ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ನೇಪಾಳಕ್ಕೆ ತೆರಳಿದ್ದಾರೆ.
Advertisement
ನೇಪಾಳ ಪ್ರಧಾನಿ ಆಹ್ವಾನದ ಮೇರೆಗೆ ನ.30ರಂದು ಕಠ್ಮಂಡುವಿನಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ
ದೇವೇಗೌಡರು ಪಾಲ್ಗೊಳ್ಳಲಿದ್ದಾರೆ.
ಗುರುವಾರ ದೆಹಲಿಯಿಂದ ಕಠ್ಮಂಡುವಿಗೆ ಪ್ರಯಾಣ ಬೆಳೆಸಿರುವ ದೇವೇಗೌಡರು, ಸಮ್ಮೇಳನ ಮುಗಿಸಿ ಶುಕ್ರವಾರ ರಾತ್ರಿ ಅಥವಾ ಶನಿವಾರ ವಾಪಸ್ ಆಗಲಿದ್ದಾರೆ. ಇತ್ತೀಚೆಗೆ ದೇವೇಗೌಡರು ಲಂಡನ್ ಹಾಗೂ ದುಬೈ ಪ್ರವಾಸ ಕೈಗೊಂಡು ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು.