Advertisement
ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಹಮ್ಮಿಕೊಂಡಿದ್ದ ಜನತಾ ಜಲಧಾರೆ ಕಾರ್ಯಕ್ರಮದ ವೇಳೆ ಗವಿಗಂಗಾಧರ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಜಲಧಾರೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಈಗಾಗಲೇ ನೀರಿಗಾಗಿ ಸಾಕಷ್ಟು ಕಷ್ಟ ಇದೆ ಟ್ಯಾಂಕರ್ ನೀರನ್ನು ತರಿಸಲಾಗುತ್ತಿದೆ. ಮುಂದಿನ ದಿನಗಳು ಇನ್ನೂ ಕಷ್ಟಕರವಾಗಿರಲಿದೆ. ಈ ಸಮಸ್ಯೆಗಳನ್ನು ಪರಿಹಾರ ಮಾಡಬೇಕು ಎಂದರು.
Related Articles
Advertisement
ಧರ್ಮ ಬೇಕಾ? ಜೀವನಾ ಬೇಕಾ? ಜನರನ್ನು ಪ್ರಶ್ನಿಸಿದ ಹೆಚ್.ಡಿ.ಕೆ :
ಬೆಂಗಳೂರು: ಧರ್ಮದ ಹೆಸರಿನಲ್ಲಿ ನಿಮ್ಮನ್ನು ದಾರಿ ತಪ್ಪಿಸಲಾಗುತ್ತಿದೆ. ನಿಮಗೆ ಧರ್ಮ ಬೇಕಾ? ಜೀವನ ಬೇಕಾ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಜನರನ್ನು ಪ್ರಶ್ನೆ ಮಾಡಿದ್ದಾರೆ.
ಧರ್ಮವನ್ನು ಮನೆಯಲ್ಲಿ ಇಟ್ಟುಕೊಳ್ಳೋಣ. ಬೀದಿಯಲ್ಲಿ ರಕ್ತದ ಓಕುಳಿ ಹರಿಸುವುದು ಬೇಡ ಎಂದು ಯುವಕರಿಗೆ ಮಾಜಿ ಹೆಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದರು.
ಈಗಾಗಲೇ ಎರಡು ಬಾರಿ ನಾನು ನಮ್ಮ ತಂದೆ-ತಾಯಿಗಳ ಪುಣ್ಯದಿಂದ ಮುಖ್ಯಮಂತ್ರಿ ಆಗಿದ್ದೇನೆ. ಮತ್ತೆ ಸಿಎಂ ಆಗಬೇಕು ಅನ್ನೋದು ಮುಖ್ಯ ಅಲ್ಲ. ಇಂದು ಬೆಳಗ್ಗೆ ಒಂದು ಚಾನಲ್ʼನಲ್ಲಿ ಶಾಲಾ ಮಕ್ಕಳು ಅನುಭವಿಸುತ್ತಿರುವ ಹಿಂಸೆಯನ್ನು ನೋಡಿದ್ದೇನೆ. ಮಹಾಲಕ್ಷ್ಮಿ ಲೇಔಟ್ʼನಲ್ಲಿ ಖಾಸಗಿ ಶಾಲೆಯ ಅವ್ಯವಸ್ಥೆಯನ್ನು ಆ ವಾಹಿನಿ ಹೊರಗಿಟ್ಟಿದೆ. ಹಲವಾರು ಶಾಲೆಗಳಲ್ಲಿ ಇಂತಾ ವ್ಯವಸ್ಥೆ ಇದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣಗೆ ಸವಾಲು :
ತಾಕತ್ತು ಇದ್ದರೆ ಸಚಿವ ಡಾ.ಅಶ್ವತ್ಥನಾರಾಯಣ ಅವರು ನನ್ನ ವಿರುದ್ಧ ದಾಖಲೆ ಬಿಡುಗಡೆ ಮಾಡಲಿ ಎಂದು ಇದೇ ವೇಳೆ ಹೆಚ್.ಡಿ.ಕುಮಾರಸ್ವಾಮಿ ನೇರ ಸವಾಲು ಹಾಕಿದರು.
ನನ್ನ ವಿರುದ್ಧ ಏನೇ ದಾಖಲೆ ಇದ್ದರೂ ಬಿಡುಗಡೆ ಮಾಡಲಿ. ನಾನು ಸಮ್ಮಿಶ್ರ ಸರ್ಕಾರದಲ್ಲಿ ಅವರ ರೀತಿ ಲೂಟಿ ಹೊಡೆದಿಲ್ಲ. ಲೂಟಿ ಮಾಡ್ತಿರುವವರು ಅವರು. ಅವರಿಗೆ ತಾಕತ್ತು ಇದ್ದರೆ ನಾಳೆ ಬೆಳಗ್ಗೆಯೇ ನನ್ನ ವಿರುದ್ಧದ ದಾಖಲೆ ಬಿಡುಗಡೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿಗಳು ಸವಾಲು ಹಾಕಿದರು.
