Advertisement

H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್‌: ದೇವೇಗೌಡ

09:51 PM Dec 27, 2024 | Team Udayavani |

ಬೆಂಗಳೂರು: ನಮ್ಮ ದೇಶ ಆರ್ಥಿಕವಾಗಿ ಭೀಕರ ಪರಿಸ್ಥಿತಿಯಲ್ಲಿದ್ದಾಗ ಹಣಕಾಸು ಸಚಿವರಾಗಿ ಬಂದ ಡಾ| ಮನಮೋಹನ್‌ ಸಿಂಗ್‌ ಸಮರ್ಥವಾಗಿ ಕೆಲಸ ಮಾಡಿದರು ಹಾಗೂ ಅರ್ಥ ವ್ಯವಸ್ಥೆಯನ್ನು ಸರಿದಾರಿಗೆ ತಂದರು. ಅವರ ನಿಧನ ನನಗೆ ಬಹಳ ನೋವುಂಟು ಮಾಡಿದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹೇಳಿದರು.

Advertisement

ಜೆಡಿಎಸ್‌ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮನಮೋಹನ್‌ ಸಿಂಗ್‌ ಅವರ ಶ್ರದ್ಧಾಂಜಲಿ ಸಮರ್ಪಣೆ ಸಭೆಯಲ್ಲಿ ಮಾತನಾಡಿ, ನಾನು ಸಿಂಗ್‌ ಅವರನ್ನು ಮೊದಲ ಬಾರಿಗೆ ಲೋಕಸಭೆಯಲ್ಲಿ 1991ರಲ್ಲಿ ನೋಡಿದ್ದೆ. ಆಗ ನಾನು ಮೊದಲ ಬಾರಿ ಲೋಕಸಭೆ ಪ್ರವೇಶಿಸಿದ್ದೆ. ಅವರು ಪಿ.ವಿ. ನರಸಿಂಹ ರಾವ್‌ ಸರಕಾರದಲ್ಲಿ ಹಣಕಾಸು ಸಚಿವರಾಗಿದ್ದರು. ನಮ್ಮ ರಾಷ್ಟ್ರದ ಆರ್ಥಿಕ ಪರಿಸ್ಥಿತಿ ಸರಿಪಡಿಸಲು ಅನೇಕ ಪ್ರಯತ್ನಗಳನ್ನು ಮಾಡಿದರು ಎಂದು ನೆನಪಿಸಿಕೊಂಡರು.

ಆ ಸಂದರ್ಭದಲ್ಲಿ ಆರ್ಥಿಕವಾಗಿ ದೇಶದ ಸ್ಥಿತಿ ಬಹಳ ಹದಗೆಟ್ಟಿತ್ತು. ಅದಕ್ಕೂ ಹಿಂದೆ 130 ಟನ್‌ ಚಿನ್ನವನ್ನು ಒತ್ತೆ ಇಡಲಾಗಿತ್ತು. ಅಂತಹ ಭೀಕರ ಪರಿಸ್ಥಿತಿ ಇತ್ತು. ಆ ಸನ್ನಿವೇಶದಲ್ಲಿ ಮನಮೋಹನ್‌ ಸಿಂಗ್‌ ಆರ್ಥಿಕ ಸಚಿವರಾಗಿ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದರು. ಅವರು ಜಾರಿ ಮಾಡಿದ ಉದಾರೀಕರಣ, ಖಾಸಗೀಕರಣ ಮತ್ತು ಜಾಗತೀಕರಣ ನೀತಿಗಳ ಮೂಲಕ ದೇಶಕ್ಕೆ ವಿದೇಶಿ ನೇರ ಬಂಡವಾಳ ದೊಡ್ಡ ಪ್ರಮಾಣದಲ್ಲಿ ಹರಿದು ಬಂತು. ಆರ್ಥಿಕ ವಿಚಾರದಲ್ಲಿ ಅವರು ತುಂಬಾ ಬುದ್ಧಿವಂತರಾಗಿದ್ದರು ಎಂದು ದೇವೇಗೌಡರು ಮನಮೋಹನ್‌ ಸಿಂಗ್‌ ಅವರನ್ನು ಸ್ಮರಿಸಿದರು.

ಮನಮೋಹನ್‌ ಸಿಂಗ್‌ ಅವರನ್ನು ನಾನು ಬಹಳ ಟೀಕೆ ಮಾಡಿದ್ದೆ. ಅವರ ನೀತಿಗಳನ್ನು ಪ್ರಶ್ನೆ ಮಾಡಿದ್ದೆ. ಖಾಸಗೀಕರಣ, ವಿದೇಶದಿಂದ ಹಣ ಬರಲು ನಮ್ಮ ದೇಶದ ಆರ್ಥಿಕ ನೀತಿಗಳನ್ನು ಮಾರ್ಪಾಡು ಮಾಡಿ ಆರ್ಥಿಕ ಸುಧಾರಣೆಗಳನ್ನು ಜಾರಿಗೆ ತಂದರು. ಇದು ಬಹಳ ದೊಡ್ಡ ಬೆಳವಣಿಗೆ ಎಂದು ಮಾಜಿ ಪ್ರಧಾನಿ ಬಣ್ಣಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next