Advertisement

Contempt of court ; ಎಂ.ಎಸ್.ಧೋನಿ ಸಲ್ಲಿಸಿದ್ದ ಪ್ರಕರಣ: IPS ಅಧಿಕಾರಿಗೆ ಜೈಲು ಶಿಕ್ಷೆ

04:57 PM Dec 15, 2023 | Team Udayavani |

ಚೆನ್ನೈ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್. ಧೋನಿ ಅವರು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿ ಜಿ ಸಂಪತ್ ಕುಮಾರ್‌ ಅವರಿಗೆ ಮದ್ರಾಸ್ ಹೈಕೋರ್ಟ್ ಶುಕ್ರವಾರ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ.

Advertisement

ನ್ಯಾಯಮೂರ್ತಿಗಳಾದ ಎಸ್. ಎಸ್. ಸುಂದರ್ ಮತ್ತು ಸುಂದರ್ ಮೋಹನ್ ಅವರನ್ನೊಳಗೊಂಡ ವಿಭಾಗೀಯ ಪೀಠ, ಶಿಕ್ಷೆಯ ವಿರುದ್ಧ ಮೇಲ್ಮನವಿ ಸಲ್ಲಿಸಲು ಸಂಪತ್ ಕುಮಾರ್ ಅವರಿಗೆ ಅನುವು ಮಾಡಿಕೊಡಲು ಶಿಕ್ಷೆಯ ಕಾರ್ಯಾಚರಣೆಯನ್ನು 30 ದಿನಗಳವರೆಗೆ ಅಮಾನತುಗೊಳಿಸಿತು.

ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಐಪಿಎಸ್ ಅಧಿಕಾರಿ ವಿರುದ್ಧ ದಿಗ್ಗಜ ಕ್ರಿಕೆಟಿಗ ಧೋನಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ್ದರು.

2014 ರಲ್ಲಿ ಐಪಿಎಲ್ ಬೆಟ್ಟಿಂಗ್‌ ಹಗರಣದಲ್ಲಿ ಹೆಸರಿಸಿದ್ದಕ್ಕಾಗಿ 100 ಕೋಟಿ ರೂ. ನಷ್ಟ ಪರಿಹಾರ ಕೋರಿ ಮಾನನಷ್ಟ ಮೊಕದ್ದಮೆಗೆ ಪ್ರತಿಯಾಗಿ ಸಲ್ಲಿಸಿದ ಪ್ರತಿ ಅಫಿಡವಿಟ್‌ನಲ್ಲಿ ನ್ಯಾಯಾಂಗದ ವಿರುದ್ಧ ಮಾಡಿದ ಟೀಕೆಗಳಿಗಾಗಿ ಸಂಪತ್ ಕುಮಾರ್ ಅವರನ್ನು ಶಿಕ್ಷಿಸಲು ಧೋನಿ ಕೋರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next