ಇದನ್ನೂ ಓದಿ :ನ್ಯಾಯಾಂಗದ ಬಗ್ಗೆ ಗೌರವವಿದೆ, ಆದರೆ ಲಕ್ಷ್ಮಣ ರೇಖೆ ದಾಟುವಂತಿಲ್ಲ: ಸುಪ್ರೀಂಗೆ ಸಚಿವ ರಿಜಿಜು
ರವೀಂದ್ರನಾಥ್ ರಾಜೀನಾಮೆ ಅಂಗೀಕಾರ ಬೇಡ :
ಐಪಿಎಸ್ ಅಧಿಕಾರಿ ರವೀಂದ್ರನಾಥ್ ರಾಜೀನಾಮೆಯನ್ನು ಸರ್ಕಾರ ಅಂಗೀಕಾರ ಮಾಡಬಾರದು. ಸರ್ಕಾರದ ನಡವಳಿಕೆ ಖಂಡಿಸಿ ಅವರು ರಾಜೀನಾಮೆ ನೀಡಿದ್ದಾರೆ. ಅನೇಕ ಜನ ನಕಲಿ ಮೀಸಲಾತಿ ಸರ್ಟಿಫಿಕೇಟ್ ಪಡೆದಿದ್ದರು. ಇದನ್ನು ತನಿಖೆ ಮಾಡಲು ಹೋದರೆ ವರ್ಗಾವಣೆ ಮಾಡಿದ್ದಾರೆ. ಸಿಎಂ ರಾಜಕೀಯ ಕಾರ್ಯದರ್ಶಿ ಬಗ್ಗೆ ಸಿದ್ದರಾಮಯ್ಯ ಅಧಿವೇಶನದಲ್ಲಿ ಭಾಷಣ ಮಾಡಿದ್ದರು. ಸಿದ್ದರಾಮಯ್ಯ ಅವಧಿಯಲ್ಲಿ ನಕಲಿ ದಾಖಲಾತಿ ಕೊಟ್ಟು ಪೊಲೀಸ್ ಅಧಿಕಾರಿಯಾಗಿದ್ದ ಕೆಂಪಯ್ಯ ಆಯಕಟ್ಟಿನ ಅಧಿಕಾರ ಪಡೆದಿದ್ದರು. ಅಂತಹವರಿಗೆ ಪೊಲೀಸ್ ಇಲಾಖೆಯ ಜವಾಬ್ದಾರಿ ಕೊಟ್ಟಿದ್ದರು. ಸಿದ್ದರಾಮಯ್ಯಗೆ ಈ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ ಎಂದು ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.
ರಾಜ್ಯದಿಂದ 25 ನಪುಂಸಕರ ಆಯ್ಕೆ:
ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಮಾತನಾಡಿ, “ರಾಜ್ಯದಿಂದ ಲೋಕಸಭೆಗೆ ಇಪ್ಪತ್ತೈದು ಜನ ನಪುಂಸಕರನ್ನು ಆರಿಸಿ ಕಳಿಸಿದ್ದೀರಾ? ಅವರೆಲ್ಲಾ ಏನು ಮಾಡುತ್ತಿದಾರೆ, ಮೋದಿ ಮೋದಿ ಅಂತಾ ದಿನವಿಡೀ ಜಪ ಮಾಡುತ್ತಾ ಇದ್ದಾರೆ” ಎಂದು ವ್ಯಂಗ್ಯವಾಡಿದರು.
ರಾಜ್ಯಾದ್ಯಂತ ನಾನು ಸುತ್ತಾಡಿ ಕೆಲಸ ಮಾಡುತ್ತಿದ್ದೇನೆ. ನೂರಕ್ಕೆ ನೂರರಷ್ಟು ಈ ಪಕ್ಷ ಅಧಿಕಾರಕ್ಕೆ ಬರುತ್ತದೆ ಕರ್ನಾಟಕದ ಜನ ಎರಡೂ ಸಿನಿಮಾ ನೋಡಿ ಆಗಿದೆ ಒಂದು ಮೋದಿ ಸಿನಿಮಾ,ಮತ್ತೊಂದು ಸೋನಿಯಾ ಸಿನಿಮಾ. ಮುಂದೆ ಜೆಡಿಎಸ್ ಅನ್ನು ಜನ ಆಯ್ಕೆ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹೆಚ್ʼಡಿಕೆ ಸಿಎಂ ಆಗುವುದು ನಿಶ್ಚಿತ:
ವಿಧಾನ ಪರಿಷತ್ ಮಾಜಿ ಸದಸ್ಯ ಟಿ.ಎ. ಶರವಣ ಮಾತನಾಡಿ, ಜನತಾ ಜಲಧಾರೆ ಕಾರ್ಯಕ್ರಮ ಮೇ 13 ರಂದು ದೊಡ್ಡಮಟ್ಟದಲ್ಲಿ ನಡೆಯುತ್ತದೆ. ಅದಕ್ಕೆ ಐದರಿಂದ ಆರು ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಜಲಧಾರೆ ಕಾರ್ಯಕ್ರಮ ಆರಂಭವಾದ ದಿನದಿಂದಲೂ ಜನ ಬೆಂಬಲ ಅಭೂತಪೂರ್ವ ವಾಗಿ ಸಿಗುತ್ತಾ ಇದೆ ಎಂದರು.