವಾಗಿ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಅವರಿಗೆ ಹೈಕೋರ್ಟ್‌ ಶುಕ್ರವಾರ ನೋಟಿಸ್‌ ಜಾರಿಗೊಳಿಸಿದೆ.

Advertisement

ಈ ಕುರಿತು ಆದಾಯ ತೆರಿಗೆ ಇಲಾಖೆಯ ಸಹಾಯಕ ನಿರ್ದೇಶಕರು ಸಲ್ಲಿಸಿರುವ ಕ್ರಿಮಿನಲ್‌ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾ. ಮೊಹಮ್ಮದ್‌ ನವಾಜ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ಡಿ.ಕೆ. ಶಿವಕುಮಾರ್‌ ಅವರಿಗೆ ನೋಟಿಸ್‌ ಜಾರಿಗೆ ಆದೇಶಿಸಿ ವಿಚಾರಣೆ ಮುಂದೂಡಿತು.

ಬಿಡದಿಯ ಈಗಲ್‌ಟನ್‌ ರೆಸಾರ್ಟ್‌ನಲ್ಲಿ ಐಟಿ ಅಧಿಕಾರಿಗಳು 2017ರ ಆಗಸ್ಟ್‌ 2ರಂದು ದಾಳಿ ನಡೆಸಿದ್ದ ವೇಳೆ ಸಾಕ್ಷ್ಯನಾಶಪಡಿಸಿದರು ಎಂದು ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಆದಾಯ ತೆರಿಗೆ ಇಲಾಖೆ ದೂರು ನೀಡಿತ್ತು. ಇದರ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಡೆಸಿತ್ತು. ಸಾಕ್ಷ್ಯನಾಶ ಆರೋಪಕ್ಕೆ ಸಂಬಂಧಿಸಿದ ಮೂರು ಪ್ರಕರಣಗಳಲ್ಲಿ ಡಿ.ಕೆ. ಶಿವಕುಮಾರ್‌ ಅವರನ್ನು ನ್ಯಾಯಾಲಯ ಆರೋಪ ಮುಕ್ತಗೊಳಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next