Advertisement
ಬಿಜೆಪಿ ಸರಕಾರವನ್ನು ಉರುಳಿಸಲು ಬಿಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ್‌ಸ್ವಾಮಿ ಹೇಳಿಕೆ ನೀಡಿದ್ದ ಬೆನ್ನಲ್ಲೇ ಇಬ್ಬರು ನಾಯಕರು ದೂರವಾಣಿ ಮೂಲಕ ಮಾತನಾಡಿದ್ದಾರೆ ಎನ್ನಲಾಗಿದ್ದು, ಅದಕ್ಕೆ ಪೂರಕ ಎನ್ನುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೇವೇಗೌಡರೊಂದಿಗೆ ದೂರವಾಣಿಯಲ್ಲಿ ಮಾತನಾಡಿರುವುದನ್ನು ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಹೇಳಿಕೊಂಡಿದ್ದರು.
Related Articles
Advertisement
ಅಧಿಕಾರಿಯ ಎತ್ತಂಡಗಿಯಾದಗಿರಿಯಲ್ಲಿ ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅಲ್ಲಿನ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರೂ ತಲೆ ಕೆಡಿಸಿಕೊಳ್ಳದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೇವೇಗೌಡರ ಮನವಿ ಮೇರೆಗೆ ಯಾದಗಿರಿ ಪೊಲೀಸ್ ಇನ್‌ಸ್ಪೆಕ್ಟರ್ ಅವರನ್ನು ರಜೆ ಮೇಲೆ ಕಳುಹಿಸುವ ಮೂಲಕ ದೇವೇಗೌಡರ ಮನವಿಗೆ ಸ್ಪಂದಿಸಿದ್ದಾರೆ. ಇದು ಇಬ್ಬರು ನಾಯಕರ ನಡುವಿನ ಸಂಬಂಧ ಗಟ್ಟಿಗೊಳ್ಳುತ್ತಿರುವುದಕ್ಕೆ ಪೂರಕ ಎನ್ನುವಂತಿದೆ. ಯಡಿಯೂರಪ್ಪ ಶತ್ರುವಲ್ಲ
ಈ ಎಲ್ಲ ಬೆಳವಣಿಗೆಗೆ ಪೂರಕ ಎನ್ನುವಂತೆ ಮಾಜಿ ಪ್ರಧಾನಿ ದೇವೇಗೌಡ ಅವರು ಯಡಿಯೂರಪ್ಪ ಅವರು ತಮಗೆ ಶಾಶ್ವತ ಶತ್ರುವಲ್ಲ. ಯಾವ ಸಂದರ್ಭದಲ್ಲಿ ಏನು ಬೇಕಾದರೂ ಆಗಬಹುದು. ರಾಜಕೀಯದಲ್ಲಿ ಯಾರೂ ಶತ್ರುಗಳೂ ಅಲ್ಲ, ಯಾರೂ ಮಿತ್ರರೂ ಅಲ್ಲ. ರಾಜಕೀಯದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು. ಯಡಿಯೂರಪ್ಪ, ಸಿದ್ದರಾಮಯ್ಯ ನಮಗೇನು ಆಜನ್ಮ ಶತ್ರುಗಳಲ್ಲ. ಆಯಾ ಸಂದರ್ಭಕ್ಕೆ ಅನುಗುಣವಾಗಿ ರಾಜಕೀಯವಾಗಿ ಮಾತನಾಡಿರುತ್ತೇವೆ. ಕಾಲ ಕಾಲಕ್ಕೆ ಏನು ಆಗಬೇಕೋ ಅದು ಆಗುತ್ತದೆ ಎಂದು ಹೇಳಿದರು. ಇದೇ ವೇಳೆ, ಉಪ ಚುನಾವಣೆ ಫಲಿತಾಂಶ ಬಂದ ಅನಂತರ ಬಿಜೆಪಿಗೆ ಬೆಂಬಲ ನೀಡುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆ ಸಂದರ್ಭದಲ್ಲಿ ಮೂರು ಪಕ್ಷಗಳು ಏನು ನಿರ್ಧಾರ ಮಾಡುತ್ತವೆ ಎಂದು ಈಗಲೇ ಹೇಳಲು ಆಗುವುದಿಲ್ಲ ಎಂದರು. ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಡಿಯೂರಪ್ಪ ಮತ್ತು ನನ್ನ ನಡುವೆ ಯಾವುದೇ ಮಾತುಕತೆಯಾಗಿಲ್ಲ. ಹಾಗಂತ ಅವರ ಜತೆ ಮಾತನಾಡಬಾರದು ಅಂತ ಏನಿಲ್ಲ. ಆದರೆ ಈಗ ಅವರೊಂದಿಗೆ ಮಾತನಾಡುವ ಸಂದರ್ಭ ಬಂದಿಲ್ಲ. ಅನರ್ಹ ಶಾಸಕರ ಪ್ರಕರಣದಲ್ಲಿ ಯಡಿಯೂರಪ್ಪ ಅವರು ಆಡಿದ್ದಾರೆನ್ನಲಾದ ವೀಡಿಯೋ ಸಿಡಿಗೆ ಸುಪ್ರಿಂ ಕೋರ್ಟ್ ಹೆಚ್ಚು ಮಹತ್ವ ನೀಡಿಲ್ಲ ಎನಿಸುತ್ತದೆ. ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಇನ್ನೆರಡು ದಿನದಲ್ಲಿ ತೀರ್ಪು ನೀಡುವ ಸಾಧ್ಯತೆ ಇದೆ ಎಂದು ಹೇಳಿದರು. ರಾಜ್ಯದಲ್ಲಿ ಸಾರ್ವತ್ರಿಕ ಚುನಾವಣೆ ಯಾವಾಗ ಬರುತ್ತದೆಯೋ ಗೊತ್ತಿಲ್ಲ. ನಾವು ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದೇನೆ. ಹೀಗಾಗಿ ಯಡಿಯೂರಪ್ಪ ಪರ, ಸಿದ್ದರಾಮಯ್ಯ ವಿರುದ್ಧ ಅಂತ ಮಾತನಾಡುವುದು ಸರಿಯಲ್ಲ. ಮಹಾರಾಷ್ಟ್ರದಲ್ಲಿ ಈಗ ಏನಾಗಿದೆ ಎಂದು ಎಲ್ಲರಿಗೂ ಗೊತ್ತಿದೆ. ಈಗ ಎರಡೂ ಪಕ್ಷಗಳ ನಾಯಕರ ಜತೆ ಮಾತನಾಡುವ ಆವಶ್ಯಕತೆಯಿಲ್ಲ. ಯಡಿಯೂರಪ್ಪ ತಮ್ಮ ಪಕ್ಷದ ಶಾಸಕರ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಅದು ರಾಜಕೀಯ ವಿಷಯ ಎಂದು ಹೇಳಿದರು. ಸಿಎಂಗೆ ಅಭಿನಂದನೆ
ಯಾದಗಿರಿಯಲ್ಲಿ ತಮ್ಮ ಪಕ್ಷದ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸಿದ್ದ ಯಾದಗಿರಿ ಸಿಟಿ ಸ್ಟೇಶನ್ ಪಿಎಸ್‌ಐ ಬಾಪುಗೌಡ ಪಾಟೀಲ್ ಅವರನ್ನು ವರ್ಗಾವಣೆ ಮಾಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದೆ. ಅವರು ಅದಕ್ಕೆ ಸ್ಪಂದಿಸಿ ಕ್ರಮ ಕೈಗೊಂಡಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು. ಮುಖ್ಯಮಂತ್ರಿಯವರು ರಾಜ್ಯದ ಜನತೆಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಮಹಿಳೆಯರು, ಮಕ್ಕಳು ಸಹಿತ ಪೊಲೀಸರಿಂದ ಯಾರ ಮೇಲೆಯೂ ದೌರ್ಜನ್ಯ ನಡೆಯದಂತೆ ನೋಡಿಕೊಳ್ಳಬೇಕು. ಅದಕ್ಕೆ ಸ್ಪಂದಿಸಿ ಯಡಿಯೂರಪ್ಪ ಕ್ರಮ ಕೈಗೊಂಡಿದ್ದಾರೆ. ಇದರಿಂದ ಸಂತೋಷವಾಗಿದೆ. ಇದರಿಂದ ಜೆಡಿಎಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಬಾರದು. ಪೊಲೀಸ್ ಅಧಿಕಾರಿ ಉತ್ಸಾಹದಿಂದ ಕೆಲಸ ಮಾಡಿದ್ದಾರೆ. ಇದರಲ್ಲಿ ರಾಜಕೀಯ ಲಾಭ-ನಷ್ಟದ ಲೆಕ್ಕ ನೋಡಬಾರದು. ಕಾರ್ಯಕರ್ತರು ಶಾಂತಿ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ. ದೂರವಾಣಿ ಮಾತುಕತೆ ಸಿಎಂ ನಿರಾಕರಣೆ
ಮಾಜಿ ಪ್ರಧಾನಿ ದೇವೇಗೌಡರ ಜೊತೆಗೆ ದೂರವಾಣಿಯಲ್ಲಿ ಮಾತನಾಡಿದ್ದೇನೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಈ ಕುರಿತು ತಮ್ಮ ನಿವಾಸದಲ್ಲಿ ಬುಧವಾರ ಪ್ರತಿಕ್ರಿಯೆ ನೀಡಿದ ಅವರು, ದೇವೇಗೌಡರು ದೂರವಾಣಿ ಕರೆ ಮಾಡಿದ್ದರು ಎನ್ನುವುದರಲ್ಲಿ ಯಾವುದೇ ಸತ್ಯಾಂಶ ಇಲ್ಲ. ಮಾಜಿ ಪ್ರಧಾನಿಯಾಗಿ ದೇವೇಗೌಡರಿಗೆ ಯಾವುದು ಸರಿ ಯಾವುದು ತಪ್ಪು ಎನ್ನುವ ತೀರ್ಮಾನ ಮಾಡುವ ಶಕ್ತಿ ಇದೆ. ನಾನು ದೇವೇಗೌಡರ ಹೆಸರನ್ನು ಯಾವುದೇ ಸಂದರ್ಭದಲ್ಲಯೂ ಪ್ರಸ್ತಾವ ಮಾಡಿಲ್ಲ ಎಂದು ಹೇಳಿದರು. ಇದೇ ವೇಳೆ ಯಾದಗಿರಿ ಪೊಲೀಸ್ ಠಾಣೆ ಪೊಲಿಸ್ ಸಬ್ ಇನ್‌ಸ್ಪೆಕ್ಟರ್‌ರನ್ನು ವರ್ಗಾವಣೆ ಮಾಡಲಾಗಿದೆ. ಅವರನ್ನು ರಜೆ ಮೇಲೆ ಕಳುಹಿಸಲಾಗಿದ್ದು, ಅವರು ಯಾದಗಿರಿಯಿಂ ಬೇರೆ ಕಡೆಗೆ ಹೋಗುತ್ತಾರೆ. ದೇವೇಗೌಡರು ಮಾಜಿ ಪ್ರಧಾನಿಗಳು ಈ ಕ್ರಮವನ್ನು ಅವರು ಒಪ್ಪಿಕೊಳ್ಳುತ್ತಾರೆ ಎಂಬ ವಿಶ್ವಾಸ ಇದೆ ಎಂದು ಹೇಳಿದರು.