Advertisement
ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಅಂಗವಾಗಿ ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಮಹಾಧಿವೇಶನದಲ್ಲಿ ಮಾತನಾಡಿದ ಅವರು, ನಮ್ಮ ಕಾರ್ಯಕರ್ತರು, ಮುಖಂಡರು ದೆಹಲಿಯಲ್ಲಿ ಕೇಜ್ರಿàವಾಲ್ ನೋಡಿ ಪಕ್ಷ ಕಟ್ಟುವ ಸಂಕಲ್ಪ ತೊಡಬೇಕು ಎಂದು ಕರೆ ನೀಡಿದರು.
Related Articles
Advertisement
1989 ರಲ್ಲಿ ಪಕ್ಷದಿಂದ ನನ್ನನ್ನು ಹೊರಹಾಕಲಾಗಿತ್ತು. ನನ್ನ ಜತೆಗಿದ್ದ ಎಲ್ಲ ಸ್ನೇಹಿತರೂ ಹೊರಟುಹೋಗಿದ್ದರು. 1994 ರಲ್ಲಿ ಮತ್ತೆ ಪಕ್ಷದ ರಾಜ್ಯಾಧ್ಯಕ್ಷನಾಗಿ 115 ಸೀಟುಗಳೊಂದಿಗೆ ಪಕ್ಷವನ್ನು ಅಧಿಕಾರಕ್ಕೆ ತಂದೆ. ಆಗ ಯಾರೂ ಪಕ್ಷ ಕಟ್ಟಲು ನನಗೆ ನಯಾಪೈಸೆ ಕೊಡಲಿಲ್ಲ, ಸಿಂದ್ಯಾ, ಜೀವ್‌ರಾಜ್ ಆಳ್ವಾ, ಜಾಲಪ್ಪ ಅವರು ತಲಾ ಹತ್ತು ಲಕ್ಷ ರೂ. ನೀಡಿದ್ದರು ಅಷ್ಟೇ. ಆದರೆ ಪಕ್ಷ ಕಟ್ಟಿ ಮತ್ತೆ ಅಧಿಕಾರಕ್ಕೆ ತಂದು ಜನರ ಆಶೀರ್ವಾದದಿಂದ ಪ್ರಧಾನಿಯಾಗಿಯೂ ಕೆಲಸ ಮಾಡಿದೆ. ನನಗೆ ಸೋಲು-ಗೆಲುವು ಹೊಸದಲ್ಲ, ಪಕ್ಷ ಕಟ್ಟುವುದು ಹೊಸದಲ್ಲ ಎಂದು ತಿಳಿಸಿದರು.
ಪಕ್ಷದ ಕಾರ್ಯಕರ್ತರು ಮುಖಂಡರು ಧೃತಿಗೆಡುವ ಅಗತ್ಯವಿಲ್ಲ. ನಾನು ನಿಮ್ಮೊಂದಿಗಿದ್ದೇನೆ. ಪಕ್ಷದ ಕಾರ್ಯಕರ್ತರಿಗಾಗಿ ನಾನು ಎಲ್ಲವನ್ನೂ ತ್ಯಾಗ ಮಾಡಲು ಸಿದ್ಧ ಎಂದು ಹೇಳಿದರು.
ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಮಾತನಾಡಿ, ಜೆಡಿಎಸ್ ಪಕ್ಷವು ಎಚ್.ಡಿ.ದೇವೇಗೌಡರ ಶ್ರಮದಿಂದ ಉಳಿದಿದೆ. 87 ನೇ ವಯಸ್ಸಿನಲ್ಲಿಯೂ ಪಕ್ಷ ಕಟ್ಟಲು ಬೀದಿಯಲ್ಲಿ ನಿಂತು ಹೋರಾಟ ಮಾಡುತ್ತಿದ್ದಾರೆ. ಅವರು ನಮ್ಮ ಪಕ್ಷದ ಶಕ್ತಿ. ಅವರ ಮಾರ್ಗದರ್ಶನದಲ್ಲಿ ಮತ್ತೆ ಪಕ್ಷ ಅಧಿಕಾರಕ್ಕೆ ತರಬೇಕು ಎಂದು ತಿಳಿಸಿದರು.
ಜೆಡಿಎಸ್ ಕೇವಲ ಕರ್ನಾಟಕಕ್ಕೆ ಸೀಮಿತವಲ್ಲ. ಕೇರಳ, ಮಹಾರಾಷ್ಟ್ರ, ಗುಜರಾತ್, ಹರಿಯಾಣ, ಉತ್ತರಪ್ರದೇಶ ಸೇರಿ ದೇಶಾದ್ಯಂತ ಜೆಡಿಎಸ್‌ಗೆ ಶಕ್ತಿಯಿದೆ. ಹದಿನಾಲ್ಕು ತಿಂಗಳು ಕುಮಾರಸ್ವಾಮಿ ನೇತೃತ್ವದ ಸರ್ಕಾರ ನೀಡಿರುವ ಸಾಧನೆ ಕಡಿಮೆಯೇನಲ್ಲ ಎಂದು ಹೇಳಿದರು.
ಮಾಜಿ ಸಚಿವ ಬಸವರಾಜ ಹೊರಟ್ಟಿ ಮಾತನಾಡಿ,ಜನತಾಪರಿವಾರದಲ್ಲಿದ್ದು ರಾಜಕೀಯವಾಗಿ ತಟಸ್ಥರಾಗಿರುವವರನ್ನು ಮತ್ತೆ ಪಕ್ಷಕ್ಕೆ ಕರೆತರಬೇಕು. ಚುನಾವಣೆ ಬಂದಾಗ ಮಾತ್ರ ಪಕ್ಷ ಸಂಘಟನೆ ಮಾಡದೆ ನಿರಂತರವಾಗಿ ತಾಲೂಕು, ಜಿಲ್ಲಾ ಮತ್ತು ರಾಜ್ಯ ಘಟಕ ಪಕ್ಷ ಸಂಘಟನೆಯಲ್ಲಿ ತೊಡಗಬೇಕು ಎಂದು ಸಲಹೆ ನೀಡಿದರು.
ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್.ವಿ.ದತ್ತಾ ಮಾತನಾಡಿ, ದೆಹಲಿಯಲ್ಲಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್‌ಗೆ ಸೆಡ್ಡು ಹೊಡೆದು ಆಮ್ ಆದ್ಮಿ ಪಾರ್ಟಿ ಮೂರನೇ ಬಾರಿಗೆ ಗೆಲುವು ಸಾಧಿಸಿರುವುದು ಜೆಡಿಎಸ್‌ಗೆ ಸ್ಪೂರ್ತಿ. ಪ್ರಾದೇಶಿಕ ಪಕ್ಷಗಳಿಗೆ ಜನ ಮನ್ನಣೆ ಇದೆ ಎಂಬುದು ಇದರಿಂದ ಸಾಬೀತಾಗಿದೆ. ರಾಜ್ಯದಲ್ಲಿಯೂ ಜೆಡಿಎಸ್‌ಗೆ ಭವಿಷ್ಯವಿದೆ ಎಂದು ಹೇಳಿದರು.
ಕೇರಳದಲ್ಲಿ ಸಚಿವರಾಗಿರುವ ಮ್ಯಾಥೂ ಥಾಮಸ್, ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಮಾಜಿ ಸಚಿವರಾದ ಎಚ್.ಡಿ.ರೇವಣ್ಣ, ಲೀಲಾದೇವಿ ಆರ್.ಪ್ರಸಾದ್, ಎಂ.ಎಂ.ನಬಿ, ಕೋನರೆಡ್ಡಿ, ಶೀಲಾನಾಯಕ್, ವಿಧಾನಪರಿಷತ್ ಸದಸ್ಯರಾದ ಬಿ.ಎಂ.ಫರೂಕ್, ರಮೇಶ್‌ಗೌಡ, ಆರ್.ಪ್ರಕಾಶ್ ಉಪಸ್ಥಿತರಿದ್ದರು.
ನಿರ್ಣಯಮಹಾಧಿವೇಶನದಲ್ಲಿ ಆರ್ಥಿಕ ಹಾಗೂ ರಾಜಕೀಯ ಸೇರಿ ನಾಲ್ಕು ನಿರ್ಣಗಳನ್ನು ಅಂಗೀಕರಿಸಲಾಯಿತು. ಆರ್ಥಿಕ ನಿರ್ಣಯದಲ್ಲಿ ದೇಶದ ಆರ್ಥಿಕ ವ್ಯವಸ್ಥೆ ಕುಸಿದಿದ್ದು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಆರ್ಥಿಕ ನೀತಿ ಇದಕ್ಕೆ ಕಾರಣ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿ, ಉದ್ಯೋಗ ಸೃಷ್ಟಿ ಆಗುತ್ತಿಲ್ಲ. ಮಧ್ಯಮ ಹಾಗೂ ಬಡವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದೇಶದ ಆರ್ಥಿಕ ಚೇತರಿಕೆಗೆ ಕೇಂದ್ರ ಸರ್ಕಾರ ನೀತಿ ರೂಪಿಸಬೇಕು. ಕಾರ್ಮಿಕ, ಕೈಗಾರಿಕಾ, ಕೃಷಿ ಕಲ್ಯಾಣ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ. ರಾಜಕೀಯ ನಿರ್ಣಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜನ ಹಾಗೂ ದೇಶ ವಿರೋಧಿ. ದೇಶಾದ್ಯಂತ ಸಿಎಎ ವಿರುದ್ಧ ಹೋರಾಟಗಳು ನಡೆಯುತ್ತಿವೆ. ದೇಶದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಪ್ರಸಕ್ತ ಸನ್ನಿವೇಶದಲ್ಲಿ ಪ್ರಾದೇಶಿಕ ಪಕ್ಷಗಳು, ಜಾತ್ಯತೀತ ಶಕ್ತಿಗಳು ಒಂದಾಗಿ ಹೋರಾಟ ಮಾಡಬೇಕು. ಕೇಂದ್ರ ಸರ್ಕಾರವು ಜನರ ಭಾವನೆಗೆ ಬೆಲೆ ಕೊಟ್ಟು ತಕ್ಷಣ ಸಿಎಎ ಕಾಯ್ದೆ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಲಾಗಿದೆ.